ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿದ್ದರು.
ದುರದೃಷ್ಟಕರ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಜತೆಗೆ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಭಾರತ ಸರ್ಕಾರವು ಸಾಧ್ಯವಿರುವ ಎಲ್ಲಸಹಾಯವನ್ನು ನೀಡಬೇಕು ಎಂದು ಪ್ರಧಾನಿ ನಿರ್ದೇಶನ ನೀಡಿದರು. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರು ತಕ್ಷ ಣ ಕುವೈತ್‌ಗೆ ತೆರಳಿ ಪರಿಹಾರ ಕ್ರಮಗಳ ಮೇಲ್ವಿಚಾರಣೆ ನಡೆಸಬೇಕು ಮತ್ತು ಮೃತ ದೇಹಗಳನ್ನು ತ್ವರಿತವಾಗಿ ಸ್ವದೇಶಕ್ಕೆ ಕಳುಹಿಸಲು ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.
ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತ ಭಾರತೀಯ ಪ್ರಜೆಗಳ ಕುಟುಂಬಗಳಿಗೆ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದರು.
ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಕೀರ್ತಿವರ್ಧನ್ ಸಿಂಗ್, ಪ್ರಧಾನ ಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಮೋದ್ ಕುಮಾರ್ ಮಿಶ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಶ್ರೀ ವಿನಯ್ ಕ್ವಾತ್ರಾ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿಉಪಸ್ಥಿತರಿದ್ದರು.