ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಅವರು ಪ್ರಧಾನಮಂತ್ರಿ ಕಾರ್ಯಾಲಯದ ಇತರ ಅಧಿಕಾರಿಗಳೊಂದಿಗೆ ಸಂವಿಧಾನ ದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿದರು.
Xನ ಪೋಸ್ಟ್ ನಲ್ಲಿ, ಪ್ರಧಾನ ಮಂತ್ರಿಯವರ ಕಚೇರಿಯ ಹ್ಯಾಂಡಲ್:
"ಸಂವಿಧಾನ ದಿನವಾದ ಇಂದು, ಪೀಠಿಕೆ ವಾಚನವು ಪ್ರಧಾನಿಯವರ ಕಚೇರಿಯಲ್ಲಿ ನಡೆಯಿತು.
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರಾದ ಡಾ.ಪಿ.ಕೆ.ಮಿಶ್ರಾ, ಇತರ ಅಧಿಕಾರಿಗಳು ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಪೀಠಿಕೆಯನ್ನು ಓದಿದರು" ಎಂದು ಹೇಳಿದೆ.