ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತೀಯ ಪ್ರಜಾಪ್ರಭುತ್ವಕ್ಕೆ ಬಲವಾದ ಅಡಿಪಾಯ ಹಾಕುವಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಹೀಗೆ ಬರೆದಿದ್ದಾರೆ:
"ಭಾರತದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳು. ಸಂವಿಧಾನ ಸಭೆಯ ಅಧ್ಯಕ್ಷರಾಗಿ, ಅವರು ಭಾರತೀಯ ಪ್ರಜಾಪ್ರಭುತ್ವದ ಬಲವಾದ ಅಡಿಪಾಯವನ್ನು ಹಾಕುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಂದು, ನಾವೆಲ್ಲರೂ ಸಂವಿಧಾನದ 75ನೇ ವರ್ಷವನ್ನು ಆಚರಿಸುತ್ತಿರುವಾಗ, ಅವರ ಜೀವನ ಮತ್ತು ಆದರ್ಶಗಳು ಇನ್ನಷ್ಟು ಸ್ಪೂರ್ತಿದಾಯಕವಾಗಿವೆ,” ಎಂದಿದ್ದಾರೆ.
देश के प्रथम राष्ट्रपति भारत रत्न डॉ. राजेन्द्र प्रसाद जी को उनकी जन्म-जयंती पर आदरपूर्ण श्रद्धांजलि। संविधान सभा के अध्यक्ष के रूप में भारतीय लोकतंत्र की सशक्त नींव रखने में उन्होंने अमूल्य योगदान दिया। आज जब हम सभी देशवासी संविधान के 75 वर्ष का उत्सव मना रहे हैं, तब उनका जीवन… pic.twitter.com/ZFyYucqFgv
— Narendra Modi (@narendramodi) December 3, 2024