Quoteಯುರೋಪಿಯನ್ ಕೌನ್ಸಿಲ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೋಸ್ಟಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
Quoteಭಾರತ-ಯೂರೋಪಿಯನ್ ಒಕ್ಕೂಟ ತಂತ್ರಗಾರಿಕಾ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕಾರ್ಯ ನಿರ್ವಹಿಸಲು ಉಭಯ ನಾಯಕರ ಸಮ್ಮತಿ
Quoteಪರಸ್ಪರ ಲಾಭದಾಯಕ ಭಾರತ- ಯೂರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವನ್ನು ಶೀಘ್ರ ಅಂತಿಮಗೊಳಿಸುವ ಅಗತ್ಯದ ಬಗ್ಗೆ ಒತ್ತು

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ಕೋಸ್ಟಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.

ಕಳೆದ ದಶಕದಲ್ಲಿ ಭಾರತ-ಯೂರೋಪಿಯನ್‌ ಒಕ್ಕೂಟ (ಇಯು) ತಂತ್ರಗಾರಿಕಾ ಪಾಲುದಾರಿಕೆಯಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂಬುದನ್ನು ಗಮನಿಸಿದ ಉಭಯ ನಾಯಕರು, ವ್ಯಾಪಾರ, ತಂತ್ರಜ್ಞಾನ, ಹೂಡಿಕೆ, ಹಸಿರು ಇಂಧನ, ಡಿಜಿಟಲ್ ಬಾಹ್ಯಾಕಾಶ ಸೇರಿದಂತೆ ವಿವಿಧ ವಲಯಗಳಲ್ಲಿ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿಕಟವಾಗಿ ಕಾರ್ಯನಿರ್ವಹಿಸಲು ಸಮ್ಮತಿಸಿದರು. 

ಪರಸ್ಪರ ಲಾಭದಾಯಕ ಭಾರತ- ಯೂರೋಪಿಯನ್‌ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ ಟಿ ಎ) ಕುರಿತಂತೆ ತೀರ್ಮಾನವನ್ನು ಶೀಘ್ರ ಅಂತಿಮಗೊಳಿಸುವ ಅಗತ್ಯದ ಬಗ್ಗೆ ಅವರು ಒತ್ತಿ ಹೇಳಿದರು.

ಪರಸ್ಪರ ಅನುಕೂಲಕರ ಸಮಯದಲ್ಲಿ ಭಾರತದಲ್ಲಿ ನಡೆಯಲಿರುವ ಮುಂದಿನ ಭಾರತ-ಇಯು ಶೃಂಗಸಭೆಗಾಗಿ ಎರಡೂ ದೇಶಗಳ ನಾಯಕರು ಎದುರು ನೋಡುತ್ತಿದ್ದಾರೆ. 

ಎರಡೂ ದೇಶಗಳ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಉಭಯರು ಅನಿಸಿಕೆ ಹಂಚಿಕೊಂಡರು. ಪರಸ್ಪರ ಸಂಪರ್ಕದಲ್ಲಿರಲು ನಾಯಕರು ಸಮ್ಮತಿಸಿದರು.

 

  • Achary pramod chaubey obra sonebhadra March 25, 2025

    श्री सीताराम की जय
  • Prasanth reddi March 21, 2025

    జై బీజేపీ జై మోడీజీ 🪷🪷🙏
  • Preetam Gupta Raja March 21, 2025

    जय श्री राम
  • கார்த்திக் March 13, 2025

    Jai Shree Ram🚩Jai Shree Ram🚩Jai Shree Ram🙏🏼Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩
  • अमित प्रेमजी | Amit Premji March 03, 2025

    nice👍
  • kranthi modi February 22, 2025

    jai sri ram 🚩
  • Vivek Kumar Gupta February 15, 2025

    नमो ..🙏🙏🙏🙏🙏
  • Vivek Kumar Gupta February 15, 2025

    जय जयश्रीराम ....................... 🙏🙏🙏🙏🙏
  • Bhushan Vilasrao Dandade February 10, 2025

    जय हिंद
  • Dr Mukesh Ludanan February 08, 2025

    Jai ho
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How has India improved its defence production from 2013-14 to 2023-24 since the launch of

Media Coverage

How has India improved its defence production from 2013-14 to 2023-24 since the launch of "Make in India"?
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಮಾರ್ಚ್ 2025
March 27, 2025

Citizens Appreciate Sectors Going Global Through PM Modi's Initiatives