ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ್ ಸಂಸ್ಥಾಪನಾ ದಿನದ ಅಂಗವಾಗಿ ಉತ್ತರಾಖಂಡ್ ಜನತೆಗೆ ಶುಭ ಕೋರಿದ್ದಾರೆ.
ದೇವಭೂಮಿ ಉತ್ತರಾಖಂಡ್ ಭಾರತದ ಸಂಸ್ಕೃತಿ ಮತ್ತು ಪರಂಪರೆಯನ್ನು ಶ್ರೀಮಂತಗೊಳಿಸಲು ಅಮೂಲ್ಯ ಕೊಡುಗೆ ನೀಡಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ.
“ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಶ್ರೀಮಂತಿಕೆಗೆ ದೇವಭೂಮಿ ಉತ್ತರಾಖಂಡವು ಅಮೂಲ್ಯ ಕೊಡುಗೆಯನ್ನು ನೀಡಿದೆ. ನೈಸರ್ಗಿಕ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಈ ರಾಜ್ಯದ ನನ್ನ ಕುಟುಂಬದ ಸದಸ್ಯರೆಲ್ಲರೂ ಅತ್ಯಂತ ಶ್ರಮಜೀವಿಗಳು ಹಾಗೂ ಅತ್ಯಂತ ಧೈರ್ಯಶಾಲಿಗಳು. ರಾಜ್ಯ ಸಂಸ್ಥಾಪನಾ ದಿನವಾದ ಇಂದು ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು’’
भारतीय संस्कृति और परंपरा की समृद्धि में देवभूमि उत्तराखंड का अमूल्य योगदान है। प्राकृतिक पर्यटन के लिए प्रसिद्ध इस प्रदेश के मेरे सभी परिवारजन अत्यंत परिश्रमी होने के साथ-साथ बेहद पराक्रमी भी हैं। आज राज्य के स्थापना दिवस पर उन्हें मेरी बहुत-बहुत शुभकामनाएं।
— Narendra Modi (@narendramodi) November 9, 2023