ಬೆಂಗಳೂರಿನ ಇಸ್ರೋ ಕೇಂದ್ರದಿಂದ ಮರಳಿದ ನಂತರ ದೆಹಲಿಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಆಂಗ್ಲ ಅನುವಾದ

August 26th, 01:18 pm

ಇಂದು ಬೆಳಿಗ್ಗೆ ನಾವು ಬೆಂಗಳೂರಿಗೆ ಭೇಟಿ ನೀಡಿದ್ದೆ. ನಾನು ಬೆಳಿಗ್ಗೆಯೇ ಇಲ್ಲಿಗೆ ಆಗಮಿಸಿದೆ ಮತ್ತು ದೇಶಕ್ಕಾಗಿ ಅದ್ಭುತ ಸಾದನೆಯನ್ನು ಮಾಡಿದ ವಿಜ್ಞಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದೆ. ಹಾಗಾಗಿ ನಾನು ಇಂದು ಬೆಳಗಿನ ಜಾವವೇ ಬೆಂಗಳೂರಿಗೆ ಹೋಗಿದ್ದೆ. ಆದರೆ ಸುರ್ಯೋದಯಕ್ಕೂ ಮುನ್ನವೇ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಜನರು ಚಂದ್ರಯಾನದ ಯಶಸ್ಸುನ್ನು ಸಂಭ್ರಮಿಸಿದ ರೀತಿ ನಂಬಲಾಗದಷ್ಟು ಸ್ಪೂರ್ತಿದಾಯಕವಾಗಿತ್ತು. ಮತ್ತು ಈಗ ಸೂರ್ಯನು ತೀವ್ರವಾದ ಬಿಸಿಲಿನಲ್ಲಿ ಸುಡುತ್ತಿದ್ದಾನೆ, ಅದು ಚರ್ಮವನ್ನೂ ಸಹ ಸುಡುತ್ತದೆ.ಇಲ್ಲಿಗೆ ಬಂದಿರುವ ನಿಮ್ಮೊಂದಿಗೆ ಈ ತೀವ್ರವಾದ ಬಿಸಿಲಿನಲ್ಲಿ ಚಂದ್ರಯಾನದ ಯಶಸ್ಸಿನ ಸಂತೋಷದಲ್ಲಿ ಪಾಲ್ಗೊಳ್ಳಲು ಮತ್ತು ಆಚರಣೆಯ ಆನಂದ ಹಂಚಿಕೊಳ್ಳುವ ಸೌಭಾಗ್ಯ ನನಗೆ ದೊರೆತಿದೆ. ಅದಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ.

ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿಯವರಿಗೆ ನಾಗರಿಕರಿಂದ ಭವ್ಯ ಸ್ವಾಗತ

August 26th, 12:33 pm

ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ʻಚಂದ್ರಯಾನ -3ʼ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದ ಹಿನ್ನೆಲೆಯಲ್ಲಿ ಇಸ್ರೋ ತಂಡದೊಂದಿಗೆ ಸಂವಹನ ನಡೆಸಿದ ನಂತರ ಪ್ರಧಾನಿ ಮೋದಿ ಇಂದು ಬೆಂಗಳೂರಿನಿಂದ ದೆಹಲಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ನ 4 ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ನೇರವಾಗಿ ಬೆಂಗಳೂರಿಗೆ ತೆರಳಿದ್ದರು. ಶ್ರೀ ಜೆ.ಪಿ. ನಡ್ಡಾ ಅವರು ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದರು. ಪ್ರಧಾನಿಯವರ ವಿದೇಶಿ ಭೇಟಿಯ ಯಶಸ್ಸಿಗಾಗಿ ಹಾಗೂ ಭಾರತೀಯ ವಿಜ್ಞಾನಿಗಳ ಮಹತ್ವದ ಸಾಧನೆಗಾಗಿ ಪ್ರಧಾನ ಮಂತ್ರಿಗಳನ್ನು ನಡ್ಡಾ ಅವರು ಸನ್ಮಾನಿಸಿದರು.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

ಬ್ರಿಕ್ಸ್-ಆಫ್ರಿಕಾ ಔಟ್‌ ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಪ್ರಧಾನಮಂತ್ರಿ

August 25th, 12:12 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್-ಆಫ್ರಿಕಾ ಔಟ್ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಭಾಗವಹಿಸಿದರು.

ಮೊಜಾಂಬಿಕ್ ಗಣರಾಜ್ಯ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಮಾತುಕತೆ

August 24th, 11:56 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊಜಾಂಬಿಕ್ ಗಣರಾಜ್ಯದ ಅಧ್ಯಕ್ಷ ಫಿಲಿಪ್ ಜಸಿಂಟೊ ನ್ಯುಸಿ ಅವರನ್ನು ನಿನ್ನೆ ಆಗಸ್ಟ್ 24ರಂದು ಜೋಹಾನ್ಸ್‌ಬರ್ಗ್‌ನಲ್ಲಿ 15 ನೇ ಬ್ರಿಕ್ಸ್ ಶೃಂಗಸಭೆಯ ಕೊನೆಯಲ್ಲಿ ಭೇಟಿ ಮಾಡಿದರು.

ದಕ್ಷಿಣ ಆಫ್ರಿಕಾದ ಪ್ರಸಿದ್ಧ ತಳಿಶಾಸ್ತ್ರಜ್ಞ ಮತ್ತು ಅಕಾಡೆಮಿ ಆಫ್‌ ಆಫ್‌ ಸೈನ್ಸ್‌ ನ ಸಿಇಒ ಡಾ. ಹಿಮ್ಲಾ ಸೂಡ್ಯಾಲ್‌ ಅವರೊಂದಿಗೆ ಪ್ರಧಾನಮಂತ್ರಿ ಸಭೆ

August 24th, 11:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣಾ ಆಫ್ರಿಕಾದ ಪ್ರಸಿದ್ಧ ತಳಿಶಾಸ್ತ್ರಜ್ಞ ಮತ್ತು ಅಕಾಡೆಮಿ ಆಫ್‌ ಆಫ್‌ ಸೈನ್ಸ್‌ ನ ಸಿಇಒ ಡಾ. ಹಿಮ್ಲಾ ಸೂಡ್ಯಾಲ್‌ ಅವರನ್ನು ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ ನಲ್ಲಿ 2023 ಆಗಸ್ಟ್‌ 24 ರಂದು ಭೇಟಿ ಮಾಡಿದರು.

ಖ್ಯಾತ ರಾಕೆಟ್‌ ವಿಜ್ಞಾನಿ ಮತ್ತು ಗ್ಯಾಲಕ್ಟಿಕ್‌ ಎನರ್ಜಿ ವೆಂಚರ್ಸ್‌ ನ ಸಂಸ್ಥಾಪಕ ‍ಶ್ರೀ ಸಿಯಾಬುಲೆಲಾ ಕ್ಸುಝಾ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

August 24th, 11:32 pm

ಖ್ಯಾತ ರಾಕೆಟ್‌ ವಿಜ್ಞಾನಿ ಮತ್ತು ಗ್ಯಾಲಕ್ಟಿಕ್‌ ಎನರ್ಜಿ ವೆಂಚರ್ಸ್‌ ನ ಸಂಸ್ಥಾಪಕರಾದ ‍ಶ್ರೀ ಸಿಯಾಬುಲೆಲಾ ಕ್ಸುಝಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಆಗಸ್ಟ್‌ 24 ರಂದು ಜೋಹಾನ್ಸ್‌ ಬರ್ಗ್‌ ನಲ್ಲಿ ಭೇಟಿ ಮಾಡಿದರು.

ಇಥಿಯೋಪಿಯಾ ಗಣರಾಜ್ಯದ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ

August 24th, 11:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ 2023ರ ಆಗಸ್ಟ್ 24ರಂದು ಜೋಹಾನ್ಸ್ ಬರ್ಗ್ ನಲ್ಲಿ ಇಥಿಯೋಪಿಯಾ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅಲಿ ಅವರನ್ನು ಭೇಟಿ ಮಾಡಿದರು.

ಸೆನೆಗಲ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ

August 24th, 11:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ 2023ರ ಆಗಸ್ಟ್ 24ರಂದು ಜೋಹಾನ್ಸ್ ಬರ್ಗ್ ನಲ್ಲಿ ಸೆನೆಗಲ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಮ್ಯಾಕಿ ಸಾಲ್ ಅವರನ್ನು ಭೇಟಿ ಮಾಡಿದರು.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

August 24th, 11:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನಿನ ಅಧ್ಯಕ್ಷರಾದ ಡಾ ಸೆಯ್ಯದ್ ಇಬ್ರಾಹಿಂ ರೈಸಿ ಅವರನ್ನು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ 15 ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭೇಟಿ ಮಾಡಿದರು.

ʻಬ್ರಿಕ್ಸ್-ಆಫ್ರಿಕಾ ಔಟ್ರೀಚ್ʼ ಮತ್ತು ʻಬ್ರಿಕ್ಸ್ ಪ್ಲಸ್ʼ ಸಂವಾದದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳ ಕನ್ನಡ ಅನುವಾದ

August 24th, 02:38 pm

ಆಫ್ರಿಕಾದ ನೆಲದಲ್ಲಿ, ನನ್ನೆಲ್ಲಾ ಸ್ನೇಹಿತರ ನಡುವೆ ಇಲ್ಲಿರುವುದು ನನಗೆ ಸಂತೋಷ ತಂದಿದೆ.

ಬ್ರಿಕ್ಸ್ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ಹೇಳಿಕೆ

August 24th, 01:32 pm

ಮೊದಲನೆಯದಾಗಿ ಮತ್ತು ಪ್ರಮುಖವಾಗಿ, ಈ ಬ್ರಿಕ್ಸ್ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ನನ್ನ ಆಪ್ತ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

15ನೇ "ಬ್ರಿಕ್ಸ್" ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನ ಮಂತ್ರಿಗಳು

August 23rd, 08:57 pm

ಜಾಗತಿಕ ಆರ್ಥಿಕತೆಯ ಚೇತರಿಕೆ, ಆಫ್ರಿಕಾ ಹಾಗೂ ಜಗತ್ತಿನ ದಕ್ಷಿಣ ರಾಷ್ಟ್ರಗಳ ನಡುವಿನ ಪಾಲುದಾರಿಕೆ ಕುರಿತಂತೆ ನಾಯಕರು ರಚನಾತ್ಮಕ ಸಂವಾದ ನಡೆಸುವ ಜತೆಗೆ ಬ್ರಿಕ್ಸ್‌ನ ಕಾರ್ಯಸೂಚಿಯ ಈವರೆಗಿನ ಪ್ರಗತಿ ಬಗ್ಗೆಯೂ ಪರಿಶೀಲನೆ ನಡೆಸಿದರು.

15 ನೇ ಬ್ರಿಕ್ಸ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 23rd, 03:30 pm

15ನೇ ಬ್ರಿಕ್ಸ್ ಶೃಂಗಸಭೆಯ ಅದ್ಧೂರಿ ಆಯೋಜನೆ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಮತ್ತೊಮ್ಮೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ.

ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಭೇಟಿ

August 23rd, 03:05 pm

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಈ ಇಬ್ಬರೂ ನಾಯಕರು ರಕ್ಷಣೆ, ಕೃಷಿ, ವ್ಯಾಪಾರ ಮತ್ತು ಹೂಡಿಕೆ, ಆರೋಗ್ಯ, ಸಂರಕ್ಷಣೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಉಭಯ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಬ್ರಿಕ್ಸ್ ನಾಯಕರ ಬೀಳ್ಕೊಡುಗೆ ಸಭೆಯಲ್ಲಿ ಪ್ರಧಾನಿ ಭಾಗಿ

August 22nd, 11:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 22ರಂದು ಜೋಹಾನ್ಸ್ ಬರ್ಗ್ ನ ಸಮ್ಮರ್ ಪ್ಲೇಸ್ ನಲ್ಲಿ ನಡೆದ ಬ್ರಿಕ್ಸ್ ನಾಯಕರ ಬೀಳ್ಕೊಡುಗೆಯಲ್ಲಿ ಭಾಗವಹಿಸಿದ್ದರು.