ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 07th, 12:20 pm
ನನ್ನ ಕಾಶ್ಮೀರಿ ಸಹೋದರ ಸಹೋದರಿಯರೆ, ಭೂಮಿಯ ಮೇಲಿನ ಈ ಸ್ವರ್ಗದಲ್ಲಿರುವಾಗ, ಈ ಅಪೂರ್ವವಾದ ಪ್ರಕೃತಿ ಸೌಂದರ್ಯ ಅನುಭವಿಸುವ, ಈ ಶುದ್ಧ ಗಾಳಿಯನ್ನು ಉಸಿರಾಡುವ ಮತ್ತು ನಿಮ್ಮ ಪ್ರೀತಿಯ ಬೆಚ್ಚಗಾಗುವ ಭಾವನೆ ಸೆರೆಹಿಡಿಯಲು ನನಗೆ ಪದಗಳೇ ನಿಲುಕುತ್ತಿಲ್ಲ!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
March 07th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸುಮಾರು 5000 ಕೋಟಿ ರೂಪಾಯಿ ಮೌಲ್ಯದ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸ್ವದೇಶ್ ದರ್ಶನ್ ಮತ್ತು ಶ್ರೀನಗರದ ‘ಹಜರತ್ ಬಾಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ’ ಯೋಜನೆ ಸೇರಿದಂತೆ 1400 ಕೋಟಿ ರೂ.ಗಿಂತ ಹೆಚ್ಚಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ‘ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್’ಮತ್ತು ‘ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನ’ಕ್ಕೆ ಚಾಲನೆ ನೀಡಿದರು. ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (ಸಿಬಿಡಿಡಿ) ಯೋಜನೆಯಡಿ ಆಯ್ಕೆಯಾದ ಪ್ರವಾಸಿ ತಾಣಗಳನ್ನು ಘೋಷಿಸಿದರು. ಜಮ್ಮು ಮತ್ತು ಕಾಶ್ಮೀರದ ಸುಮಾರು 1000 ಹೊಸ ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ಮಹಿಳಾ ಸಾಧಕರು, ಲಕ್ಷಾಧಿಪತಿ ದೀದಿಗಳು, ರೈತರು, ಉದ್ಯಮಿಗಳು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.3ನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
May 25th, 10:16 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಜಿ, ನನ್ನ ಸಂಪುಟ ಸಹೋದ್ಯೋಗಿ ನಿಸಿತ್ ಪ್ರಮಾಣಿಕ್ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಜಿ, ಇಲ್ಲಿರುವ ಇತರೆ ಗಣ್ಯರು, ಮತ್ತು ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಅಭಿನಂದನೆಗಳು. ಇಂದು ಉತ್ತರ ಪ್ರದೇಶವು ದೇಶಾದ್ಯಂತ ಇರುವ ಯುವ ಕ್ರೀಡಾ ಪ್ರತಿಭೆಗಳ ಸಂಗಮ ಸ್ಥಳವಾಗಿದೆ. ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ 4,000 ಆಟಗಾರರಲ್ಲಿ ಹೆಚ್ಚಿನವರು ವಿವಿಧ ರಾಜ್ಯಗಳು ಮತ್ತು ಪ್ರದೇಶಗಳಿಂದ ಬಂದವರಾಗಿದ್ದಾರೆ. ನಾನು ಉತ್ತರ ಪ್ರದೇಶದ ಸಂಸದ. ನಾನು ಉತ್ತರ ಪ್ರದೇಶದ ಜನರ ಪ್ರತಿನಿಧಿ. ಹಾಗಾಗಿ, ಉತ್ತರ ಪ್ರದೇಶದ ಸಂಸತ್ ಸದಸ್ಯನಾಗಿ, 'ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್'ನಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿರುವ ಎಲ್ಲ ಕ್ರೀಡಾಪಟುಗಳಿಗೆ ನಾನು ವಿಶೇಷವಾಗಿ ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ.ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನ 3ನೇ ಆವೃತ್ತಿಯನ್ನು ಆರಂಭಿಸುವುದಾಗಿ ಘೋಷಿಸಿದ ಪ್ರಧಾನ ಮಂತ್ರಿ
May 25th, 07:06 pm
ಪಿಐಬಿ ದೆಹಲಿ ಮೇ 25: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2023ನ್ನು(KIUG) ಆರಂಭಿಸುವುದಾಗಿ ಘೋಷಿಸಿದರು. 21 ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸುವ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 4,750ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಲಿದ್ದಾರೆ.ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭ ಕೋರಿದ ಪ್ರಧಾನಿ
February 11th, 09:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ.2ನೇ ಖೇಲೋ ಇಂಡಿಯಾ ಭಾರತ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 26th, 11:53 am
2ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಆರಂಭಿಕ ಭಾಷಣ ಮಾಡಿದರು.2ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ಪ್ರಧಾನಿ ಆರಂಭಿಕ ಭಾಷಣ
February 26th, 11:52 am
2ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಆರಂಭಿಕ ಭಾಷಣ ಮಾಡಿದರು.