ವಿಕಸಿತ ಭಾರತ-ವಿಕಸಿತ ಗೋವಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 06th, 02:38 pm
ಗೋವಾ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಜಿ, ಯುವ ಮುಖ್ಯಮಂತ್ರಿ, ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಇತರೆ ಗಣ್ಯರೆ ಮತ್ತು ಗೋವಾದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಎಲ್ಲಾ ಗೋವಾ ವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು! ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರಲಿ!ಗೋವಾದಲ್ಲಿ ವಿಕಸಿತ ಭಾರತ, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 06th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ ವಿಕಸಿತ ಭಾರತ್, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ಬಳಿಗೆ ತೆರಳಿ ಅದನ್ನು ಶ್ರೀ ಮೋದಿ ಅವರು ವೀಕ್ಷಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳಲ್ಲಿ ಶಿಕ್ಷಣ, ಕ್ರೀಡೆ, ನೀರು ಸಂಸ್ಕರಣೆ, ತ್ಯಾಜ್ಯ ನಿರ್ವಹಣೆ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಸೌಕರ್ಯಗಳಿಗೆ ಉತ್ತೇಜನ ನೀಡಲಾಗಿದೆ. ಪ್ರಧಾನಮಂತ್ರಿಯವರು ರೋಜ್ ಗಾರ್ ಮೇಳದಡಿ ವಿವಿಧ ಇಲಾಖೆಗಳಲ್ಲಿ 1930 ಹೊಸ ಸರ್ಕಾರಿ ನೇಮಕಾತಿ ಪಡೆದವರಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದರು.ಗೋವಾದಲ್ಲಿ ನಡೆದ 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿನ ಪ್ರಧಾನಮಂತ್ರಿ ಅವರ ಭಾಷಣ
October 26th, 10:59 pm
ಗೋವಾದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಪಿ.ಎಸ್. ಶ್ರೀಧರನ್ ಪಿಳ್ಳೈ ಜೀ, ಜನಪ್ರಿಯ ಮತ್ತು ಕ್ರಿಯಾತ್ಮಕ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೀ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ವೇದಿಕೆಯಲ್ಲಿ ಉಪಸ್ಥಿತರಿರುವ ಪ್ರತಿನಿಧಿಗಳು, ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಜೀ, ಎಲ್ಲಾ ಆಟಗಾರರು, ಸಹಾಯಕ ಸಿಬ್ಬಂದಿ, ಇತರ ಅಧಿಕಾರಿಗಳು ಮತ್ತು ದೇಶದ ಮೂಲೆ ಮೂಲೆಯಲ್ಲಿರುವ ಯುವ ಸ್ನೇಹಿತರು, ಭಾರತೀಯ ಕ್ರೀಡಾ ಉತ್ಸವದ ಭವ್ಯ ಪ್ರಯಾಣವು ಈಗ ಗೋವಾವನ್ನು ತಲುಪಿದೆ. ಎಲ್ಲೆಡೆ ಬಣ್ಣಗಳು, ಅಲೆಗಳು ಮತ್ತು ಉತ್ಸಾಹವಿದೆ. ಗೋವಾದ ಗಾಳಿಯಲ್ಲಿ ಏನೋ ವಿಶೇಷವಿದೆ. 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕಾಗಿ ನಿಮ್ಮೆಲ್ಲರಿಗೂ ಶುಭಾಶಯಗಳು, ಅನೇಕ ಅಭಿನಂದನೆಗಳು.ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
October 26th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದ ಮಡಗಾಂವ್ ನಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಅಕ್ಟೋಬರ್ 26ರಂದು ಪ್ರಧಾನಿ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ
October 25th, 11:21 am
ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿ ತಲುಪಲಿರುವ ಪ್ರಧಾನಿ, ಅಲ್ಲಿ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದ ದರ್ಶನ ಮಾಡಿ, ಪೂಜೆ ನೆರವೇರಿಸಲಿದ್ದಾರೆ. ದೇವಸ್ಥಾನದಲ್ಲಿ ನೂತನ ದರ್ಶನ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಅವರು ನೀಲವಾಂಡೆ ಅಣೆಕಟ್ಟಿಗೆ ಜಲಪೂಜೆ ನೆರವೇರಿಸಲಿದ್ದಾರೆ. ಜತೆಗೆ, ಅಣೆಕಟ್ಟಿನ ಕಾಲುವೆ ಜಾಲವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3.15ರ ಸುಮಾರಿಗೆ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ಅವರು ಆರೋಗ್ಯ, ರೈಲು, ರಸ್ತೆ ಮತ್ತು ತೈಲ, ಅನಿಲ ಸೇರಿದಂತೆ ಸುಮಾರು 7,500 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.