PM shares tweet thread on Aadi Mahotsav in Rourkela

April 08th, 11:33 am

The Prime Minister, Shri Narendra Modi has underlined India's pride in the heritage and culture of our tribal communities.

'ಆದಿ ಮಹೋತ್ಸವ'ದಲ್ಲಿ ಆಸಕ್ತಿ ತೋರಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ

February 23rd, 09:15 am

'ಆದಿ ಮಹೋತ್ಸವ'ದ ಬಗ್ಗೆ ವ್ಯಾಪಕ ಆಸಕ್ತಿ ಕಂಡು ಬರುತ್ತಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಸದಸ್ಯ ಡಾ. ಭೋಲಾ ಸಿಂಗ್ ಅವರು 'ಆದಿ ಮಹೋತ್ಸವ'ಕ್ಕೆ ತಮ್ಮ ಭೇಟಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಮತ್ತು ಇದನ್ನು ಬಹಳ ಉತ್ತಮ ರೀತಿಯಲ್ಲಿ ಆಯೋಜಿಸಲಾಗಿದೆ, ಅಲ್ಲಿ ನೀವು ಭಾರತದಾದ್ಯಂತದ ಬುಡಕಟ್ಟು ಸಂಸ್ಕೃತಿಯ ಅದ್ಭುತ ಪ್ರಸ್ತುತಿಯನ್ನು ನೋಡಬಹುದು ಎಂದು ಹೇಳಿದ್ದಾರೆ ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿಯವರು ಆ ಟ್ವೀಟ್ ಥ್ರೆಡ್ ಗೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ.

ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ "ಆದಿ ಮಹೋತ್ಸವ" ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 16th, 10:31 am

ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಶ್ರೀ ಅರ್ಜುನ್ ಮುಂಡಾ ಜೀ, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜೀ, ಶ್ರೀಮತಿ ರೇಣುಕಾ ಸಿಂಗ್ ಜೀ, ಡಾ. ಭಾರತಿ ಪವಾರ್ ಜೀ, ಶ್ರೀ ಬಿಶೇಶ್ವರ್ ಟುಡು ಜೀ, ಇತರ ಗಣ್ಯರೇ ಮತ್ತು ದೇಶದ ವಿವಿಧ ರಾಜ್ಯಗಳ ನನ್ನ ಎಲ್ಲ ಬುಡಕಟ್ಟು ಸಹೋದರ ಸಹೋದರಿಯರೇ! ನಿಮ್ಮೆಲ್ಲರಿಗೂ ಆದಿ ಮಹೋತ್ಸವದ ಹಾರ್ದಿಕ ಶುಭಾಶಯಗಳು.

​​​​​​​ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

February 16th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವವಾದ ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಆದಿ ಮಹೋತ್ಸವವು ಬುಡಕಟ್ಟು ಸಂಸ್ಕೃತಿಯನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶಿಸುವ ಪ್ರಯತ್ನವಾಗಿದೆ ಮತ್ತು ಇದು ಬುಡಕಟ್ಟು ಸಂಸ್ಕೃತಿ, ಕರಕುಶಲತೆ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಯ ಹುಮ್ಮಸ್ಸನ್ನು ಆಚರಿಸುತ್ತದೆ. ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬುಡಕಟ್ಟು ಸಹಕಾರಿ ಮಾರುಕಟ್ಟೆ ಅಭಿವೃದ್ಧಿ ಒಕ್ಕೂಟ ಲಿಮಿಟೆಡ್ (TRIFED) ನ ವಾರ್ಷಿಕ ಕಾರ್ಯಕ್ರಮವಾಗಿದೆ.

ಪ್ರಧಾನಮಂತ್ರಿ ಅವರಿಂದ ಫೆಬ್ರವರಿ 16ರಂದು ದೆಹಲಿಯ ಮೇಜರ್ ಧ್ಯಾನ್ ಚಂದ್‌ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವ ಉದ್ಘಾಟನೆ

February 15th, 08:51 am

ಪ್ರಧಾನಮಂತ್ರಿ ಅವರು ದೇಶದ ಬುಡಕಟ್ಟು ಜನರ ಕಲ್ಯಾಣ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡು ಮುಂಚೂಣಿಯಲ್ಲಿದ್ದಾರೆ ಮತ್ತು ದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಅವರ ಕೊಡುಗೆಗೆ ಸೂಕ್ತ ಗೌರವವನ್ನು ನೀಡುತ್ತಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸುವ ಪ್ರಯತ್ನವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಮೇಜರ್ ಧ್ಯಾನ್ ಚಂದ್‌ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೆಬ್ರವರಿ 16ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವ-ಆದಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.