ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಸಾರ್ವಜನಿಕ ಸೇವಾ ಪ್ರಸಾರಕ್ಕೆ ಪ್ರಮುಖ ಉತ್ತೇಜನ: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯದ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ದಿʼ (ಬಿ ಐ ಎನ್ ಡಿ) ಯೋಜನೆಯನ್ನು 2025-26 ರವರೆಗೆ 2,539.61 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಿದೆ.
January 04th, 04:22 pm
ಪ್ರಸಾರ ಭಾರತಿಯ ಆಕಾಶವಾಣಿ (ಎಐಆರ್) ಮತ್ತು ದೂರದರ್ಶನ (ಡಿಡಿ) ಮೂಲಸೌಕರ್ಯ ಅಭಿವೃದ್ಧಿಗಾಗಿ 2,539.61 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ವಲಯದ ಯೋಜನೆ “ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ” (ಬಿ ಐ ಎನ್ ಡಿ) ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅನುಮೋದಿಸಿದೆ. ಸಚಿವಾಲಯದ “ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ”ಯೋಜನೆಯು ಪ್ರಸಾರ ಭಾರತಿಗೆ ಅದರ ಪ್ರಸಾರ ಮೂಲಸೌಕರ್ಯ, ವಿಷಯ (ಕಂಟೆಂಟ್) ಅಭಿವೃದ್ಧಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಸಿವಿಲ್ ಕಾಮಗಾರಿಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಹಣಕಾಸಿನ ನೆರವು ನೀಡಲಿದೆ.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29-07-2018ರಂದು ಮಾಡಿದ ‘ಮನದ ಮಾತು’ ( ‘ಮನ್ ಕಿ ಬಾತ್’ ) – 46 ನೇ ಭಾಷಣದ ಕನ್ನಡ ಅವತರಣಿಕೆ
July 29th, 11:30 am
ಈ ಮಳೆಗಾಲದ ದಿನಗಳಲ್ಲಿ ಬಹಳಷ್ಟು ಸ್ಥಳಗಳಿಂದ ಹೆಚ್ಚಿನ ಮಳೆಯಾಗಿರುವ ಸುದ್ದಿಗಳು ಕೇಳಿಬರುತ್ತಿವೆ. ಕೆಲವು ಸ್ಥಳಗಳಲ್ಲಿ ಅತೀವೃಷ್ಟಿಯಿಂದಾಗಿ ಆತಂಕದ ಸುದ್ದಿಗಳೂ ಬರುತ್ತಿವೆ ಮತ್ತು ಇನ್ನು ಕೆಲವೆಡೆ ಜನರು ಇನ್ನೂ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಭಾರತದ ವಿಶಾಲತೆ, ವಿವಿಧತೆಯೊಂದಿಗೆ ಕೆಲವೊಮ್ಮೆ ಮಳೆ ಕೂಡಾ ಇಷ್ಟಾನಿಷ್ಟದ ರೂಪ ಪ್ರದರ್ಶಿಸುತ್ತದೆ.ನಾಳೆ ದೇಶಾದ್ಯಂತದ ರೈತರೊಂದಿಗೆ ನೇರವಾಗಿ ಸಂವಾದ ನಡೆಸಲಿರುವ ಪ್ರಧಾನಿ
June 19th, 07:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 9.30ಕ್ಕೆ ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ರೈತರೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ. ಈ ಸಂವಾದವು ರೈತರಿಂದ ನೇರವಾಗಿ ಆಲಿಸುವ ಅವಕಾಶವನ್ನು ಒದಗಿಸುತ್ತದೆ. ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಕ್ಕೆ ಸಂಬಂಧಿಸಿದ ಉಪಕ್ರಮಗಳ ಕುರಿತೂ ಚರ್ಚಿಸಲಾಗುವುದು. ದೂರದರ್ಶನ, ಡಿ.ಡಿ. ಕಿಸಾನ್ ಮತ್ತು ಆಕಾಶವಾಣಿಯ ಮೂಲಕ ದೇಶದಾದ್ಯಂತ ನೇರವಾಗಿ ಬಿತ್ತರಿಸಲಾಗುವುದು. 600ಕೃಷಿ ವಿಜ್ಞಾನ ಕೇಂದ್ರಗಳು ಮತ್ತು 2 ಲಕ್ಷ ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ.)ಗಳನ್ನು ವಿಡಿಯೋ ಬ್ರಿಜ್ ಮೂಲಕ ಸಂಪರ್ಕಿಸಲಾಗುವುದು. ಜನರು ಕೂಡ “ನರೇಂದ್ರ ಮೋದಿ ಆಪ್’ ಮೂಲಕ ಸಂವಾದ ನಡೆಸಬಹುದಾಗಿದೆ.