ಆರಂಭ್ 6.0 ತರಗತಿ ವೇಳೆ ಯುವ ನಾಗರಿಕ ಸೇವಾ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ
October 30th, 09:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರಂಭ್ 6.0ರ ಸಂದರ್ಭದಲ್ಲಿ ಯುವ ನಾಗರಿಕ ಸೇವಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಜನರ ಪಾಲ್ಗೊಳ್ಳುವಿಕೆಯೊಂದಿಗೆ ಆಡಳಿತ ಸುಧಾರಿಸುವ ಕುರಿತಂತೆ ಯುವ ನಾಗರಿಕ ಸೇವಾ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರು ವಿಸ್ತೃತ ಚರ್ಚೆ ನಡೆಸಿದರು. ಸದೃಢ ಪ್ರತಿಕ್ರಿಯಾ ಕಾರ್ಯವ್ಯವಸ್ಥೆ ಮತ್ತು ಕುಂದುಕೊರತೆ ನಿವಾರಣಾ ವ್ಯವಸ್ಥೆಯ ಸುಧಾರಣೆಯ ಮಹತ್ವದ ಬಗ್ಗೆ ಪ್ರಧಾನಮಂತ್ರಿಗಳು ಒತ್ತಿ ಹೇಳಿದರು. ನಾಗರಿಕರಿಗೆ “ಸುಲಲಿತ ಜೀವನ” ವನ್ನು ಸುಧಾರಿಸುವ ಬಗ್ಗೆ ಯುವ ನಾಗರಿಕ ಸೇವಾ ಸಿಬ್ಬಂದಿ ಗಮನಹರಿಸುವಂತೆ ಪ್ರಧಾನಮಂತ್ರಿ ಕರೆ ನೀಡಿದರು.ಅಕ್ಟೋಬರ್ 30-31 ರಂದು ಗುಜರಾತ್‌ಗೆ ಪ್ರಧಾನಮಂತ್ರಿ ಭೇಟಿ
October 29th, 03:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5:30ರ ಸುಮಾರಿಗೆ ಏಕತಾ ನಗರದಲ್ಲಿ 280 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಸುಮಾರು 6 ಗಂಟೆಗೆ, ಅವರು ಆರಂಭ್ 6.0 ರಲ್ಲಿ 99ನೇ ಕಾಮನ್ ಫೌಂಡೇಶನ್ ಕೋರ್ಸ್‌ನ ತರಬೇತಿದಾರ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಕ್ಟೋಬರ್ 31 ರಂದು, ಬೆಳಿಗ್ಗೆ 7:15ರ ಸುಮಾರಿಗೆ, ಪ್ರಧಾನಮಂತ್ರಿಗಳು ಏಕತೆಯ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ, ನಂತರ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಳು ನಡೆಯಲಿವೆ.