ಕಬ್ಬು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಿಜೆಪಿ ಸರ್ಕಾರ ಶ್ರದ್ಧೆಯಿಂದ ನಿಭಾಯಿಸಿದೆ: ಪಿಲಿಭಿತ್‌ನಲ್ಲಿ ಪ್ರಧಾನಿ ಮೋದಿ

April 09th, 11:00 am

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನೆರೆದಿದ್ದ ಜನರ ಮೇಲೆ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿದ್ದನ್ನು ಸಂಭ್ರಮಿಸಲು ಜನಸಾಗರವೇ ನೆರೆದಿತ್ತು. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಉತ್ತರ ಪ್ರದೇಶದ ಅವರ ದೃಷ್ಟಿಕೋನವನ್ನು ಪ್ರೇಕ್ಷಕರೊಂದಿಗೆ ಚರ್ಚಿಸಿದರು. ಈಗ ಜಗತ್ತು ಎದುರಿಸುತ್ತಿರುವ ವಿವಿಧ ತೊಂದರೆಗಳ ನಡುವೆ, ಭಾರತವು ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ತೋರಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಉತ್ಸಾಹದಿಂದ ಮಾತನಾಡಿದರು

April 09th, 10:42 am

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನೆರೆದಿದ್ದ ಜನರ ಮೇಲೆ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿದ್ದನ್ನು ಸಂಭ್ರಮಿಸಲು ಜನಸಾಗರವೇ ನೆರೆದಿತ್ತು. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಉತ್ತರ ಪ್ರದೇಶದ ಅವರ ದೃಷ್ಟಿಕೋನವನ್ನು ಪ್ರೇಕ್ಷಕರೊಂದಿಗೆ ಚರ್ಚಿಸಿದರು. ಈಗ ಜಗತ್ತು ಎದುರಿಸುತ್ತಿರುವ ವಿವಿಧ ತೊಂದರೆಗಳ ನಡುವೆ, ಭಾರತವು ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ತೋರಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 11th, 11:14 pm

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

PM Modi interacts with the Indian community in Paris

July 13th, 11:05 pm

PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 12:30 pm

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.

`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 22nd, 03:34 pm

ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.

`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ

March 22nd, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.

​​​​​​​ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ

March 21st, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.

ತುರ್ಕಿಯೆ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರ ಸಂವಾದ

February 20th, 06:20 pm

ಮಾನವೀಯತೆಗಾಗಿ ಮಹತ್ತರವಾದ ಕೆಲಸ ಮಾಡಿ ಹಿಂದಿರುಗಿರುವಿರಿ. ‘ಆಪರೇಷನ್ ದೋಸ್ತ್’ಗೆ ಸಂಬಂಧಿಸಿದ ಇಡೀ ತಂಡ ಎನ್‌ಡಿಆರ್‌ಎಫ್, ಸೈನ್ಯ, ವಾಯುಪಡೆ ಅಥವಾ ಇತರ ಸೇವಾ ಪಡೆಗಳು ಅದ್ಭುತ ಕೆಲಸ ಮಾಡಿದೆ. ನಮ್ಮ ಮಾತು ಬಾರದ ಸ್ನೇಹಿತರಾದ ಶ್ವಾನದಳದ ಸದಸ್ಯರು ಸಹ ಅದ್ಭುತ ಸಾಮರ್ಥ್ಯವನ್ನು ತೋರಿಸಿದ್ದಾರೆ. ನಿಮ್ಮೆಲ್ಲರ ಬಗ್ಗೆ ದೇಶವು ಬಹಳ ಹೆಮ್ಮೆಪಡುತ್ತದೆ.

​​​​​​​ಟರ್ಕಿ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ ಡಿ ಆರ್‌ ಎಫ್‌ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ

February 20th, 06:00 pm

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.

ಇಂದು ತಮ್ಮ ನಿವಾಸದಲ್ಲಿ ಸಿಖ್‌ ನಿಯೋಗವನ್ನು ಭೇಟಿಯಾದ ಪ್ರಧಾನಮಂತ್ರಿ

September 19th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 7ನೇ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್‌ ನಿಯೋಗವನ್ನು ಭೇಟಿಯಾದರು.

ಆಘ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಪ್ರಾಣಹಾನಿಗೆ ಪ್ರಧಾನಿ ಸಂತಾಪ.

June 22nd, 10:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಆಗಿರುವ ಪ್ರಾಣಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಗಳ ಫ್ರಾನ್ಸ್ ಭೇಟಿ ವೇಳೆ ಬಿಡುಗಡೆ ಮಾಡಲಾದ ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

May 04th, 10:44 pm

ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಇಮ್ಯಾನುಯೆಲ್ ಮ್ಯಾಕ್ರಾನ್ ಅವರು 2022ರ ಮೇ 4ರಂದು ಪ್ಯಾರಿಸ್‌ಗೆ ಕೆಲ ಕಾಲ ಭೇಟಿ ನೀಡಿದ್ದ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಆತಿಥ್ಯ ನೀಡಿದರು.

ಜಂಟಿ ಹೇಳಿಕೆ: 6ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಗಳು

May 02nd, 08:28 pm

ಇಂದು ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿ ಮತ್ತು ಭಾರತ ಗಣರಾಜ್ಯದ ಸರ್ಕಾರಗಳು, ಫೆಡರಲ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಹ-ಅಧ್ಯಕ್ಷತೆಯಲ್ಲಿ ಆರನೇ ಸುತ್ತಿನ ಅಂತರ-ಸರ್ಕಾರಿ ಸಮಾಲೋಚನೆಗಳನ್ನು ನಡೆಸಿದವು. ಈ ಇಬ್ಬರು ನಾಯಕರಲ್ಲದೆ, ಎರಡೂ ನಿಯೋಗಗಳಲ್ಲಿ ಮಂತ್ರಿಗಳು ಮತ್ತು ಅನುಬಂಧದಲ್ಲಿ ಉಲ್ಲೇಖಿಸಲಾದ ಸಾಲು-ಸಚಿವಾಲಯಗಳ ಇತರ ಉನ್ನತ ಪ್ರತಿನಿಧಿಗಳು ಇದ್ದರು.

ಕೆಂಪು ಕೋಟೆಯಲ್ಲಿ ಶ್ರೀ ಗುರು ತೇಗ್‌ ಬಹಾದೂರ್‌ ಜೀ ಅವರ 400ನೇ ಪ್ರಕಾಶ್‌ ಪುರಬ್‌ ಆಚರಣೆಯ ಸಂದರ್ಭದಲ್ಲಿಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

April 22nd, 10:03 am

ವೇದಿಕೆಯಲ್ಲಿರುವ ಎಲ್ಲಾ ಗಣ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರು ಮತ್ತು ಮಹನೀಯರೇ ಮತ್ತು ಪ್ರಪಂಚದಾದ್ಯಂತದ ನಮ್ಮೊಂದಿಗೆ ವರ್ಚುವಲ್‌ ಮೂಲಕ ಸಂಪರ್ಕ ಹೊಂದಿರುವವರೇ!

ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ ʻಪ್ರಕಾಶ್ ಪುರಬ್ʼ ಆಚರಣೆಯಲ್ಲಿ ಭಾಗಿಯಾದ ಪ್ರಧಾನಿ

April 21st, 09:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ `ಪ್ರಕಾಶ್ ಪುರಬ್’ ಆಚರಣೆಯಲ್ಲಿ ಪಾಲ್ಗೊಂಡರು. ಪ್ರಧಾನಮಂತ್ರಿಯವರು ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರಿಗೆ ಪ್ರಾರ್ಥನೆ ಸಲ್ಲಿಸಿದರು. 400 ರಾಗಿಗಳು ಶಹಬ್/ಕೀರ್ತನೆ ಅರ್ಪಿಸಿದಾಗ ಪ್ರಧಾನ ಮಂತ್ರಿಗಳು ಪ್ರಾರ್ಥನೆಯಲ್ಲಿ ತಲ್ಲೀನರಾದರು. ಈ ಸಂದರ್ಭದಲ್ಲಿ ಸಿಖ್ ಮುಖಂಡರು ಪ್ರಧಾನಮಂತ್ರಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

March 04th, 12:45 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲ 6 ಹಂತದ ಚುನಾವಣೆಗಳಲ್ಲಿ ಯುಪಿಯ ಜನರು ಬಿಜೆಪಿಯ ಉತ್ತಮ ಆಡಳಿತಕ್ಕೆ ಹೇಗೆ ಮತ ಹಾಕಿದ್ದಾರೆ ಮತ್ತು ಯುಪಿಯಿಂದ ‘ಪರಿವಾರ್ವಾದ್’ ಮತ್ತು ‘ಮಾಫಿಯಾದ್’ ಅನ್ನು ತೊಡೆದುಹಾಕಲು ಮಿರ್ಜಾಪುರದ ಜನರಿಗೆ ಜವಾಬ್ದಾರಿಯನ್ನು ಹೇಗೆ ನೀಡಿದ್ದಾರೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

PM meets Afghanistan Sikh-Hindu Delegation

February 19th, 02:55 pm

Prime Minister Narendra Modi met members of the Sikh-Hindu Delegation from Afghanistan at 7 Lok Kalyan Marg. They honoured the Prime Minister and thanked him for bringing Sikhs and Hindus safely to India from Afghanistan. The Prime Minister welcomed the delegation and said that they are not guests but are in their own house, adding that India is their home.