Today the youth of India is full of new confidence, succeeding in every sector: PM Modi
December 23rd, 11:00 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.PM Modi distributes more than 71,000 appointment letters to newly appointed recruits
December 23rd, 10:30 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.PM Modi meets Prime Minister of Kuwait
December 22nd, 06:38 pm
PM Modi held talks with His Highness Sheikh Ahmad Al-Abdullah Al-Ahmad Al-Sabah, PM of the State of Kuwait. The two leaders discussed a roadmap to strengthen the strategic partnership in areas including political, trade, investment, energy, defence, security, health, education, technology, cultural, and people-to-people ties.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 13th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
December 09th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ಸಂಪರ್ಕ ಒದಗಿಸಲು, ಪ್ರಯಾಣ ಸುಗಮವಾಗಿಸಲು, ಸಾಗಣೆ ವೆಚ್ಚ ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿತಗೊಳಿಸಲು ಮತ್ತು ಇಂಗಾಲಾಮ್ಲ ಹೊರಸೂಸುವಿಕೆ ತಗ್ಗಿಸಲು ಭಾರತೀಯ ರೈಲ್ವೆಯ ಮೂರು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ
November 25th, 08:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ರೂ.7,927 ಕೋಟಿ (ಅಂದಾಜು) ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ.ನೈಸರ್ಗಿಕ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಪ್ರಾರಂಭ
November 25th, 08:39 pm
ಈ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ (ಎನ್.ಎಂ.ಎನ್.ಎಫ್.) ಯೋಜನೆಯು 15 ನೇ ಹಣಕಾಸು ಆಯೋಗದ (2025-26) ವರೆಗೆ ಒಟ್ಟು ರೂ.2481 ಕೋಟಿ (ಭಾರತ ಸರ್ಕಾರದ ಪಾಲು - ರೂ. 1584 ಕೋಟಿ; ರಾಜ್ಯ ಸರ್ಕಾರಗಳ ಪಾಲು - ರೂ. 897 ಕೋಟಿ) ವೆಚ್ಚವನ್ನು ಹೊಂದಿದೆ.ನವೆಂಬರ್ 25 ರಂದು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
November 24th, 05:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಉದ್ಘಾಟಿಸಲಿದ್ದಾರೆ ಮತ್ತು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025 ಅನ್ನು ನವೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಾರಂಭಿಸಲಿದ್ದಾರೆ.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್ಸಿಸಿ ಕೆಡೆಟ್ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.PM Modi meets with President of Suriname
November 21st, 10:57 pm
PM Modi met with President Chandrikapersad Santokhi of Suriname on the sidelines of the 2nd India-CARICOM Summit in Georgetown, Guyana. The two leaders reviewed the progress of ongoing bilateral initiatives and discussed enhancing cooperation in defense and security, trade, agriculture, digital initiatives, UPI, ICT, healthcare, pharmaceuticals, capacity building, culture, and people-to-people ties.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಮಂತ್ರಿಯವರ ಭೇಟಿ
November 21st, 10:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಜಾರ್ಜ್ಟೌನ್ನಲ್ಲಿ 2 ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ನವೆಂಬರ್ 20 ರಂದು ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಿ ಡಾ ಕೀತ್ ರೌಲಿ ಅವರನ್ನು ಭೇಟಿಯಾದರು.