ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 15th, 11:20 am

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.

ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ

November 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

ಆಂಧ್ರಪ್ರದೇಶದ ಭೀಮಾವರಂನಲ್ಲಿ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜಯಂತಿ ಆಚರಣೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ

July 04th, 11:01 am

ಇಂದು, ಅತ್ಯಂತ ಶ್ರೀಮಂತ ಪರಂಪರೆಯನ್ನು ಹೊಂದಿರುವ ನಾಡಿಗೆ ಗೌರವ ಸಲ್ಲಿಸುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಅದೃಷ್ಟವೆಂದು ಭಾವಿಸುತ್ತೇನೆ! ಇಂದು, ಒಂದು ಕಡೆ, ದೇಶವು ಸ್ವಾತಂತ್ರ್ಯದ 75 ವರ್ಷಗಳ 'ಅಮೃತ ಮಹೋತ್ಸವ'ವನ್ನು ಆಚರಿಸುತ್ತಿದ್ದರೆ, ಮತ್ತೊಂದೆಡೆ ಇಂದು ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜಯಂತಿಯೂ ಹೌದು. ಇದೇ ಸಮಯದಲ್ಲಿ, ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ರಂಪಾ ದಂಗೆಗೆ 100 ವರ್ಷಗಳು ಸಹ ಪೂರ್ಣಗೊಳ್ಳುತ್ತಿವೆ. ಈ ಐತಿಹಾಸಿಕ ಸಂದರ್ಭದಲ್ಲಿ, ಮನ್ಯಂ ವೀರುಡು ಅಲ್ಲೂರಿ ಸೀತಾರಾಮ ರಾಜು ಅವರ ಪಾದಗಳಿಗೆ ನಮಸ್ಕರಿಸುವ ಮೂಲಕ ನಾನು ಇಡೀ ದೇಶದ ಪರವಾಗಿ ಗೌರವಪೂರ್ವಕ ಶ್ರದ್ಧಾಂಜಲಿಸಲ್ಲಿಸುತ್ತೇನೆ. ಇಂದು ಅವರ ಕುಟುಂಬ ಸದಸ್ಯರು ಸಹ ನಮ್ಮನ್ನು ಆಶೀರ್ವದಿಸಲು ಬಂದಿದ್ದಾರೆ. ನಾವು ನಿಜವಾಗಿಯೂ ಅದೃಷ್ಟವಂತರು. ಮಹಾನ್ ಪರಂಪರೆಗೆ ಸೇರಿದ ಕುಟುಂಬದ ಆಶೀರ್ವಾದವನ್ನು ಪಡೆಯುವ ಸುಯೋಗವನ್ನು ನಾವೆಲ್ಲರೂ ಹೊಂದಿದ್ದೇವೆ. ಆಂಧ್ರದ ಈ ನೆಲದ ಮಹಾನ್ ಬುಡಕಟ್ಟು ಸಂಪ್ರದಾಯಕ್ಕೆ, ಈ ಸಂಪ್ರದಾಯಕ್ಕೆ ಸೇರಿದ ಎಲ್ಲಾ ಮಹಾನ್ ಕ್ರಾಂತಿಕಾರಿಗಳಿಗೆ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗೆ ನಾನು ಗೌರವಪೂರ್ವಕವಾಗಿ ತಲೆಬಾಗುತ್ತೇನೆ.

PM launches year-long 125th birth anniversary celebration of legendary freedom fighter Alluri Sitarama Raju in Bhimavaram, Andhra Pradesh

July 04th, 11:00 am

PM Modi launched year-long 125th birth anniversary celebration of legendary freedom fighter Alluri Sitarama Raju in Bhimavaram, Andhra Pradesh. Terming Alluri Sitarama Raju a symbol of India’s culture, tribal identity, valour, ideals and values, the PM remarked that from the birth of Sitaram Raju Garu to his sacrifice, his life journey is an inspiration to all of us.