ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 24th, 05:42 pm
ಇದು ಮಂಗಳಕರ ನವರಾತ್ರಿ ಅವಧಿಯಾಗಿದೆ. ಇಂದು ಚಂದ್ರಘಂಟಾ ಮಾತೆಯ ಆರಾಧನಾ ದಿನವಾಗಿದೆ. ಇಂದು ಕಾಶಿಯ ಈ ಶುಭ ಸಂದರ್ಭದಲ್ಲಿ ನಾನು ನಿಮ್ಮ ನಡುವೆ ಇರುವುದು ನನ್ನ ಸೌಭಾಗ್ಯ. ಚಂದ್ರಘಂಟಾ ಮಾತೆಯ ಆಶೀರ್ವಾದದಿಂದ, ಇಂದು ಬನಾರಸ್‌ನ ಸಂತೋಷ ಮತ್ತು ಸಮೃದ್ಧಿಗೆ ಮತ್ತೊಂದು ಅಧ್ಯಾಯ ಸೇರ್ಪಡೆಯಾಗುತ್ತಿದೆ. ಇಂದು ಇಲ್ಲಿ ಸಾರ್ವಜನಿಕ ಸಾರಿಗೆ ʻರೋಪ್ ವೇʼಗೆ ಶಂಕುಸ್ಥಾಪನೆ ಮಾಡಲಾಗಿದೆ. ಬನಾರಸ್‌ನ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿಗಳ ಇತರ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಅಥವಾ ಶಂಕುಸ್ಥಾಪನೆ ಮಾಡಲಾಗಿದೆ. ಇವುಗಳಲ್ಲಿ ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಗಂಗಾ ಮಾತೆಯ ಸ್ವಚ್ಛತೆ, ಪ್ರವಾಹ ನಿಯಂತ್ರಣ, ಪೊಲೀಸ್ ಘಟಕ, ಕ್ರೀಡಾ ಘಟಕ ಮುಂತಾದ ಅನೇಕ ಯೋಜನೆಗಳು ಸೇರಿವೆ. ಇಂದು, ʻಐಐಟಿ ಬಿಎಚ್‌ಯುʼನಲ್ಲಿ 'ಮೆಷಿನ್ ಟೂಲ್ಸ್ ಡಿಸೈನ್ ಕುರಿತಾದ ಉತ್ಕೃಷ್ಟತಾ ಕೇಂದ್ರʼಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬನಾರಸ್ ಮತ್ತೊಂದು ವಿಶ್ವದರ್ಜೆಯ ಸಂಸ್ಥೆಯನ್ನು ಪಡೆಯಲಿದೆ. ಈ ಎಲ್ಲಾ ಯೋಜನೆಗಳಿಗಾಗಿ ಬನಾರಸ್ ಮತ್ತು ಪೂರ್ವಾಂಚಲದ ಜನರಿಗೆ ಅನೇಕ ಅಭಿನಂದನೆಗಳು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿಯವರು 1780 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು
March 24th, 01:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 1780 ಕೋಟಿ ರೂ.ಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ವಾರಾಣಸಿ ಕಂಟೋನ್ಮೆಂಟ್ ನಿಲ್ದಾಣದಿಂದ ಗೋಡೋಲಿಯಾವರೆಗಿನ ಪ್ರಯಾಣಿಕರ ರೋಪ್‌ವೇಗೆ ಶಂಕುಸ್ಥಾಪನೆ, ನಮಾಮಿ ಗಂಗಾ ಯೋಜನೆಯಡಿ ಭಗವಾನ್‌ಪುರದಲ್ಲಿ 55 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ, ಸೇವಾಪುರಿಯ ಇಸರ್ವಾರ್ ಗ್ರಾಮದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಿಂದ ನಿರ್ಮಾಣಗೊಳ್ಳಲಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕ, ಸಿಗ್ರಾ ಸ್ಟೇಡಿಯಂನ 2 ಮತ್ತು 3 ನೇ ಹಂತಗಳ ಪುನರಾಭಿವೃದ್ಧಿ, ಭರ್ತರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಟ್ಟೆ ಬದಲಾಯಿಸುವ ಕೊಠಡಿಗಳೊಂದಿಗೆ ತೇಲುವ ಜೆಟ್ಟಿ ಈ ಯೋಜನೆಗಳಲ್ಲಿ ಸೇರಿವೆ. ಪ್ರಧಾನಮಂತ್ರಿಯವರು ಜಲ ಜೀವನ್ ಮಿಷನ್ ಅಡಿಯಲ್ಲಿ 19 ಕುಡಿಯುವ ನೀರಿನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು, ಇದು 63 ಗ್ರಾಮ ಪಂಚಾಯತ್‌ಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಮಿಷನ್ ಅಡಿಯಲ್ಲಿ 59 ಕುಡಿಯುವ ನೀರಿನ ಯೋಜನೆಗಳ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಿದರು. ಹಣ್ಣುಗಳು ಮತ್ತು ತರಕಾರಿಗಳ ಶ್ರೇಣೀಕರಣ, ವಿಂಗಡಣೆ ಮತ್ತು ಸಂಸ್ಕರಣೆಗಾಗಿ ಕಾರ್ಖಿಯಾನ್‌ನಲ್ಲಿ ನಿರ್ಮಿಸಿರುವ ಸಮಗ್ರ ಪ್ಯಾಕ್ ಹೌಸ್ ಅನ್ನು ಅವರು ದೇಶಕ್ಕೆ ಸಮರ್ಪಿಸಿದರು. ವಾರಾಣಸಿ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆ ಮಾಡಿದರು.