ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ

September 30th, 08:59 pm

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 44ನೇ ಪ್ರಗತಿ ಸಂವಾದ ಸಭೆ

August 28th, 06:58 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಸಕ್ರಿಯ ಆಡಳಿತ ಮತ್ತು ಸಮಯೋಚಿತ(ಕಾಲಮಿತಿಯಲ್ಲಿ) ಅನುಷ್ಠಾನಕ್ಕಾಗಿ ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ(ಐಸಿಟಿ) ಆಧಾರಿತ ಬಹುಮಾದರಿ ವೇದಿಕೆ “ಪ್ರಗತಿ”ಯ 44ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎನ್ ಡಿ ಎ ಸರ್ಕಾರದ 3ನೇ ಅವಧಿಯಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

‘ನಗರ ಯೋಜನೆ, ಅಭಿವೃದ್ಧಿ ಮತ್ತು ನೈರ್ಮಲ್ಯ’ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 01st, 10:20 am

ನಗರಾಭಿವೃದ್ಧಿ - ಈ ಪ್ರಮುಖ ವಿಷಯದ ಸಮಾಲೋಚನೆ ಕುರಿತ ಬಜೆಟ್ ವೆಬಿನಾರ್‌ಗೆ ನಿಮ್ಮೆಲ್ಲರಿಗೂ ಸ್ವಾಗತ.

​​​​​​​‘ನಗರ ಯೋಜನೆ, ಅಭಿವೃದ್ಧಿ ಮತ್ತು ನೈರ್ಮಲ್ಯʼಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

March 01st, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಯೋಜನೆ ಕೇಂದ್ರಿತ ನಗರಾಭಿವೃದ್ಧಿ’ವಿಷಯವನ್ನು ಕುರಿತ ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಬಜೆಟ್ 2023 ರಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್‌ಗಳ ಸರಣಿಯಲ್ಲಿ ಇದು ಆರನೆಯದು.

ಲಕ್ನೋದಲ್ಲಿ ಎಕ್ಸ್ಪೋ ಮತ್ತು ಆಜಾ಼ದಿ@75 ಸಮ್ಮೇಳನದ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

October 05th, 10:31 am

ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಲಕ್ನೋದ ಸಂಸದ ಮತ್ತು ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಹರ್ದೀಪ್ ಸಿಂಗ್ ಪುರಿ ಜೀ, ಮಹೇಂದ್ರ ನಾಥ ಪಾಂಡೇ ಜೀ, ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯಾ ಜೀ, ಶ್ರೀ ದಿನೇಶ ಶರ್ಮಾ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕೌಶಲ್ ಕಿಶೋರ್ ಜೀ, ರಾಜ್ಯ ಸರಕಾರದ ಸಚಿವರೇ, ಸಂಸದರೇ, ಶಾಸಕರೇ, ದೇಶದ ವಿವಿಧ ಭಾಗಗಳ ಎಲ್ಲಾ ಗೌರವಾನ್ವಿತ ಸಚಿವರೇ, ಇತರ ಎಲ್ಲಾ ಗಣ್ಯರೇ ಮತ್ತು ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ ಮತ್ತು ಸಹೋದರರೇ,

ಲಕ್ನೋದಲ್ಲಿ ‘ಆಜಾದಿ@75- ನವ ನಗರ ಭಾರತ: ನಗರ ಚಿತ್ರಣದಲ್ಲಿ ಪರಿವರ್ತನೆ’ ಕುರಿತ ಸಮ್ಮೇಳನ ಮತ್ತು ಎಕ್ಸ್‌ಪೋ ಉದ್ಘಾಟಿಸಿದ ಪ್ರಧಾನಮಂತ್ರಿ

October 05th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್‌ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ವಚ್ಛ ಭಾರತ ಅಭಿಯಾನ ಮತ್ತು ಅಮೃತ್ ಅಭಿಯಾನದ ಪಯಣದಲ್ಲೂ ಒಂದು ಮಹೋದ್ದೇಶವಿದೆ, ಗೌರವವಿದೆ, ಘನತೆ ಇದೆ, ಒಂದು ದೇಶದ ಮಹತ್ವಾಕಾಂಕ್ಷೆ ಇದೆ ಮತ್ತು ಮಾತೃಭೂಮಿಯ ಬಗ್ಗೆ ಎಣೆಯಿಲ್ಲದ ಪ್ರೀತಿಯೂ ಇದೆ

October 01st, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಟಲ್ ಅಭಿಯಾನ ಫಾರ್ ಪುನಶ್ಚೇತನ ಮತ್ತು ನಗರ ಪರಿವರ್ತನೆ 2.0ಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್, ಶ್ರೀ ಕೌಶಲ್ ಕಿಶೋರ್, ಶ್ರೀ ಬಿಶ್ವೇಶ್ವರ್ ತುಡು, ರಾಜ್ಯಗಳ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಮೇಯರುಗಳು ಮತ್ತು ಅಧ್ಯಕ್ಷರು ಹಾಗೂ ಪುರಸಭೆ, ಪಾಲಿಕೆಗಳ ಆಯುಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಮೃತ್ 2.0ಕ್ಕೆ ಪ್ರಧಾನಮಂತ್ರಿ ಚಾಲನೆ

October 01st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಟಲ್ ಅಭಿಯಾನ ಫಾರ್ ಪುನಶ್ಚೇತನ ಮತ್ತು ನಗರ ಪರಿವರ್ತನೆ 2.0ಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್, ಶ್ರೀ ಕೌಶಲ್ ಕಿಶೋರ್, ಶ್ರೀ ಬಿಶ್ವೇಶ್ವರ್ ತುಡು, ರಾಜ್ಯಗಳ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಮೇಯರುಗಳು ಮತ್ತು ಅಧ್ಯಕ್ಷರು ಹಾಗೂ ಪುರಸಭೆ, ಪಾಲಿಕೆಗಳ ಆಯುಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಅಕ್ಟೋಬರ್ 1ರಂದು ʻಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಮೃತ್ 2.0ʼಗೆ ಚಾಲನೆ ನೀಡಲಿರುವ ಪ್ರಧಾನಿ

September 30th, 01:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು `ಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಟಲ್ ನಗರ ಪುನರುಜ್ಜೀವ ಮತ್ತು ಪರಿವರ್ತನೆ ಯೋಜನೆ 2.0ʼಗೆ (ಅಮೃತ್‌ 2.0) 2021ರ ಅಕ್ಟೋಬರ್ 1ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಚಾಲನೆ ನೀಡಲಿದ್ದಾರೆ.