ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಡುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 23rd, 11:01 am
ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ದೇಶದ ಗೃಹ ಸಚಿವ ಶ್ರೀ ಅಮಿತ್ ಭಾಯಿ ಶಾ, ಅಂಡಮಾನ್ ಮತ್ತು ನಿಕೋಬಾರ್ ನ ಲೆಫ್ಟಿನೆಂಟ್ ಗವರ್ನರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ನಮ್ಮ ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ಭಾರತೀಯ ಕೋಸ್ಟ್ ಗಾರ್ಡ್ ನ ಮಹಾನಿರ್ದೇಶಕರು, ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ ನ ಕಮಾಂಡರ್-ಇನ್-ಚೀಫ್, ಎಲ್ಲಾ ಅಧಿಕಾರಿಗಳು, ಪರಮವೀರ ಚಕ್ರದ ಧೈರ್ಯಶಾಲಿ ಸೈನಿಕರ ಕುಟುಂಬ ಸದಸ್ಯರು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ 21 ಅತಿ ದೊಡ್ಡ ಅನಾಮಧೇಯ ದ್ವೀಪಗಳಿಗೆ 21 ʻಪರಮವೀರ ಚಕ್ರʼ ಪ್ರಶಸ್ತಿ ಪುರಸ್ಕೃತರ ಹೆಸರಿಡುವ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ
January 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ಅತಿ ದೊಡ್ಡ ಅನಾಮಧೇಯ ದ್ವೀಪಗಳಿಗೆ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ನಾಮಕರಣ ಮಾಡುವ ಸಮಾರಂಭದಲ್ಲಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದ್ದರು. ಇದೇ ವೇಳೆ, ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೇತಾಜಿ ಅವರಿಗೆ ಸಮರ್ಪಿತವಾದ ʻರಾಷ್ಟ್ರೀಯ ಸ್ಮಾರಕʼದ ಮಾದರಿಯನ್ನು ಪ್ರಧಾನಮಂತ್ರಿಯವರು ಅನಾವರಣಗೊಳಿಸಿದರು."ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಸಮಗ್ರ ವಿವಿಧೋದ್ದೇಶ ನಿಗಮ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ: 25 ಕೋಟಿ ಮೂಲ ಬಂಡವಾಳದೊಂದಿಗೆ ಆ ಭಾಗದ ಅಭಿವೃದ್ಧಿಗೆ ಸ್ಥಾಪನೆಯಾಗುತ್ತಿರುವ ಮೊದಲ ನಿಗಮ "
July 22nd, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಸಮಗ್ರ ವಿವಿಧೋದ್ದೇಶ ಮೂಲಸೌಕರ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮೋದನೆ ನೀಡಿದೆ.