ಒಂದು ರಾಷ್ಟ್ರ ಒಂದು ಚಂದಾದಾರಿಕೆ (ಒ ಎನ್ ಒ ಎಸ್)ಗೆ ಸಂಪುಟದ ಅನುಮೋದನೆ

November 25th, 08:42 pm

ಒಂದು ರಾಷ್ಟ್ರ ಒಂದು ಚಂದಾದಾರಿಕೆಯು ಸರ್ಕಾರಿ ಸಂಸ್ಥೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಶೋಧಕರಿಗೆ ಸಂಶೋಧನೆಯನ್ನು ಸುಲಭಗೊಳಿಸುವ ಮೂಲಕ ಜಾಗತಿಕ ಸಂಶೋಧನಾ ಪರಿಸರ ವ್ಯವಸ್ಥೆಯಲ್ಲಿ ಭಾರತವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಒಂದು ಸಕಾಲಿಕ ಹೆಜ್ಜೆಯಾಗಿದೆ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ʻಸೆಮಿಕಾನ್ ಇಂಡಿಯಾ-2024ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡದ ಅನುವಾದ

September 11th, 12:00 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಮತ್ತು ಜಿತಿನ್ ಪ್ರಸಾದ ಅವರೇ, ಜಾಗತಿಕ ಸೆಮಿ ಕಂಡಕ್ಟರ್‌ (ಸೆಮಿ ಕಂಡಕ್ಟರ್‌) ಉದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖರೇ, ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಪ್ರಪಂಚದ ಎಲ್ಲಾ ಪಾಲುದಾರರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ! ಎಲ್ಲರಿಗೂ ನಮಸ್ಕಾರ!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

September 11th, 11:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿರುವ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಶ್ರೀ ಮೋದಿ ಅವರು ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ವೀಕ್ಷಿಸಿದರು. ಸೆಪ್ಟೆಂಬರ್ 11ರಿಂದ 13ರ ವರೆಗೆ 3 ದಿನಗಳ ಕಾಲ ನಡೆಯುವ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸಲಿತ್ತದೆ, ಇದು ಸೆಮಿಕಂಡಕ್ಟರ್ ವಲಯದಲ್ಲಿ ಭಾರತವನ್ನು ಜಾಗತಿಕ ಗಮ್ಯತಾಣವಾಗಿ ರೂಪಿಸಲಿದೆ.

ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ

September 10th, 04:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.