ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಡಿಸೆಂಬರ್ 4ರಂದು ಡೆಹ್ರಾಡೂನ್‌ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
December 01st, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.