ಇಂಡೋನೇಷ್ಯಾದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತುಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ
October 11th, 08:15 am
ಭಾರತವು ಆಸಿಯಾನ್ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ
October 11th, 08:10 am
ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.21ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರೀಯ ಹೇಳಿಕೆ ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 10th, 08:37 pm
ನಿಮ್ಮ ಅಮೂಲ್ಯವಾದ ಒಳನೋಟಗಳು ಮತ್ತು ಸಲಹೆಗಳನ್ನು ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಆಸಿಯಾನ್ ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಬಲಪಡಿಸಲು ನಾವು ಬದ್ಧರಾಗಿದ್ದೇವೆ. ನಾವು ಒಟ್ಟಾಗಿ ಮನುಕುಲದ ಕಲ್ಯಾಣ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಶ್ರಮಿಸುವುದನ್ನು ಮುಂದುವರಿಸುತ್ತೇವೆ ಎಂಬ ವಿಶ್ವಾಸ ನನಗಿದೆ.ಲಾವೋ ಪಿಡಿಆರ್ ನಲ್ಲಿ 21ನೇ ಆಸಿಯಾನ್- ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮಾರೋಪ ಭಾಷಣದ ಅನುವಾದ
October 10th, 08:13 pm
ಇಂದಿನ ನಮ್ಮ ಸಕಾರಾತ್ಮಕ ನಿರ್ಧಾರಗಳಿಗೆ ಮತ್ತು ನಿಮ್ಮ ಅಮೂಲ್ಯ ಆಲೋಚನೆಗಳು ಮತ್ತು ಸಲಹೆಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಬ್ರೂನೈ ಸುಲ್ತಾನರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಇಂಗ್ಲೀಷ್ ಅನುವಾದ
September 04th, 12:32 pm
ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಮಹಾರಾಜರು ಮತ್ತು ಇಡೀ ರಾಜಮನೆತನಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಬ್ರೂನೈಗೆ ಭಾರತದ ಪ್ರಧಾನಮಂತ್ರಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಆದಾಗ್ಯೂ, ಇಲ್ಲಿ ನಾನು ಪಡೆದಿರುವ ಆತ್ಮೀಯತೆ ಮತ್ತು ಗೌರವ ನಮ್ಮ ದೇಶಗಳ ನಡುವಿನ ಶತಮಾನಗಳ ಹಳೆಯ ಬಾಂಧವ್ಯದ ಪ್ರತಿ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ.ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ
August 20th, 08:39 pm
2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ
July 09th, 09:54 pm
1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.PM meets Foreign Ministers and Representatives of ASEAN
June 16th, 03:00 pm
The Prime Minister, Shri Narendra Modi met Foreign Ministers and Representatives of ASEAN today.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕಾಂಬೋಡಿಯಾ ಪ್ರಧಾನಿ ಶ್ರೀ ಸಮದೇಚ್ ಅಕ್ಕ ಮೋಹ ಸೇನಾ ಪದೆಯಿ ತೆಚೊ ಹುನ್ ಸೇನ್ ನಡುವೆ ವರ್ಚುವಲ್ ಸಭೆ ನಡೆಯಿತು
May 18th, 08:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾಂಬೋಡಿಯಾದ ಪ್ರಧಾನ ಮಂತ್ರಿ ಸಂದೇಚ್ ಅಕ್ಕ ಮೋಹ ಸೇನಾ ಪಡೆಯ ಟೆಚೋ ಹುನ್ ಸೇನ್ ಅವರೊಂದಿಗೆ ವರ್ಚುವಲ್ ಸಭೆ ನಡೆಸಿದರು.18ನೇ ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು
October 28th, 12:35 pm
ಈ ವರ್ಷವೂ ನಾವು ನಮ್ಮ ಸಾಂಪ್ರದಾಯಿಕ ಕೌಂಟುಂಬಿಕ ಫೋಟೋ ತೆಗೆಸಿಕೊಳ್ಳಲು ನಮಗೆ ಸಾಧ್ಯವಾಗಿಲ್ಲ. ಆದರೂ ವರ್ಚ್ಯುಲ್ ರೂಪದಲ್ಲಿ ನಾವು ʻಆಸಿಯಾನ್-ಭಾರತ ಶೃಂಗಸಭೆʼಯ ಸಂಪ್ರದಾಯದ ನಿರಂತರತೆಯನ್ನು ಉಳಿಸಿಕೊಂಡಿದ್ದೇವೆ. 2021ರಲ್ಲಿ ಯಶಸ್ವಿಯಾಗಿ ʻಆಸಿಯಾನ್ʼ ಅಧ್ಯಕ್ಷ ಸ್ಥಾನ ವಹಿಸಿದ ಬ್ರೂನೈ ಸುಲ್ತಾನರನ್ನು ನಾನು ಅಭಿನಂದಿಸಲು ಬಯಸುತ್ತೇನೆ.16ನೇ ಪೂರ್ವ ಏಷ್ಯಾ ಸಮಾವೇಶದಲ್ಲಿ ಪಾಲ್ಗೊಂಡ ಪ್ರಧಾನ ಮಂತ್ರಿ
October 27th, 10:28 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಮೂಲಕ ಆಯೋಜಿತವಾಗಿದ್ದ 16ನೇ ಪೂರ್ವ ಏಷ್ಯಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪೂರ್ವ ಏಷ್ಯಾ ಸಮಾವೇಶ ಅಸಿಯಾನ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಬ್ರೂನೈ, ಈ ಸಮಾವೇಶದ ಪ್ರಾಯೋಜಕತ್ವ ವಹಿಸಿತ್ತು. ಆಸ್ಟ್ರೇಲಿಯಾ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ರಷ್ಯಾ, ಅಮೆರಿಕ ಮತ್ತು ಭಾರತ ಸೇರಿದಂತೆ ಪೂರ್ವ ಏಷ್ಯಾ ಮತ್ತು ಅಸಿಯಾನ್ ರಾಷ್ಟ್ರಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದವು. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡ 7ನೇ ಪೂರ್ವ ಏಷ್ಯಾ ಸಮಾವೇಶ ಇದಾಗಿದೆ.18ನೇ ʻಆಸಿಯಾನ್-ಭಾರತ ಶೃಂಗಸಭೆʼ (ಅಕ್ಟೋಬರ್ 28, 2021) ಮತ್ತು 16ನೇ ʻಪೂರ್ವ ಏಷ್ಯಾ ಶೃಂಗಸಭೆʼ (ಅಕ್ಟೋಬರ್ 27, 2021)
October 25th, 07:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೂನೈ ಸುಲ್ತಾನ್ ಅವರ ಆಹ್ವಾನದ ಮೇರೆಗೆ 2021ರ ಅಕ್ಟೋಬರ್ 28ರಂದು ವರ್ಚ್ಯುಯಲ್ ಮಾದರಿಯಲ್ಲಿ ನಡೆಯಲಿರುವ 18ನೇ ʻಆಸಿಯಾನ್-ಭಾರತ ಶೃಂಗಸಭೆʼಯಲ್ಲಿ ಭಾಗವಹಿಸಲಿದ್ದಾರೆ. ಈ ಶೃಂಗಸಭೆಯಲ್ಲಿ ಆಸಿಯಾನ್ ರಾಷ್ಟ್ರಗಳ/ಸರ್ಕಾರಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.