ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಡಿಸೆಂಬರ್ 6 ರಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಲಿರುವ ಪ್ರಧಾನಮಂತ್ರಿ
December 05th, 06:28 pm
ಈಶಾನ್ಯ ಭಾರತದ ಸಾಂಸ್ಕೃತಿಕ ಚೈತನ್ಯವನ್ನು ಪ್ರದರ್ಶಿಸುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಷ್ಟಲಕ್ಷ್ಮಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.