ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.