
'ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 06th, 10:30 am
ಕೋವಿಡ್ ಪೂರ್ವ ಮತ್ತು ಸಾಂಕ್ರಾಮಿಕ ನಂತರದ ಕಾಲಘಟ್ಟದಲ್ಲಿ ಆರೋಗ್ಯ ಸಂರಕ್ಷಣಾ ವಲಯವನ್ನು ಗಮನಿಸಿದರೆ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಸಮೃದ್ಧ ದೇಶಗಳ ಅಭಿವೃದ್ಧಿ ಹೊಂದಿದ ಆರೋಗ್ಯ ವ್ಯವಸ್ಥೆಗಳು ಸಹ ಕುಸಿಯುತ್ತವೆ ಎಂಬುದನ್ನು ಕೊರೊನ ಜಗತ್ತಿಗೆ ತೋರಿಸಿದೆ ಮತ್ತು ಪಾಠ ಕಲಿಸಿದೆ ಎಂಬುದನ್ನು ಕಾಣಬಹುದು. ಹಾಗಾಗಿ, ಆರೋಗ್ಯ ಸಂರಕ್ಷಣೆಯ ಮೇಲೆ ಇಡೀ ವಿಶ್ವದ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ, ಆದರೆ ಭಾರತದ ವಿಧಾನವು ಆರೋಗ್ಯ ರಕ್ಷಣೆಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ನಾವು ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದೇವೆ. ಒಟ್ಟಾರೆ ಸ್ವಾಸ್ಥ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ, ನಾವು ಇಡೀ ವಿಶ್ವದ ಮುಂದೆ ಒಂದು ದೃಷ್ಟಿಯನ್ನು ಮುಂದಿಟ್ಟಿದ್ದೇವೆ. ಅದೇ 'ಒಂದು ಭೂಮಿ-ಒಂದು ಆರೋಗ್ಯ'. ಮಾನವರು, ಪ್ರಾಣಿಗಳು ಅಥವಾ ಸಸ್ಯಗಳಾಗಿದ್ದರೂ ಸಕಲ ಜೀವರಾಶಿಗಳ ಸಮಗ್ರ ಆರೋಗ್ಯ ರಕ್ಷಣೆಗೆ ನಾವು ಒತ್ತು ನೀಡುತ್ತಿದ್ದೇವೆ ಎಂದರ್ಥ. ಕೊರೊನಾ ಜಾಗತಿಕ ಸಾಂಕ್ರಾಮಿಕವು ಪೂರೈಕೆ ಸರಪಳಿಯ ಪ್ರಾಮುಖ್ಯವನ್ನು ಸಹ ಒತ್ತಿಹೇಳಿದೆ. ಸಾಂಕ್ರಾಮಿಕ ರೋಗವು ಉತ್ತುಂಗದಲ್ಲಿದ್ದಾಗ, ಔಷಧಿಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳಂತಹ ಜೀವ ಉಳಿಸುವ ವಸ್ತುಗಳು ದುರದೃಷ್ಟವಶಾತ್ ಕೆಲವು ದೇಶಗಳಿಗೆ ಆಯುಧಗಳಾಗಿವೆ. ಕಳೆದ ಕೆಲವು ವರ್ಷಗಳ ಬಜೆಟ್‌ನಲ್ಲಿ ಭಾರತವು ಈ ಎಲ್ಲ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡಿದೆ. ವಿದೇಶಗಳ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ನಾವು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ, ಈ ನಿಟ್ಟಿನಲ್ಲಿ ಎಲ್ಲ ಪಾಲುದಾರರು ಪ್ರಮುಖ ಪಾತ್ರವನ್ನು ವಹಿಸಬೇಕು.
ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ' ವಿಷಯದ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವದ 12 ಬಜೆಟ್ ನಂತರದ ವೆಬಿನಾರ್ ಗಳ ಸರಣಿಯಲ್ಲಿ ಇದು ಒಂಬತ್ತನೆಯದು.
ಹೊಸ ಸ್ಕ್ರ್ಯಾಪ್ಪಿಂಗ್ ನೀತಿಯು ಸಂಪತ್ತಿನ ತ್ಯಾಜ್ಯ ಮತ್ತು ಪಠ್ಯಕ್ರಮದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಕೊಂಡಿಯಾಗಿದೆ: ಪ್ರಧಾನಿ ಮೋದಿ
August 13th, 11:01 am
ರಾಷ್ಟ್ರೀಯ ಆಟೋಮೊಬೈಲ್ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಾರಂಭಿಸುವಾಗ, ಪ್ರಧಾನಿ ಮೋದಿ ಈ ನೀತಿಯು ಆಟೋ ಕ್ಷೇತ್ರಕ್ಕೆ ಮತ್ತು ಹೊಸ ಭಾರತದ ಚಲನಶೀಲತೆಗೆ ಹೊಸ ಗುರುತನ್ನು ನೀಡಲಿದೆ ಎಂದು ಹೇಳಿದರು. ಅವರು ಹೇಳಿದರು, ಚಲನಶೀಲತೆಯಲ್ಲಿ ಆಧುನಿಕತೆ, ಪ್ರಯಾಣ ಮತ್ತು ಸಾರಿಗೆಯ ಹೊರೆಯನ್ನು ಕಡಿಮೆ ಮಾಡುವುದು ಮಾತ್ರವಲ್ಲ, ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. 21 ನೇ ಶತಮಾನದ ಭಾರತವು ಸ್ವಚ್ಛ, ದಟ್ಟಣೆ ಮುಕ್ತ ಮತ್ತು ಅನುಕೂಲಕರ ಚಲನಶೀಲತೆಯ ಗುರಿಯಾಗಿದೆ, ಇದು ಇಂದಿನ ಅಗತ್ಯ .ಗುಜರಾತ್ ನ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಹೂಡಿಕೆದಾರರ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮ ಅಥವಾ ವಾಹನ ಗುಜರಿ ನೀತಿಯಡಿಯಲ್ಲಿ ವಾಹನ ಗುಜರಿ ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆಯನ್ನು ಆಯೋಜಿಸಲಾಗಿತ್ತು. ಅಲ್ಲದೆ ಅಲ್ಲಂಗ್ ನಲ್ಲಿ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಹಡಗು ಒಡೆಯುವ ಉದ್ಯಮದ ಜತೆ ಸಮನ್ವಯ ಸಾಧಿಸುವುದಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹಾಗೂ ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಪ್ರಧಾನ ಮಂತ್ರಿ
August 13th, 10:22 am
ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಆಗಸ್ಟ್ 13ರಂದು ಗುಜರಾತ್ ನ ಹೂಡಿಕೆದಾರರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
August 11th, 09:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಗುಜರಾತ್ನಲ್ಲಿ ನಡೆಯಲಿರುವ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ವಾಹನ ಗುಜರಿ(ನಿರುಪಯುಕ್ತಗೊಳಿಸುವುದು) ನೀತಿ ಅಥವಾ ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮದಡಿ ವಾಹನ ಗುಜರಿ (ಸ್ಕ್ರಾಪಿಂಗ್ ) ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆ ಆಯೋಜಿಸಲಾಗಿದೆ. ಅಲ್ಲದೆ ಅಲಾಂಗ್ ನಲ್ಲಿ ಹಡಗುಗಳನ್ನು ಒಡೆಯುವ ಉದ್ಯಮದ ಜೊತೆಗೆ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಸಮನ್ವಯ ಸಾಧಿಸಲು ಒತ್ತು ನೀಡಲಾಗುವುದು.