40.2 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಎನ್ಎಚ್-334ಬಿ ಅಭಿವೃದ್ಧಿಗೆ ಬಾಳಿಕೆ ಬರುವ ಕಚ್ಚಾವಸ್ತುಗಳ ಬಳಕೆ; ಪ್ರಧಾನ ಮಂತ್ರಿ ಶ್ಲಾಘನೆ

June 14th, 10:57 pm

40.2 ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಎನ್ಎಚ್-334ಬಿ ಅಭಿವೃದ್ಧಿಪಡಿಸಲು ಬಾಳಿಕೆ ಬರುವ ಕಚ್ಚಾವಸ್ತುಗಳನ್ನು ಬಳಕೆ ಮಾಡಿರುವ ಕ್ರಮಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವೆಚ್ಚ ಪರಿಣಾಮಕಾರಿ ಮತ್ತು ಪರಿಸರ-ಸ್ನೇಹಿ ಆಗಿರುವ ಕಚ್ಚಾ ವಸ್ತುಗಳಾದ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಹಾರು ಬೂದಿ ಬಳಕೆಗೆ ಆದ್ಯತೆ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.. ಉತ್ತರ ಪ್ರದೇಶ-ಹರಿಯಾಣ ಗಡಿ ಭಾಗದ ಬಾಗ್ಪತ್ ನಿಂದ ಆರಂಭವಾಗುವ ಈ ರಾಷ್ಟ್ರೀಯ ಹೆದ್ದಾರಿಯು ಹರಿಯಾಣದ ರೊಹ್ನಾವರೆಗೆ ವ್ಯಾಪಿಸಿದೆ.

ಡಿಸೆಂಬರ್ 4ರಂದು ಡೆಹ್ರಾಡೂನ್‌ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

December 01st, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.