ಅಧ್ಯಕ್ಷರಾದ ಬೈಡನ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
August 26th, 10:03 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಿಂದ ದೂರವಾಣಿ ಕರೆ ಸ್ವೀಕರಿಸಿದರು
August 16th, 04:30 pm
ಪ್ರಧಾನಿ ಮೋದಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊ. ಮೊಹಮ್ಮದ್ ಯೂನಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು, ಅಲ್ಲಿ ಅವರು ಪ್ರಜಾಪ್ರಭುತ್ವ ಮತ್ತು ಶಾಂತಿಯುತ ಬಾಂಗ್ಲಾದೇಶವನ್ನು ಬೆಂಬಲಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. ಅಲ್ಪಸಂಖ್ಯಾತ ಸಮುದಾಯಗಳನ್ನು, ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.ಬಾಂಗ್ಲಾದೇಶದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ನೊಬೆಲ್ ಪುರಸ್ಕೃತ ಪ್ರೊಫೆಸರ್ ಮೊಹಮದ್ ಯೂನಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 08th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ರಚನೆಯಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಅಭಿನಂದಿಸಿದರು.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ಪ್ರಧಾನಮಂತ್ರಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ
June 05th, 08:04 pm
ಬಾಂಗ್ಲಾದೇಶದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶೇಖ್ ಹಸೀನಾ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ 18ನೇ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ ಡಿ ಎ) ವಿಜಯಕ್ಕೆ ದೂರವಾಣಿ ಕರೆಯ ಮೂಲಕ ಅಭಿನಂದನೆ ಸಲ್ಲಿಸಿದರು.ಸತತ ನಾಲ್ಕನೇ ಅವಧಿಗೆ ಗೆಲುವಿಗಾಗಿ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 08th, 07:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದರು ಮತ್ತು ಬಾಂಗ್ಲಾದೇಶದ ಸಂಸತ್ತಿನ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಐತಿಹಾಸಿಕ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು.ತ್ರಿಪುರಾದ ಖೋವಾಯಿ-ಹರಿನಾ ರಸ್ತೆಯ 135 ಕಿ.ಮೀ. ವಿಸ್ತರಣೆ ಮತ್ತು ಸುಧಾರಣೆಗೆ ಸಂಪುಟದ ಅನುಮೋದನೆ
December 27th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಭೆ, ತ್ರಿಪುರಾ ರಾಜ್ಯದಲ್ಲಿ ಒಟ್ಟು 134.913 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ-208ರ ಕಿ.ಮೀ 101.300 (ಖೋವಾಯಿ) ರಿಂದ ಕಿ.ಮೀ 236.213 (ಹರಿನಾ) ವರೆಗಿನ ರಸ್ತೆಯನ್ನು ಎರಡು ಪಥಗಳಾಗಿ ಅಭಿವೃದ್ಧಿಪಡಿಸಲು ಮತ್ತು ಅಗಲೀಕರಣ ಮಾಡಲು ತನ್ನ ಅನುಮೋದನೆ ನೀಡಿದೆ.ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳು ನವೆಂಬರ್ ಒಂದರಂದು ಮೂರು ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ
October 31st, 05:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು 1 ನವೆಂಬರ್ 2023 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಈ ಮೂರು ಯೋಜನೆಗಳು ಅಖೌರಾ - ಅಗರ್ತಲಾ ಗಡಿಯಾಚೆಗಿನ ರೈಲು ಸಂಪರ್ಕ ; ಖುಲ್ನಾ - ಮೊಂಗ್ಲಾ ಬಂದರು ರೈಲು ಮಾರ್ಗ; ಮತ್ತು ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ನ ಘಟಕ – II ಅನ್ನು ಒಳಗೊಂಡಿವೆ.ಪುರುಷರ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತೀಯ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಗಳಿಸಿದ ಅಭೂತಪೂರ್ವ ವಿಜಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು
October 19th, 10:25 pm
ವಿಶ್ವಕಪ್ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಅಭೂತಪೂರ್ವ ಗೆಲುವಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.ಜಾಗತಿಕ ಜೈವಿಕ ಇಂಧನ ಒಕ್ಕೂಟ (ಜಿಬಿಎ) ಆರಂಭ
September 09th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರ, ಬಾಂಗ್ಲಾದೇಶ, ಇಟಲಿ, ಯುಎಸ್ಎ, ಬ್ರೆಜಿಲ್, ಅರ್ಜೆಂಟೀನಾ, ಮಾರಿಷಸ್ ಮತ್ತು ಯುಎಇ ನಾಯಕರೊಂದಿಗೆ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಚಾಲನೆ ನೀಡಿದರು.ಪ್ರಧಾನಮಂತ್ರಿಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿದರು
September 08th, 07:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. 2023 ರ ಸೆಪ್ಟೆಂಬರ್ 9-10 ರಂದು ಜಿ -20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಹಸೀನಾ ಭಾರತಕ್ಕೆ ಅತಿಥಿ ರಾಷ್ಟ್ರವಾಗಿ ಭೇಟಿ ನೀಡುತ್ತಿದ್ದಾರೆ.ನವದೆಹಲಿಯ ತಮ್ಮ ನಿವಾಸದಲ್ಲಿಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಮಂತ್ರಿ
September 08th, 01:40 pm
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.ಅಸ್ಸಾಂ ಮತ್ತು ಇಡೀ ಈಶಾನ್ಯದಲ್ಲಿ ಪೆಟ್ರೋ ಕೆಮಿಕಲ್ಸ್ ವಲಯವನ್ನು ಉತ್ತೇಜಿಸುವ ಪ್ರಯತ್ನಗಳಿಗೆ ಪ್ರಧಾನಿ ಶ್ಲಾಘನೆ
July 03rd, 10:02 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಸ್ಸಾಂ ಪೆಟ್ರೋ ಕೆಮಿಕಲ್ ಘಟಕದಿಂದ ಬಾಂಗ್ಲಾದೇಶಕ್ಕೆ ಮೆಥನಾಲ್ ನ್ನು ಮೊದಲ ಬಾರಿಗೆ ರವಾನೆ ಮಾಡಿರುವ ಕ್ರಮವನ್ನು ಶ್ಲಾಘಿಸಿದ್ದಾರೆ, ಇದು ಅಸ್ಸಾಂ ರಾಜ್ಯವನ್ನು ಪೆಟ್ರೋ ಕೆಮಿಕಲ್‌ಗಳ ಪ್ರಮುಖ ರಫ್ತುದಾರ ರಾಜ್ಯವನ್ನಾಗಿ ಸ್ಥಾಪಿಸುವ ಪ್ರಯತ್ನವಾಗಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ
March 22nd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 21st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ಸಲ್ಲಿಕೆ
March 19th, 07:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ದಿನ ಅವರಿಗೆ ಗೌರವ ಸಲ್ಲಿಸಿದ್ದಾರೆ.`ಭಾರತ-ಬಾಂಗ್ಲಾದೇಶ ಸ್ನೇಹ ಕೊಳವೆ ಮಾರ್ಗʼದ (ಇಂಧನ ಕೊಳವೆ ಮಾರ್ಗ) ಜಂಟಿ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಕನ್ನಡ ಅನುವಾದ
March 18th, 05:10 pm
ಇಂದು ಭಾರತ-ಬಾಂಗ್ಲಾದೇಶ ಬಾಂಧವ್ಯದ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ʻಭಾರತ-ಬಾಂಗ್ಲಾದೇಶ ಸ್ನೇಹ ಕೊಳವೆ ಮಾರ್ಗʼಕ್ಕೆ (ಇಂಧನ ಕೊಳವೆ ಮಾರ್ಗಕ್ಕೆ) ನಾವು 2018ರ ಸೆಪ್ಟೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಿದೆವು. ಇಂದು ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಇದನ್ನು ಉದ್ಘಾಟಿಸುವ ಅವಕಾಶ ಬಂದಿರುವುದು ನನಗೆ ಸಂತೋಷ ತಂದಿದೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ ಅನ್ನು ಜಂಟಿಯಾಗಿ ಉದ್ಘಾಟಿಸಿದರು
March 18th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರು ಇಂದು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ (ಐ ಬಿ ಎಫ್ ಪಿ) ಅನ್ನು ವರ್ಚುವಲ್ ವಿಧಾನದಲ್ಲಿ ಜಂಟಿಯಾಗಿ ಉದ್ಘಾಟಿಸಿದರು. ಈ ಪೈಪ್ಲೈನ್ನ ನಿರ್ಮಾಣಕ್ಕೆ ಸೆಪ್ಟೆಂಬರ್ 2018 ರಲ್ಲಿ ಇಬ್ಬರೂ ಪ್ರಧಾನ ಮಂತ್ರಿಗಳು ಅಡಿಪಾಯ ಹಾಕಿದ್ದರು. ನುಮಾಲಿಗಢ್ ರಿಫೈನರಿ ಲಿಮಿಟೆಡ್ 2015 ರಿಂದ ಬಾಂಗ್ಲಾದೇಶಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುತ್ತಿದೆ. ಇದು ಭಾರತ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳ ನಡುವಿನ ಎರಡನೇ ಗಡಿಯಾಚೆಗಿನ ಇಂಧನ ಪೈಪ್ಲೈನ್ ಆಗಿದೆ.ತ್ರಿಪುರಾದ ಜನರು 'ರೆಡ್ ಸಿಗ್ನಲ್' ತೆಗೆದು 'ಡಬಲ್ ಇಂಜಿನ್ ಸರ್ಕಾರ' ಆಯ್ಕೆ ಮಾಡಿದ್ದಾರೆ: ಅಗರ್ತಲಾದಲ್ಲಿ ಪ್ರಧಾನಿ ಮೋದಿ
February 13th, 04:20 pm
ತ್ರಿಪುರಾದಲ್ಲಿ ಚುನಾವಣಾ ಪ್ರಚಾರ ಗರಿಗೆದರುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಗರ್ತಲಾದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು, ಅವರು ವರ್ಷಗಳಿಂದ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ಜನರನ್ನು ಬಡತನದಲ್ಲಿ ಬದುಕಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು. ಎಡಪಂಥೀಯ ಆಡಳಿತವು ತ್ರಿಪುರವನ್ನು ವಿನಾಶದ ಹಾದಿಗೆ ತಳ್ಳಿತ್ತು. ತ್ರಿಪುರಾದ ಜನರು ಇಲ್ಲಿ ಚಾಲ್ತಿಯಲ್ಲಿರುವ ಸ್ಥಿತಿಯನ್ನು ಮರೆಯಲು ಸಾಧ್ಯವಿಲ್ಲ.