ಭಕ್ತಿ ಕಾಲದ ಸಾಮಾಜಿಕ ಕ್ರಾಂತಿಯಿಲ್ಲದೆ ಭಾರತದ ಸ್ಥಿತಿ ಮತ್ತು ರೂಪವನ್ನು ಊಹಿಸಿಕೊಳ್ಳುವುದು ಕಷ್ಟ: ಪ್ರಧಾನಿ ಮೋದಿ

September 01st, 04:31 pm

ಶ್ರೀ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜೀ ಅವರ 125 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿಶೇಷ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು. ಗುಲಾಮಗಿರಿಯ ಕಾಲದಲ್ಲಿ ಭಕ್ತಿ ಭಾರತದ ಚೈತನ್ಯವನ್ನು ಜೀವಂತವಾಗಿರಿಸಿದೆ ಎಂದು ಪ್ರಧಾನಿ ಹೇಳಿದರು. ಭಕ್ತಿ ಕಾಲದ ಸಾಮಾಜಿಕ ಕ್ರಾಂತಿ ಇಲ್ಲದಿದ್ದರೆ, ಭಾರತದ ಸ್ಥಿತಿ ಮತ್ತು ರೂಪವನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿತ್ತು ಎಂದು ಇಂದು ವಿದ್ವಾಂಸರು ನಿರ್ಣಯಿಸುತ್ತಾರೆ ಎಂದು ಅವರು ಹೇಳಿದರು.

ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಅವರ 125 ನೇ ಜಯಂತಿಯ ಅಂಗವಾಗಿ ವಿಶೇಷ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ ಪ್ರಧಾನಿ

September 01st, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಅವರ 125 ನೇ ಜಯಂತಿಯ ಅಂಗವಾಗಿ ವಿಶೇಷ ಸ್ಮರಣಾರ್ಥ ನಾಣ್ಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜಿ ಅವರ 125ನೇ ಜಯಂತಿ ಅಂಗವಾಗಿ ಸೆಪ್ಟಂಬರ್ 1ರಂದು ವಿಶೇಷ ಸ್ಮಾರಕ ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

August 31st, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 1ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜಿ ಅವರ 125ನೇ ಜಯಂತಿ ಅಂಗವಾಗಿ 125ರ ವಿಶೇಷ ಸ್ಮಾರಕ ನಾಣ್ಯ ಬಿಡುಗಡೆ ಮಾಡುವರು ಮತ್ತು ಸಭಿಕರನ್ನು ಉದ್ದೇಶಿಸಿ ಮಾತನಾಡುವರು.