ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಡಿಸೆಂಬರ್ 6 ರಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಲಿರುವ ಪ್ರಧಾನಮಂತ್ರಿ

December 05th, 06:28 pm

ಈಶಾನ್ಯ ಭಾರತದ ಸಾಂಸ್ಕೃತಿಕ ಚೈತನ್ಯವನ್ನು ಪ್ರದರ್ಶಿಸುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಷ್ಟಲಕ್ಷ್ಮಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

November 25th, 03:30 pm

ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,

ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 25th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್‌ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.

ನವೆಂಬರ್ 25 ರಂದು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ

November 24th, 05:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಉದ್ಘಾಟಿಸಲಿದ್ದಾರೆ ಮತ್ತು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025 ಅನ್ನು ನವೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಾರಂಭಿಸಲಿದ್ದಾರೆ.

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ

October 15th, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.

ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 15th, 10:05 am

ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 15th, 10:00 am

ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.

ಪ್ರಧಾನಮಂತ್ರಿಯವರು ಅಕ್ಟೋಬರ್ 15 ರಂದು ಐಟಿಯು ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 ಅನ್ನು ಉದ್ಘಾಟಿಸಲಿದ್ದಾರೆ

October 14th, 05:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಂತರರಾಷ್ಟ್ರೀಯ ದೂರಸಂಪರ್ಕ ಮಹಾಸಂಘ - ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 (ಡಬ್ಲ್ಯುಟಿಎಸ್ಎ) ಅನ್ನು ಉದ್ಘಾಟಿಸಲಿದ್ದಾರೆ.

ಪಿಎಂ ಗತಿಶಕ್ತಿ‌ ಯೋಜನೆ ಜಾರಿಯಾಗಿ ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಭಾರತ ಮಂಟಪಂನಲ್ಲಿನ ಅನುಭೂತಿ ಕೇಂದ್ರಕ್ಕೆ ಪ್ರಧಾನಮಂತ್ರಿ ಭೇಟಿ

October 13th, 09:44 pm

ಗತಿಶಕ್ತಿ ಯೋಜನೆ ಜಾರಿಗೆ ಬಂದು ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮಂಟಪಂನಲ್ಲಿನ ಅನುಭೂತಿ ಕೇಂದ್ರಕ್ಕೆ ಭೇಟಿ ನೀಡಿದರು. ಭಾರತದ ಮೂಲಸೌಕರ್ಯ ಅಭಿವೃದ್ಧಿಯ ಪಯಣಕ್ಕೆ ವೇಗ ನೀಡುವಲ್ಲಿ ಪಿಎಂ ಗತಿ ಶಕ್ತಿ ಯೋಜನೆಯು ನಿರ್ಣಾಯಕ ಪಾತ್ರ ವಹಿಸಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ 2ನೇ ಏಷ್ಯಾ ಪೆಸಿಫಿಕ್ ನಾಗರಿಕ ವಿಮಾನಯಾನ ಸಚಿವರ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 12th, 04:00 pm

ವಿವಿಧ ದೇಶಗಳಿಂದ ಆಗಮಿಸಿರುವ ಎಲ್ಲ ಗಣ್ಯರಿಗೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ 2 ದಿನಗಳಿಂದ ನಾಗರೀಕ ವಿಮಾನಯಾನ ವಲಯಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳನ್ನು ಚರ್ಚಿಸಿದ್ದೀರಿ. ನಮ್ಮ ಸಾಮೂಹಿಕ ಅಥವಾ ಸಂಘಟಿತ ಬದ್ಧತೆ ಮತ್ತು ಏಷ್ಯಾ ಪೆಸಿಫಿಕ್ ವಲಯದ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಾವು ಕೆಲವು ಪ್ರಕಾಶಮಾನವಾದ ಮನಸ್ಸುಗಳನ್ನು ಹೊಂದಿದ್ದೇವೆ ಎಂದು ನಾನು ನಂಬುತ್ತೇನೆ. ಈ ಸಂಸ್ಥೆಯು 80 ವರ್ಷಗಳನ್ನು ಪೂರೈಸಿದೆ. ನಮ್ಮ ಸಚಿವರಾದ ಶ್ರೀ ನಾಯ್ಡು ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ, 80,000 ಮರಗಳನ್ನು ನೆಡುವ ಪ್ರಮುಖ ಉಪಕ್ರಮವನ್ನು 'ಏಕ್ ಪೆಡ್ ಮಾ ಕೆ ನಾಮ್'(ಭೂತಾಯಿಗಾಗಿ ಒಂದು ಮರ) ಕೈಗೊಳ್ಳಲಾಗಿದೆ. ಆದಾಗ್ಯೂ, ನಾನು ಇನ್ನೊಂದು ವಿಷಯದತ್ತ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ. ನಮ್ಮ ದೇಶದಲ್ಲಿ, ಒಬ್ಬ ವ್ಯಕ್ತಿ 80 ವರ್ಷ ತಲುಪಿದಾಗ, ಅದನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತದೆ. ನಮ್ಮ ಪೂರ್ವಜರ ಪ್ರಕಾರ, 80ನೇ ವಯಸ್ಸು ತಲುಪುವುದು ಎಂದರೆ ಒಂದು ಸಾವಿರ ಹುಣ್ಣಿಮೆಗಳನ್ನು ನೋಡುವ ಅವಕಾಶ ಹೊಂದಿರುವುದು ಎಂಬರ್ಥ. ಒಂದರ್ಥದಲ್ಲಿ ನಮ್ಮ ಈ ವಲಯದ ಸಂಸ್ಥೆಯೂ ಒಂದು ಸಾವಿರ ಹುಣ್ಣಿಮೆಗಳನ್ನು ಕಣ್ತುಂಬಿಕೊಂಡು ಹತ್ತಿರದಿಂದ ನೋಡಿದ ಅನುಭವ ಪಡೆದಿದೆ. ಹೀಗಾಗಿ, ಭೂಮಿಯ ಮೇಲಿನ ಈ 80 ವರ್ಷಗಳ ಪ್ರಯಾಣವು ಸ್ಮರಣೀಯ, ಯಶಸ್ವಿ ಮತ್ತು ಶ್ಲಾಘನೀಯ ಪ್ರಯಾಣವಾಗಿದೆ.

ಏಷ್ಯಾ – ಪೆಸಿಫಿಕ್ ನಾಗರಿಕ ವಿಮಾನಯಾನ ಸಚಿವರ ಎರಡನೇ ಸಮ್ಮೇಳನದಲ್ಲಿ ಸೆಪ್ಟೆಂಬರ್ 12 ರಂದು ಪ್ರಧಾನಮಂತ್ರಿ ಭಾಗಿ

September 11th, 07:41 pm

ನವದೆಹಲಿಯ ಭಾರತ ಮಂಟಪಂನಲ್ಲಿ 2024 ರ ಸೆಪ್ಟೆಂಬರ್ 12 ರಂದು ಸಂಜೆ 4 ಗಂಟೆಗೆ ನಾಗರಿಕ ವಿಮಾನಯಾನ ಕುರಿತ ಎರಡನೇ ಏಷ್ಯಾ ಪೆಸಿಫಿಕ್ ಸಚಿವ ಮಟ್ಟದ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಅವರು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

August 31st, 10:30 am

ಈ ಸಮಾರಂಭವು ತುಂಬಾ ಗಂಭೀರವಾಗಿದೆ ಎಂದು ನನಗೆ ಅನಿಸುತ್ತದೆ. ಕೆಲ ದಿನಗಳ ಹಿಂದೆಯಷ್ಟೇ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜ್ಯೂಬಿಲಿ ಸಮಾರಂಭದಲ್ಲಿ ಭಾಗವಹಿಸಿದ್ದೆ ಮತ್ತು ಇಂದು ಸುಪ್ರೀಂ ಕೋರ್ಟ್‌ನ ಯಾತ್ರೆಯ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ನ 75 ವರ್ಷಗಳು ಕೇವಲ ಸಂಸ್ಥೆಯ ಪ್ರಯಾಣವಲ್ಲ; ಇದು ಭಾರತೀಯ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಪಯಣ! ಇದು ಪ್ರಜಾಪ್ರಭುತ್ವವಾಗಿ ಪಕ್ವಗೊಳ್ಳುತ್ತಿರುವ ಭಾರತದ ಪಯಣ! ಮತ್ತು ನಮ್ಮ ಸಂವಿಧಾನ ರಚನೆಕಾರರು ಮತ್ತು ನ್ಯಾಯಾಂಗದ ಅನೇಕ ಗಣ್ಯ ವ್ಯಕ್ತಿಗಳ ಕೊಡುಗೆಗಳು ಈ ಪ್ರಯಾಣದಲ್ಲಿ ಬಹಳ ಮಹತ್ವದ್ದಾಗಿದೆ. ಈ ಪ್ರಯಾಣವು ಲಕ್ಷಾಂತರ ನಾಗರಿಕರ ಕೊಡುಗೆಯನ್ನು ಒಳಗೊಂಡಿದೆ, ಅವರು ಪ್ರತಿ ಸಂದರ್ಭದಲ್ಲೂ ನ್ಯಾಯಾಂಗದಲ್ಲಿ ತಮ್ಮ ನಂಬಿಕೆಯನ್ನು ಅಚಲವಾಗಿ ಇಟ್ಟುಕೊಂಡಿದ್ದಾರೆ. ಭಾರತದ ಜನರು ಸುಪ್ರೀಂ ಕೋರ್ಟ್ ಅಥವಾ ನಮ್ಮ ನ್ಯಾಯಾಂಗವನ್ನು ಎಂದಿಗೂ ಅನುಮಾನಿಸಲಿಲ್ಲ. ಆದ್ದರಿಂದ, ಸುಪ್ರೀಂ ಕೋರ್ಟ್‌ನ ಈ 75 ವರ್ಷಗಳು ಪ್ರಜಾಪ್ರಭುತ್ವದ ತಾಯಿ ಎಂಬ ಭಾರತದ ಹೆಮ್ಮೆಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಸತ್ಯಮೇವ ಜಯತೇ, ನನೃತಂ (ಸತ್ಯವೇ ಜಯಿಸುತ್ತದೆ, ಸುಳ್ಳಲ್ಲ) ಎಂದು ಹೇಳುವ ನಮ್ಮ ಸಾಂಸ್ಕೃತಿಕ ಘೋಷಣೆಯನ್ನು ಇದು ಬಲಪಡಿಸುತ್ತದೆ. ರಾಷ್ಟ್ರವು 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ, ಇದು ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲಿದೆ. ಆದ್ದರಿಂದ, ಈ ಕ್ಷಣದಲ್ಲಿ ಹೆಮ್ಮೆ, ವೈಭವ ಮತ್ತು ಸ್ಫೂರ್ತಿ ಇದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ನ್ಯಾಯಶಾಸ್ತ್ರಜ್ಞರಿಗೆ ಮತ್ತು ಇಡೀ ರಾಷ್ಟ್ರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಸಮಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜಿಲ್ಲಾ ನ್ಯಾಯಾಂಗ ಸಮ್ಮೇಳನಕ್ಕೂ ನನ್ನ ಶುಭ ಹಾರೈಕೆಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು

August 31st, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯ 75ನೇ ವರ್ಷಾಚರಣೆಯ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು. ಭಾರತದ ಸರ್ವೋಚ್ಚ ನ್ಯಾಯಾಲಯವು ಆಯೋಜಿಸಿರುವ ಎರಡು ದಿನಗಳ ಸಮ್ಮೇಳನವು ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಾದ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ, ಎಲ್ಲರಿಗೂ ಅಂತರ್ಗತ ನ್ಯಾಯಾಲಯಗಳು, ನ್ಯಾಯಾಂಗ ಭದ್ರತೆ ಮತ್ತು ನ್ಯಾಯಾಂಗ ಸ್ವಾಸ್ಥ್ಯ, ಪ್ರಕರಣ ನಿರ್ವಹಣೆ ಮತ್ತು ನ್ಯಾಯಾಂಗ ತರಬೇತಿಯಂತಹ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಚರ್ಚಿಸಲು ಐದು ಕೆಲಸದ ಅಧಿವೇಶನಗಳನ್ನು ಆಯೋಜಿಸುತ್ತದೆ.

ಆಗಸ್ಟ್ 31ರಂದು ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ

August 30th, 04:15 pm

ಆಗಸ್ಟ್ 31, 2024 ರಂದು ಬೆಳಗ್ಗೆ 10 ಗಂಟೆಗೆ ದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಭಾರತದ ಸರ್ವೋಚ್ಚ ನ್ಯಾಯಾಲಯ ಸ್ಥಾಪನೆಯ 75 ವರ್ಷಗಳ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಲಿದ್ದಾರೆ.

ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ

July 21st, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ

July 21st, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.