ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 26th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.