ಜುಲೈ 12 ರಂದು ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 09th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ಜುಲೈ12 ರಂದು ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಪ್ರಧಾನಮಂತ್ರಿ ಅವರು ದಿಯೋಘರ್ ನಲ್ಲಿ 16,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ನಂತರ ಮಧ್ಯಾಹ್ನ 2:40 ಕ್ಕೆ, ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಪಾಟ್ನಾದಲ್ಲಿ ಬಿಹಾರ ವಿಧಾನಸಭೆಯ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಫೆಬ್ರವರಿ 14, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 12th, 06:10 pm
2021ರ ಫೆಬ್ರವರಿ 14ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11.15ರ ಸುಮಾರಿಗೆ ಪ್ರಧಾನಮಂತ್ರಿಯವರು ಚೆನ್ನೈನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆಯನ್ನು ಮಾಡಲಿದ್ದಾರೆ ಮತ್ತು ಅರ್ಜುನ್ ಪ್ರಮುಖ ಯುದ್ಧ ಟ್ಯಾಂಕ್ (ಎಂ.ಕೆ. -1ಎ) ಅನ್ನು ಸೇನಾಪಡೆಗೆ ಹಸ್ತಾಂತರಿಸಲಿದ್ದಾರೆ. ಮಧ್ಯಾಹ್ನ 3.30ರವೇಳೆಗೆ ಪ್ರಧಾನಮಂತ್ರಿಯವರು, ಕೊಚ್ಚಿಯಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಕೆಲವು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ಈ ರಾಜ್ಯಗಳ ಪ್ರಗತಿಯ ಪಥಕ್ಕೆ ಮಹತ್ವದ ವೇಗ ನೀಡಲಿವೆ ಮತ್ತು ಸಂಪೂರ್ಣ ಅಭಿವೃದ್ಧಿಯ ಸಾಮರ್ಥ್ಯಕ್ಕೆ ವೇಗ ನೀಡಲು ನೆರವಾಗಲಿವೆ.