ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
December 03rd, 08:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತೀಯ ಪ್ರಜಾಪ್ರಭುತ್ವಕ್ಕೆ ಬಲವಾದ ಅಡಿಪಾಯ ಹಾಕುವಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದರು.ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ
November 18th, 06:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೊಮ್ಮಗ ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗಂಗಾ ಸ್ವಚ್ಛತಾ ಅಭಿಯಾನ ಮತ್ತು ಶಿಕ್ಷಣ ಜಗತ್ತಿಗೆ ಶ್ರೀ ಗಿರಿಧರ್ ಮಾಳವೀಯ ಅವರ ಕೊಡುಗೆಯನ್ನು ಶ್ರೀ ಮೋದಿಯವರು ಶ್ಲಾಘಿಸಿದ್ದಾರೆ.ಮಹಾರಾಷ್ಟ್ರದ ಜನರು ದೇಶದ ಏಕತೆ ಮತ್ತು ಪ್ರಗತಿಗೆ ಮತ ನೀಡಬೇಕು, ಅವಕಾಶವಾದಿ ಮೈತ್ರಿಗಳ ವಿಭಜಕ ಅಜೆಂಡಾ ವಿರುದ್ಧ ಎಚ್ಚರಿಕೆ ವಹಿಸಬೇಕು: ರಾಮ್‌ಟೆಕ್‌ನಲ್ಲಿ ಪ್ರಧಾನಿ ಮೋದಿ
April 10th, 06:30 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಕೊಡುಗೆ ನೀಡಿದ ಗೌರವಾನ್ವಿತ ನಾಯಕರು ಮತ್ತು ಐತಿಹಾಸಿಕ ವ್ಯಕ್ತಿಗಳಿಗೆ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಬಾಬಾ ಜುಮ್‌ದೇವ್‌ಜಿ, ಗೊಂಡ ರಾಜ ಭಕ್ತಿ ಬುಲಂದ್ ಶಾ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಪೂಜ್ಯ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 10th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಕೊಡುಗೆ ನೀಡಿದ ಗೌರವಾನ್ವಿತ ನಾಯಕರು ಮತ್ತು ಐತಿಹಾಸಿಕ ವ್ಯಕ್ತಿಗಳಿಗೆ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಬಾಬಾ ಜುಮ್‌ದೇವ್‌ಜಿ, ಗೊಂಡ ರಾಜ ಭಕ್ತಿ ಬುಲಂದ್ ಶಾ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಪೂಜ್ಯ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.I am taking action against corruption, and that's why some people have lost their patience: PM Modi in Meerut
March 31st, 04:00 pm
Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”PM Modi addresses a public meeting in Meerut, Uttar Pradesh
March 31st, 03:30 pm
Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”ಶ್ರೀ ಕರ್ಪೂರಿ ಠಾಕೂರ್ ಜಿ ಅವರ ಪುಣ್ಯ ತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
February 17th, 07:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕರ್ಪೂರಿ ಠಾಕೂರ್ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಿ
February 12th, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಮಂತ್ರಿ
February 09th, 01:35 pm
ಹಸಿರು ಕ್ರಾಂತಿಯಲ್ಲಿ ಪ್ರಮುಖ ಪಾತ್ರವಹಿಸಿ ಹೆಸರುವಾಸಿಯಾಗಿದ್ದ ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿ: ಪ್ರಧಾನಿ
February 09th, 01:30 pm
ಶ್ರೀ ನರಸಿಂಹ ರಾವ್ ಅವರು ಪ್ರಧಾನ ಮಂತ್ರಿಯಾಗಿ ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದು, ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಬೆಳೆಸುವ ಮಹತ್ವದ ಕ್ರಮಗಳಿಂದ ಗುರುತಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.ಮಾಜಿ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಗೌರವ: ಪ್ರಧಾನಿ ಮೋದಿ ಘೋಷಣೆ
February 09th, 01:25 pm
ಮಾಜಿ ಪ್ರಧಾನ ಮಂತ್ರಿ ಶ್ರೀ ಚೌಧರಿ ಚರಣ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ 'ಭಾರತ ರತ್ನ' ಪ್ರದಾನ ಮಾಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.Our government truly prioritizes the well-being of the Janjatiyas: PM Modi
February 03rd, 03:30 pm
Prime Minister Narendra Modi launched various infra projects in Sambalpur, Orissa. Referring to the invaluable contributions of Advani Ji, PM Modi said, “The government has decided to honour Advani ji with the Bharat Ratna for his invaluable contributions and service to India.” His personality exemplifies the true philosophy of ‘Nation First’, he said. He added that Advani Ji has guided India against the dynastic politics and towards the politics of development.PM Modi addresses a public meeting in Sambalpur
February 03rd, 03:15 pm
After launching various infra projects in Sambalpur, Odisha PM Modi addressed a dynamic public meeting. “The last 10 years have been dedicated to the development of India and the state of Odisha has been a central focus of the same,” PM Modi said.ಶ್ರೀ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು
February 03rd, 02:28 pm
ಹಿರಿಯ ನಾಯಕ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.ಒಡಿಶಾದ ಸಂಬಲ್ಪುರ್ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್ ಅನುವಾದ
February 03rd, 02:10 pm
ಒಡಿಶಾ ರಾಜ್ಯಪಾಲರಾದ ರಘುವರ್ ದಾಸ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತರವಾದ ಶ್ರೀ ನವೀನ್ ಪಟ್ನಾಯಕ್ ಜೀ. ನನ್ನ ಸಂಪುಟ ಸಹೋದ್ಯೋಗಿಗಳಾದ ಧರ್ಮೇಂದ್ರ ಪ್ರಧಾನ್ ಜೀ, ಅಶ್ವಿನಿ ವೈಷ್ಣವ್ ಜೀ, ಬಿಶ್ವೇಶ್ವರ್ ತಡು ಜೀ, ನನ್ನ ಸಂಸದೀಯ ಕ್ಷೇತ್ರದ ಪ್ರತಿನಿಧಿ ನಿತೇಶ್ ಗಂಗಾ ದೇವ್ ಜೀ, ಸಂಬಲ್ಪುರ್ ದ ಐಐಎಂ ನಿರ್ದೇಶಕರಾದ ಮಹದೇವ್ ಜೈಸ್ವಾಲ್ ಹಾಗೂ ಇತರೆ ಗಣ್ಯರೇ, ಮಹಿಳೆಯರೇ, ಮಹನೀಯರೇ.ಒಡಿಶಾದ ಸಂಬಲ್‌ಪುರದಲ್ಲಿ 68,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ
February 03rd, 02:07 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಸಂಬಲ್‌ಪುರದಲ್ಲಿಂದು 68,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳಿಗೆ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಸ್ತೆ, ರೈಲ್ವೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರಮುಖ ಯೋಜನೆಗಳ ಜತೆಗೆ, ನೈಸರ್ಗಿಕ ಅನಿಲ, ಕಲ್ಲಿದ್ದಲು ಮತ್ತು ವಿದ್ಯುತ್ ಉತ್ಪಾದನೆ ಒಳಗೊಂಡ ಇಂಧನ ಕ್ಷೇತ್ರವನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದೇ ಸಂದರ್ಭದಲ್ಲಿ ಐಐಎಂ ಸಂಬಲ್‌ಪುರ ಮಾದರಿಯ ದರ್ಶನ ಪಡೆದ ಶ್ರೀ ಮೋದಿ ಅವರು, ಇದೇ ವೇಳೆ ಛಾಯಾಚಿತ್ರ ಪ್ರದರ್ಶನವನ್ನು ಸಹ ವೀಕ್ಷಿಸಿದರು.ನವದೆಹಲಿಯಲ್ಲಿ ಎನ್ ಸಿಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 24th, 03:26 pm
ನೀವು ಇಲ್ಲಿ ನೀಡಿದ ಸಾಂಸ್ಕೃತಿಕ ಪ್ರಸ್ತುತಿ ಹೆಮ್ಮೆಯ ಭಾವನೆಯನ್ನು ಹುಟ್ಟುಹಾಕುತ್ತಿದೆ. ನೀವು ರಾಣಿ ಲಕ್ಷ್ಮಿಬಾಯಿಯ ಐತಿಹಾಸಿಕ ವ್ಯಕ್ತಿತ್ವ ಮತ್ತು ಇತಿಹಾಸದ ಘಟನೆಗಳನ್ನು ಕೆಲವೇ ಕ್ಷಣಗಳಲ್ಲಿ ಜೀವಂತಗೊಳಿಸಿದ್ದೀರಿ. ನಾವೆಲ್ಲರೂ ಈ ಘಟನೆಗಳೊಂದಿಗೆ ಪರಿಚಿತರಾಗಿದ್ದೇವೆ, ಆದರೆ ನೀವು ಅದನ್ನು ಪ್ರಸ್ತುತಪಡಿಸಿದ ರೀತಿ ನಿಜವಾಗಿಯೂ ಅದ್ಭುತವಾಗಿದೆ. ನೀವು ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿದ್ದೀರಿ ಮತ್ತು ಈ ಬಾರಿ ಅದು ಎರಡು ಕಾರಣಗಳಿಗಾಗಿ ಇನ್ನಷ್ಟು ವಿಶೇಷವಾಗಿದೆ. ಇದು 75 ನೇ ಗಣರಾಜ್ಯೋತ್ಸವ, ಮತ್ತು ಎರಡನೆಯದಾಗಿ, ಮೊದಲ ಬಾರಿಗೆ, ಗಣರಾಜ್ಯೋತ್ಸವದ ಮೆರವಣಿಗೆಯನ್ನು ದೇಶದ 'ನಾರಿ ಶಕ್ತಿ' (ಮಹಿಳಾ ಶಕ್ತಿ) ಗೆ ಸಮರ್ಪಿಸಲಾಗಿದೆ. ಇಂದು, ನಾನು ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಹೆಣ್ಣುಮಕ್ಕಳನ್ನು ನೋಡುತ್ತಿದ್ದೇನೆ. ನೀವು ಇಲ್ಲಿಗೆ ಒಬ್ಬಂಟಿಯಾಗಿ ಬಂದಿಲ್ಲ; ನೀವೆಲ್ಲರೂ ನಿಮ್ಮ ರಾಜ್ಯಗಳ ಪರಿಮಳವನ್ನು, ವಿವಿಧ ಪದ್ಧತಿಗಳು ಮತ್ತು ಸಂಪ್ರದಾಯಗಳ ಅನುಭವಗಳನ್ನು ಮತ್ತು ನಿಮ್ಮ ಸಮಾಜಗಳ ಸಮೃದ್ಧ ಆಲೋಚನೆಗಳನ್ನು ತಂದಿದ್ದೀರಿ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಇಂದು ವಿಶೇಷ ಸಂದರ್ಭವಾಗಿದೆ. ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಇಂದು ಹೆಣ್ಣುಮಕ್ಕಳ ಧೈರ್ಯ, ಉತ್ಸಾಹ ಮತ್ತು ಸಾಧನೆಗಳನ್ನು ಆಚರಿಸುವ ದಿನ. ಹೆಣ್ಣುಮಕ್ಕಳಿಗೆ ಸಮಾಜ ಮತ್ತು ದೇಶವನ್ನು ಉತ್ತಮಗೊಳಿಸುವ ಸಾಮರ್ಥ್ಯವಿದೆ. ಇತಿಹಾಸದ ವಿವಿಧ ಯುಗಗಳಲ್ಲಿ, ಭಾರತದ ಹೆಣ್ಣುಮಕ್ಕಳು ತಮ್ಮ ಧೈರ್ಯಶಾಲಿ ಉದ್ದೇಶಗಳು ಮತ್ತು ಸಮರ್ಪಣೆಯಿಂದ ಅನೇಕ ದೊಡ್ಡ ಬದಲಾವಣೆಗಳಿಗೆ ಅಡಿಪಾಯ ಹಾಕಿದ್ದಾರೆ. ಸ್ವಲ್ಪ ಸಮಯದ ಹಿಂದೆ ನೀವು ನೀಡಿದ ಪ್ರಸ್ತುತಿಯಲ್ಲಿ ಈ ಭಾವನೆಯ ಒಂದು ನೋಟವಿತ್ತು.ಪ್ರಧಾನಮಂತ್ರಿಯವರು ಎನ್ ಸಿಸಿ ಕೆಡೆಟ್ ಗಳು ಮತ್ತು ಎನ್ಎಸ್ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು
January 24th, 03:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಸಿಸಿ ಕೆಡೆಟ್ ಗಳು ಮತ್ತು ಎನ್ ಎಸ್ ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಣಿ ಲಕ್ಷ್ಮಿ ಬಾಯಿಯವರ ಜೀವನವನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು ಮತ್ತು ಇದು ಇಂದು ಭಾರತದ ಇತಿಹಾಸವನ್ನು ಜೀವಂತಗೊಳಿಸಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ತಂಡದ ಶ್ರಮವನ್ನು ಶ್ಲಾಘಿಸಿದ ಅವರು ಈಗ ಗಣರಾಜ್ಯೋತ್ಸವ ಪರೇಡ್ ನ ಭಾಗವಾಗಲಿದ್ದಾರೆ ಎಂದು ಹೇಳಿದರು. ಈ ಸಂದರ್ಭವು 75 ನೇ ಗಣರಾಜ್ಯೋತ್ಸವ ಆಚರಣೆ ಮತ್ತು ಭಾರತದ ನಾರಿ ಶಕ್ತಿಗೆ ಇದು ಸಮರ್ಪಣೆ ಎನ್ನುವ ಎರಡು ಕಾರಣಗಳಿಂದ ವಿಶೇಷವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಭಾರತದಾದ್ಯಂತದ ಭಾಗವಹಿಸುವ ಮಹಿಳೆಯರನ್ನು ಉಲ್ಲೇಖಿಸಿ, ಶ್ರೀ ಮೋದಿ ಅವರು ಇಲ್ಲಿ ಒಬ್ಬಂಟಿಯಾಗಿ ಬಂದಿಲ್ಲ ಜೊತೆಗೆ ತಮ್ಮ ರಾಜ್ಯಗಳ ಸತ್ವ, ಅವರ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಅವರ ಸಮಾಜಗಳ ಮುಂದಾಲೋಚನೆಯನ್ನು ತಂದಿದ್ದಾರೆ ಎಂದು ಹೇಳಿದರು. ಇಂದಿನ ಮತ್ತೊಂದು ವಿಶೇಷ ಸಂದರ್ಭವನ್ನು ಗಮನಿಸಿದ ಪ್ರಧಾನಮಂತ್ರಿಯವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ (ರಾಷ್ಟ್ರೀಯ ಬಾಲಿಕಾ ದಿವಸ್) ಬಗ್ಗೆ ಪ್ರಸ್ತಾಪಿಸಿದರು, ಇದು ಅವರ ಧೈರ್ಯ, ದೃಢತೆ ಮತ್ತು ಸಾಧನೆಗಳ ಆಚರಣೆಯಾಗಿದೆ. ಭಾರತದ ಹೆಣ್ಣುಮಕ್ಕಳು ಒಳ್ಳೆಯದಕ್ಕಾಗಿ ಸಮಾಜವನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದ ಪ್ರಧಾನಮಂತ್ರಿಯವರು ಇಂದಿನ ಸಾಂಸ್ಕೃತಿಕ ಪ್ರದರ್ಶನದಲ್ಲಿ ಕಂಡಂತೆ ವಿವಿಧ ಐತಿಹಾಸಿಕ ಕಾಲಘಟ್ಟಗಳಲ್ಲಿ ಸಮಾಜಕ್ಕೆ ಅಡಿಪಾಯವನ್ನು ಹಾಕುವಲ್ಲಿ ಮಹಿಳೆಯರ ಕೊಡುಗೆಗಳನ್ನು ಎತ್ತಿ ತೋರಿಸಿದರು. ಶ್ರೀ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಶಸ್ತಿ ಸಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನ ಮಂತ್ರಿಗಳು
January 23rd, 09:19 pm
ಸಾಮಾಜಿಕ ನ್ಯಾಯದ ಹರಿಕಾರರಾದ ಶ್ರೀ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿ ನೀಡುವ ನಿರ್ಧಾರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 25th, 04:31 pm
ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.