ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

February 16th, 04:15 pm

ಭಾರತ್‌ ಮಂಟಪ್‌ ಇಂದು 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಭಾರತ್‌ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

February 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್‌ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್‌ ಟೆಕ್ಸ್‌ 2025ಗೆ ಸ್ವಾಗತಿಸಿದರು ಮತ್ತು ಭಾರತ್‌ ಮಂಟಪ್‌ 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

ಫೆಬ್ರವರಿ 16 ರಂದು ದೆಹಲಿಯಲ್ಲಿ ನಡೆಯಲಿರುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

February 15th, 01:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2025 ರಂದು ಸಂಜೆ 4 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.