The World This Week on India
December 17th, 04:23 pm
In a week filled with notable achievements and international recognition, India has once again captured the world’s attention for its advancements in various sectors ranging from health innovations and space exploration to climate action and cultural influence on the global stage.ಬಿಹಾರದ ಜಮುಯ್ ನಲ್ಲಿರುವ ಬುಡಕಟ್ಟು ಹಾತ್ಗೆ ಪ್ರಧಾನಮಂತ್ರಿ ಭೇಟಿ
November 15th, 05:45 pm
ಬಿಹಾರದ ಜಮುಯ್ ನಲ್ಲಿರುವ ಬುಡಕಟ್ಟು ಹಾತ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭೇಟಿ ನೀಡಿದರು. ದೇಶಾದ್ಯಂತ ಇರುವ ನಮ್ಮ ಬುಡಕಟ್ಟು ಸಂಪ್ರದಾಯಗಳು, ಅವರ ಅದ್ಭುತ ಕಲೆ ಮತ್ತು ಕೌಶಲ್ಯಗಳ ಪ್ರತೀಕವಾಗಿದೆ ಎಂದು ಅವರು ಬಣ್ಣಿಸಿದರು.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ನವೆಂಬರ್ 15 ರಂದು ಆದಿವಾಸಿಗಳ ಗೌರವ ದಿನದಂದು ಪ್ರಧಾನಮಂತ್ರಿಯವರು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ
November 13th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15 ರಂದು ಬುಡಕಟ್ಟು ಗೌರವ ದಿನವನ್ನು ಆಚರಿಸಲು ಬಿಹಾರದ ಜಮುಯಿಗೆ ಭೇಟಿ ನೀಡಲಿದ್ದಾರೆ. ಇದರೊಂದಿಗೆ ಧರ್ತಿ ಅಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮಗಳು ಆರಂಭವಾಗಲಿವೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಬಿರ್ಸಾ ಮುಂಡಾ ಅವರ ಗೌರವಾರ್ಥ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಪ್ರಧಾನಮಂತ್ರಿಯವರು ಅನಾವರಣಗೊಳಿಸಲಿದ್ದಾರೆ. ಅವರು ಬುಡಕಟ್ಟು ಸಮುದಾಯಗಳ ಉನ್ನತಿಗೆ ಮತ್ತು ಪ್ರದೇಶದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ಗುರಿಯನ್ನು ಹೊಂದಿರುವ 6,640 ಕೋಟಿ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 12th, 08:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ದರ್ಭಾಂಗಕ್ಕೆ ಪ್ರಯಾಣಿಸಲಿದ್ದು, ಬೆಳಗ್ಗೆ 10:45 ಕ್ಕೆ ಅವರು ಬಿಹಾರದಲ್ಲಿ ಸುಮಾರು 12,100 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ
October 28th, 12:47 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಉತ್ತಮ ಸಂಪರ್ಕವನ್ನು ಒದಗಿಸಲು 6,798 ಕೋಟಿ ರೂಪಾಯಿ ಅಂದಾಜು ವೆಚ್ಚದ ಎರಡು ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ, ಇದರಿಂದ ಪ್ರಯಾಣ ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿಮೆ ಮಾಡಲು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಾಧ್ಯ, 5 ವರ್ಷಗಳಲ್ಲಿ ಯೋಜನೆ ಪೂರ್ಣ
October 24th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು (CCEA), ರೈಲ್ವೆ ಸಚಿವಾಲಯದ ಒಟ್ಟು ಅಂದಾಜು ವೆಚ್ಚ ರೂ.6,798 ಕೋಟಿಗಳ ಎರಡು ಯೋಜನೆಗಳಿಗೆ ಅನುಮೋದನೆ ನೀಡಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಸಂಪುಟ ಅನುಮೋದನೆ
October 03rd, 09:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ನೀಡಲು ಅನುಮೋದನೆ ನೀಡಿದೆ. ಶಾಸ್ತ್ರೀಯ ಭಾಷೆಗಳು ಭಾರತದ ಆಳವಾದ ಮತ್ತು ಪ್ರಾಚೀನ ಸಾಂಸ್ಕೃತಿಕ ಪರಂಪರೆಯ ಪಾಲಕರಾಗಿ ಕಾರ್ಯನಿರ್ವಹಿಸುತ್ತವೆ, ಪ್ರತಿ ಸಮುದಾಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೈಲಿಗಲ್ಲಿನ ಸಾರವನ್ನು ಪ್ರಸ್ತುತಪಡಿಸುತ್ತವೆ.ಬಿಹಾರದ ಬಿಹ್ತಾದಲ್ಲಿ ರೂ.1413 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಗೆ ಸಂಪುಟ ಅನುಮೋದನೆ
August 16th, 09:27 pm
ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿಗೆ ಅನುಮೋದನೆ ನೀಡಿದೆ, ಇದರ ಅಂದಾಜು ವೆಚ್ಚ ರೂ. 1,413 ಕೋಟಿ. ಈ ಯೋಜನೆಯು ಪ್ರದೇಶದಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ವಿಮಾನ ಪ್ರಯಾಣಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ.ಬಿಹಾರದ ನಳಂದ ಪುರಾತನ ಅವಶೇಷಗಳ ತಾಣಗಳಿಗೆ ಪ್ರಧಾನಮಂತ್ರಿ ಭೇಟಿ
June 19th, 01:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ನಳಂದದಲ್ಲಿರುವ ಪುರಾತನ ಅವಶೇಷಗಳ ತಾಣಗಳಿಗೆ ಭೇಟಿ ನೀಡಿದರು. ಮೂಲ ನಳಂದಾ ವಿಶ್ವವಿದ್ಯಾಲಯವು ವಿಶ್ವದ ಮೊದಲ ವಸತಿ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ನಳಂದದ ಪುರಾತನ ಅವಶೇಷಗಳನ್ನು 2016 ರಲ್ಲಿ ವಿಶ್ವಸಂಸ್ಥೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿತ್ತು.ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ
June 19th, 10:30 am
ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.ಜೂನ್ 18 - 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಪ್ರಧಾನಮಂತ್ರಿ ಭೇಟಿ
June 17th, 09:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 18 ಮತ್ತು 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.