PM Modi meets the Amir of Kuwait
December 22nd, 05:08 pm
Prime Minister Shri Narendra Modi met today with the Amir of Kuwait, His Highness Sheikh Meshal Al-Ahmad Al-Jaber Al-Sabah. This was the first meeting between the two leaders. On arrival at the Bayan Palace, he was given a ceremonial welcome and received by His Highness Ahmad Al-Abdullah Al-Ahmad Al-Sabah, Prime Minister of the State of Kuwait.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಭೂತಾನ್‌ನ ದೊರೆ ಮತ್ತು ರಾಣಿಯನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
December 05th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭೂತಾನ್ ದೊರೆ ಘನತೆವೆತ್ತ ಜಿಗ್ಮೆ ಖೇಸರ್ ನಮ್ಗಯೆಲ್ ವಾಂಗ್ ಚುಕ್ ಮತ್ತು ಭೂತಾನ್ ರಾಣಿ ಘನತೆವೆತ್ತ ಜೆಟ್ಸುನ್ ಪೆಮಾ ವಾಂಗ್ ಚುಕ್ ಅವರನ್ನು ಬರಮಾಡಿಕೊಂಡರು. ಪ್ರಧಾನಮಂತ್ರಿಯವರು ಘನತೆವೆತ್ತರಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು 2024ರ ಮಾರ್ಚ್ ನಲ್ಲಿ ತಾವು ಭೂತಾನ್‌ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸರ್ಕಾರ ಮತ್ತು ಅಲ್ಲಿನ ಜನರು ನೀಡಿದ ಅಸಾಧಾರಣ ಆತ್ಮೀಯ ಆತಿಥ್ಯವನ್ನು ಪ್ರೀತಿಯಿಂದ ಸ್ಮರಿಸಿದರು.ಕುವೈತ್ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಮೋದಿ ಬರಮಾಡಿಕೊಂಡರು.
December 04th, 08:39 pm
ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.PM Modi meets with President of Suriname
November 21st, 10:57 pm
PM Modi met with President Chandrikapersad Santokhi of Suriname on the sidelines of the 2nd India-CARICOM Summit in Georgetown, Guyana. The two leaders reviewed the progress of ongoing bilateral initiatives and discussed enhancing cooperation in defense and security, trade, agriculture, digital initiatives, UPI, ICT, healthcare, pharmaceuticals, capacity building, culture, and people-to-people ties.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ
November 21st, 10:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು.ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
November 21st, 09:37 am
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.ಬಹಾಮಾಸ್ ಪ್ರಧಾನಿಯವರನ್ನು ಭೇಟಿಯಾದ ಪ್ರಧಾನಮಂತ್ರಿ
November 21st, 09:25 am
ಇಬ್ಬರೂ ನಾಯಕರು ಆರ್ಥಿಕ ಸಹಕಾರ, ಹಸಿರು ಪಾಲುದಾರಿಕೆ ಮತ್ತು ಜನರಿಂದ ಜನರ ಬಾಂಧವ್ಯಗಳ ಕುರಿತು ಫಲಪ್ರದ ಮತ್ತು ಫಲಿತಾಂಶದಾಯಲ ಚರ್ಚೆಗಳನ್ನು ನಡೆಸಿದರು. ಭಾರತದಿಂದ 1 ದಶಲಕ್ಷ ಅಮೆರಿಕನ್ ಡಾಲರ್ ನೆರವಿನೊಂದಿಗೆ ಯು ಎನ್ ಡಿ ಪಿ ಅನುಷ್ಠಾನಗೊಳಿಸುತ್ತಿರುವ ಚಂಡಮಾರುತ ಆಶ್ರಯ ಯೋಜನೆಯಾದ ಅಬಾಕೊ ಹರಿಕೇನ್ ಶೆಲ್ಟರ್ ಪ್ರಾಜೆಕ್ಟ್ ನಲ್ಲಿನ ಸ್ಥಿರ ಪ್ರಗತಿಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು.PM Modi meets with the Prime Minister of Barbados
November 21st, 09:13 am
PM Modi met Barbados PM Mia Amor Mottley during the India-CARICOM Summit, discussing cooperation in health, pharma, climate action, and cultural ties. They reviewed bilateral relations, global institutional reforms, and India’s leadership in the Global South.ಗಯಾನದ ಅಧ್ಯಕ್ಷರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
November 21st, 04:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್ ಹೌಸ್ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.ಚಿಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 20th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 19ರಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಭೇಟಿಯಾದರು. ಇದು ಅವರ ಮೊದಲ ಭೇಟಿಯಾಗಿತ್ತು.ಪ್ರಧಾನಮಂತ್ರಿ ಅವರಿಂದ ಅರ್ಜೆಂಟೀನಾ ಅಧ್ಯಕ್ಷರ ಭೇಟಿ
November 20th, 08:09 pm
ಇದು ಉಭಯ ನಾಯಕರ ನಡುವಿನ ಮೊದಲ ದ್ವಿಪಕ್ಷೀಯ ಸಭೆಯಾಗಿತ್ತು. ಐತಿಹಾಸಿಕ ಮೂರನೇ ಅವಧಿಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಮಿಲೀ ಅವರು ಅಭಿನಂದಿಸಿದರು. ಪ್ರಧಾನಮಂತ್ರಿ ಸಹ ಅಧ್ಯಕ್ಷ ಮೈಲಿ ಅವರು ಅಧಿಕಾರ ವಹಿಸಿಕೊಂಡಿರುವುದಕ್ಕೆ ಶುಭ ಕೋರಿದರು.ಪ್ರಧಾನಮಂತ್ರಿ ಅವರಿಂದ ಬ್ರೆಜಿಲ್ ಅಧ್ಯಕ್ಷರ ಭೇಟಿ
November 20th, 08:05 pm
ರಿಯೊ ಡಿ ಜನೈರೊದಲ್ಲಿ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ನವೆಂಬರ್ 19 ರಂದು ಭೇಟಿಯಾದರು. ಅಧ್ಯಕ್ಷ ಲುಲಾ ಅವರ ಆತಿಥ್ಯಕ್ಕಾಗಿ ಪ್ರಧಾನಮಂತ್ರಿಗಳು ಧನ್ಯವಾದ ಅರ್ಪಿಸಿ ಬ್ರೆಜಿಲ್ನ ಜಿ-20 ಮತ್ತು ಐ ಬಿ ಎಸ್ ಎ ಅಧ್ಯಕ್ಷತೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು. ಬಡತನ ಮತ್ತು ಹಸಿವಿನ ವಿರುದ್ಧ ಜಾಗತಿಕ ಒಕ್ಕೂಟವನ್ನು ಸ್ಥಾಪಿಸುವ ಬ್ರೆಜಿಲಿಯನ್ ಉಪಕ್ರಮವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಅದಕ್ಕೆ ಭಾರತದ ದೃಢ ಬೆಂಬಲವನ್ನು ತಿಳಿಸಿದರು. ಜಿ 20 ತ್ರಿ ಸದಸ್ಯ ರಾಷ್ಟ್ರವಾಗಿ, ಜಾಗತಿಕ ದಕ್ಷಿಣದ ಒಳಿತಿಗೆ ಆದ್ಯತೆ ನೀಡಿರುವ ಸುಸ್ಥಿರ ಅಭಿವೃದ್ಧಿ ಮತ್ತು ಜಾಗತಿಕ ಆಡಳಿತ ಸುಧಾರಣೆಯ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ನ ಜಿ 20 ಕಾರ್ಯಸೂಚಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು, ಮುಂದಿನ ವರ್ಷ ಬ್ರಿಕ್ಸ್ ಮತ್ತು ಸಿಒಪಿ 30ರ ಬ್ರೆಜಿಲ್ ನ ನಾಯಕತ್ವಕ್ಕಾಗಿ ಅವರು ಶುಭ ಕೋರಿದರು ಮತ್ತು ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.ಇಟಲಿಯ ಮಂತ್ರಿಗಳ ಮಂಡಳಿಯ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
November 19th, 08:34 am
ರಿಯೊ ಡಿ ಜನೈರೊದಲ್ಲಿ ನಡೆಯುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಮಂತ್ರಿಗಳ ಪರಿಷತ್ತಿನ ಅಧ್ಯಕ್ಷೆ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಭೇಟಿಯಾದರು. ಕಳೆದ ಎರಡು ವರ್ಷಗಳಲ್ಲಿ ಉಭಯ ಪ್ರಧಾನಮಂತ್ರಿಗಳ ನಡುವಿನ ಐದನೇ ಭೇಟಿ ಇದಾಗಿದೆ. ಜೂನ್ 2024 ರಲ್ಲಿ ಇಟಲಿಯ ಪುಗ್ಲಿಯಾದಲ್ಲಿ ಪ್ರಧಾನ ಮಂತ್ರಿ ಮೆಲೋ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರ ಅಧ್ಯಕ್ಷತೆಯಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು. ಸವಾಲಿನ ಈ ಸಂದರ್ಭದದಲ್ಲಿ ಜಿ7 ಅನ್ನು ಮುನ್ನಡೆಸಿದ್ದಕ್ಕಾಗಿ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಇಂಡೋನೇಷ್ಯಾದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತುಪೋರ್ಚುಗಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.ಪ್ರಧಾನಮಂತ್ರಿ ಅವರಿಂದ ನಾರ್ವೆ ಪ್ರಧಾನಮಂತ್ರಿ ಭೇಟಿ
November 19th, 05:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿ20 ಶೃಂಗಸಭೆಯ ನೇಪಥ್ಯದಲ್ಲಿ ರಿಯೊ ಡಿ ಜನೈರೊದಲ್ಲಿ ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೊನಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು.ಯುಕೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 05:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಿದ್ದರು. ಉಭಯ ಪ್ರಧಾನಿಗಳ ನಡುವಿನ ಮೊದಲ ಭೇಟಿ ಇದಾಗಿದೆ. ಪ್ರಧಾನಮಂತ್ರಿಯಾಗಿ ಸ್ಟಾರ್ಮರ್ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಿ ಅಭಿನಂದಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರನೇ ಅವಧಿಯ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 05:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿ ಮಾಡಿದರು. ಜನವರಿಯಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ ಭೇಟಿ ನೀಡಿದ ನಂತರ ಮತ್ತು ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ 7 ಶೃಂಗಸಭೆಯ ಹೊರತಾಗಿ ಅವರ ಸಭೆಯ ನಂತರ ಈ ವರ್ಷ ಉಭಯ ನಾಯಕರ ನಡುವಿನ ಮೂರನೇ ಸಭೆ ಇದಾಗಿದೆ.