ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಬೆಂಬಲಿಸಲು 'ಬಯೋ-ರೈಡ್' ಯೋಜನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ
September 18th, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ಜೈವಿಕ ತಂತ್ರಜ್ಞಾನ ಇಲಾಖೆಯ (ಡಿಬಿಟಿ) ಎರಡು ಪ್ರಮುಖ ಯೋಜನೆಗಳ ಮುಂದುವರಿಕೆಗೆ ಅನುಮೋದನೆ ನೀಡಿದೆ ಹಾಗೂ 'ಜೈವಿಕ ತಂತ್ರಜ್ಞಾನ ಸಂಶೋಧನೆ ಆವಿಷ್ಕಾರ ಮತ್ತು ಉದ್ಯಮಶೀಲತೆ ಅಭಿವೃದ್ಧಿ (ಬಯೋ-ರೈಡ್)' ಘಟಕ ಅಂದರೆ ಜೈವಿಕ ಉತ್ಪಾದನೆ ಮತ್ತು ಜೈವಿಕ ಫೌಂಡ್ರಿ - ಒಂದು ಯೋಜನೆಯಾಗಿ ವಿಲೀನಗೊಂಡಿವೆ.