
ಭಾರತ ಇಂಧನ ಸಪ್ತಾಹದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 11th, 11:37 am
ಮಾನ್ಯ ಕೇಂದ್ರ ಸಚಿವ ಸಂಪುಟದ ಸದಸ್ಯರೇ, ಮಾನ್ಯ ರಾಯಭಾರಿಗಳೇ, ಗಣ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ, ಗೌರವಾನ್ವಿತ ಅತಿಥಿಗಳೇ, ಇತರ ಗಣ್ಯ ವ್ಯಕ್ತಿಗಳೇ, ಮಹಿಳೆಯರೇ ಮತ್ತು ಮಹನೀಯರೇ,
ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 11th, 09:55 am
21ನೇ ಶತಮಾನವು ಭಾರತದ್ದೆಂದು ವಿಶ್ವದಾದ್ಯಂತ ತಜ್ಞರು ಪ್ರತಿಪಾದಿಸುತ್ತಿರುವುದನ್ನು ಪ್ರಮುಖವಾಗಿ ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ “ಭಾರತವು ತನ್ನ ಬೆಳವಣಿಗೆಯನ್ನು ಮಾತ್ರವಲ್ಲದೆ ವಿಶ್ವದ ಬೆಳವಣಿಗೆಯನ್ನೂ ಸಹ ಮುನ್ನಡೆಸುತ್ತಿದೆ, ಅದರಲ್ಲಿ ಇಂಧನ ವಲಯವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಭಾರತದ ಇಂಧನ ಮಹತ್ವಾಕಾಂಕ್ಷೆಗಳು ಐದು ಸ್ತಂಭಗಳ ಮೇಲೆ ನಿಂತಿದೆ, ಅವುಗಳೆಂದರೆ ಸಂಪನ್ಮೂಲಗಳ ಸಮರ್ಪಕ ಬಳಕೆ, ಪ್ರತಿಭಾನ್ವಿತ ಮನಸ್ಸುಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವುದು, ಆರ್ಥಿಕ ಶಕ್ತಿ ಮತ್ತು ರಾಜಕೀಯ ಸ್ಥಿರತೆ, ಇಂಧನ ವ್ಯಾಪಾರವನ್ನು ಆಕರ್ಷಕ ಮತ್ತು ಸುಲಭಗೊಳಿಸುವ ಕಾರ್ಯತಂತ್ರದ ಭೌಗೋಳಿಕತೆ ಮತ್ತು ಜಾಗತಿಕ ಸುಸ್ಥಿರತೆಗೆ ಬದ್ಧತೆ. ಈ ಅಂಶಗಳು ಭಾರತದ ಇಂಧನ ವಲಯದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ಉಲ್ಲೇಖಿಸಿದರು.
ಎಎಸ್ ಪಿಐಯ ಕ್ರಿಟಿಕಲ್ ಟೆಕ್ನಾಲಜಿ ಟ್ರ್ಯಾಕರ್‌ನಲ್ಲಿ ಅಗ್ರ ಐದು ರಾಷ್ಟ್ರಗಳಲ್ಲಿ ಭಾರತದ ಸ್ಥಾನವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಶ್ಲಾಘಿಸಿದ್ದಾರೆ
October 03rd, 07:35 pm
ಎಎಸ್ ಪಿಐ ಕ್ರಿಟಿಕಲ್ ಟೆಕ್ನಾಲಜಿ ಟ್ರ್ಯಾಕರ್ ಪ್ರಕಾರ 64 ತಂತ್ರಜ್ಞಾನಗಳಲ್ಲಿ 45 ಕ್ಕೆ ಬಂದಾಗ ಭಾರತವು ಈಗ ಅಗ್ರ ಐದು ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ. ಅಧ್ಯಯನವು ವೈಜ್ಞಾನಿಕ ಮತ್ತು ಸಂಶೋಧನಾ ಪ್ರಗತಿಯ ಓಟ ಮತ್ತು ಜಾಗತಿಕ ಪ್ರತಿಭೆಯನ್ನು ಉಳಿಸಿಕೊಳ್ಳುವ ಸಾಮರ್ಥ್ಯ ಸೇರಿದಂತೆ ನಿರ್ಣಾಯಕ ತಂತ್ರಜ್ಞಾನಗಳ ಅಭಿವೃದ್ಧಿಯನ್ನು ಟ್ರ್ಯಾಕ್ ಮಾಡುತ್ತದೆ. ಅಧ್ಯಯನವು ವಿಶ್ವದ ಪ್ರಮುಖ ತಂತ್ರಜ್ಞಾನಗಳ ಅಭಿವೃದ್ಧಿ ಮತ್ತು ನಿಯಂತ್ರಣಕ್ಕೆ ಆಧಾರವಾಗಿರುವ ನಿರ್ಣಾಯಕ ಅಂಶಗಳನ್ನು ದಾಖಲಿಸುತ್ತದೆ ಮತ್ತು ಅದು ದೇಶದ ಆರ್ಥಿಕ ಪರಾಕ್ರಮವನ್ನು ಹೇಗೆ ಅಳೆಯುತ್ತದೆ.ಜಮೈಕಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆ
October 01st, 12:00 pm
ಪ್ರಧಾನ ಮಂತ್ರಿ ಹೋಲ್ನೆಸ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಸಂತೋಷವಾಗಿದೆ. ಇದು ಪ್ರಧಾನಮಂತ್ರಿ ಹೋಲ್ನೆಸ್ ಅವರ ಮೊದಲ ದ್ವಿಪಕ್ಷೀಯ ಭಾರತ ಭೇಟಿಯಾಗಿದೆ. ಅದಕ್ಕಾಗಿಯೇ ನಾವು ಈ ಭೇಟಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತೇವೆ.ಪ್ರಧಾನ ಮಂತ್ರಿ ಹೋಲ್ನೆಸ್ ಅವರು ಬಹಳ ಹಿಂದಿನಿಂದಲೂ ಭಾರತದ ಸ್ನೇಹಿತರಾಗಿದ್ದಾರೆ. ಹಲವಾರು ಬಾರಿ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆತಿದೆ. ಮತ್ತು ಪ್ರತಿ ಬಾರಿಯೂ, ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ಅವರ ಆಲೋಚನೆಗಳಲ್ಲಿ ಅವರ ಬದ್ಧತೆಯನ್ನು ನಾನು ಅರಿತುಕೊಂಡಿದ್ದೇನೆ. ಅವರ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಇಡೀ ಕೆರಿಬಿಯನ್ ಪ್ರದೇಶದೊಂದಿಗಿನ ನಮ್ಮ ಬಾಂಧವ್ಯವನ್ನು ವರ್ಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಚೊಚ್ಚಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವ; ಪ್ರಧಾನಿ ನರೇಂದ್ರ ಮೋದಿ ಸಂದೇಶ
September 05th, 11:00 am
ನನ್ನ ಆತ್ಮೀಯ ಸ್ನೇಹಿತರೇ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು. ಮೊದಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ಈ ಅದ್ಭುತ ಉಪಕ್ರಮಕ್ಕಾಗಿ ನಾನು ಅಂತಾರಾಷ್ಟ್ರೀಯ ಸೌರಶಕ್ತಿ ಮೈತ್ರಿಕೂಟವನ್ನು ಅಭಿನಂದಿಸುತ್ತೇನೆ.ಪ್ರಧಾನ ಮಂತ್ರಿ JI-VAN ಯೋಜನೆಯಲ್ಲಿ ತಿದ್ದುಪಡಿಗೆ ಕ್ಯಾಬಿನೆಟ್ ಅನುಮೋದನೆ
August 09th, 10:21 pm
ಜೈವಿಕ ಇಂಧನ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳೊಂದಿಗೆ ವೇಗವನ್ನು ಉಳಿಸಿಕೊಳ್ಳಲು ಮತ್ತು ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಲು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ಮಾರ್ಪಡಿಸಿದ ಪ್ರಧಾನ ಮಂತ್ರಿ JI-VAN ಯೋಜನೆಗೆ ಅನುಮೋದನೆ ನೀಡಿದೆ.ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ
July 10th, 02:45 pm
ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 14th, 02:30 pm
ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ವಿಶೇಷವಾಗಿ ಎರಡನೇ ಬಾರಿಗೆ ಮುಖ್ಯ ಭಾಷಣ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪಾಲಿಗೆ ದೊಡ್ಡ ಗೌರವವಾಗಿದೆ. ಈ ಆಮಂತ್ರಣವನ್ನು ನೀಡಿದ್ದಕ್ಕಾಗಿ ಮತ್ತು ಅಂತಹ ಆತ್ಮೀಯ ಸ್ವಾಗತವನ್ನು ನೀಡಿದ್ದಕ್ಕಾಗಿ ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ರಶೀದ್ ಜಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಗೌರವಾನ್ವಿತ ಸಹೋದರ , ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಹಲವಾರು ಸಂದರ್ಭಗಳಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ದೂರ ದೃಷ್ಟಿಕೋನ ಹೊಂದಿರುವ ನಾಯಕ ಮಾತ್ರವಲ್ಲದೆ ನಿರ್ಣಯ ಮತ್ತು ಬದ್ಧತೆಯ ನಾಯಕರೂ ಕೂಡಾ ಹೌದು.ವಿಶ್ವ ಸರ್ಕಾರಗಳ ಶೃಂಗಸಭೆ 2024 ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
February 14th, 02:09 pm
ಯು.ಎ.ಇ. ಉಪಾಧ್ಯಕ್ಷ, ಪ್ರಧಾನಮಂತ್ರಿ, ರಕ್ಷಣಾ ಸಚಿವರು ಮತ್ತು ದುಬೈ ಆಡಳಿತಗಾರರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 14 ಫೆಬ್ರವರಿ 2024 ರಂದು ದುಬೈನಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು. ಶೃಂಗಸಭೆಯಲ್ಲಿ ಭವಿಷ್ಯದ ಸರ್ಕಾರಗಳನ್ನು ರೂಪಿಸುವುದು ವಿಷಯದ ಕುರಿತು ಅವರು ಪ್ರಧಾನ ಅಧಿವೇಶನದಲ್ಲಿ ವಿಶೇಷ ಭಾಷಣವನ್ನು ಮಾಡಿದರು. 2018 ರಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪ್ರಧಾನಮಂತ್ರಿಯವರು ಭಾಗವಹಿಸಿದ್ದರು. ಈ ಬಾರಿಯ ಶೃಂಗಸಭೆಯಲ್ಲಿ 10 ರಾಷ್ಟ್ರಾಧ್ಯಕ್ಷರು ಮತ್ತು 10 ದೇಶಗಳ ಪ್ರಧಾನಮಂತ್ರಿಗಳು ಸೇರಿದಂತೆ 20 ವಿಶ್ವ ನಾಯಕರು ಭಾಗವಹಿಸಿದ್ದಾರೆ. ಈ ಜಾಗತಿಕ ಕೂಟದಲ್ಲಿ 120 ದೇಶಗಳ ಸರ್ಕಾರಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿ ಪ್ರತಿನಿಧಿಸಿದ್ದಾರೆ.Whatever BJP promises, it delivers: PM Modi in Telangana
November 25th, 03:30 pm
Ahead of the Telangana assembly election, PM Modi addressed an emphatic public meeting in Kamareddy today. He said, “Whenever I come to Telangana, I see a wave of hope among the people here. This wave is the wave of expectation. It is the wave of change. It is the wave of the sentiment that Telangana should achieve the height of development that it deserves.”PM Modi addresses public meetings in Telangana’s Kamareddy & Maheshwaram
November 25th, 02:15 pm
Ahead of the Telangana assembly election, PM Modi addressed emphatic public meetings in Kamareddy and Maheshwaram today. He said, “Whenever I come to Telangana, I see a wave of hope among the people here. This wave is the wave of expectation. It is the wave of change. It is the wave of the sentiment that Telangana should achieve the height of development that it deserves.”ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ಜಾಗತಿಕ ಜೈವಿಕ ಇಂಧನ ಒಕ್ಕೂಟ (ಜಿಬಿಎ) ಆರಂಭ
September 09th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರ, ಬಾಂಗ್ಲಾದೇಶ, ಇಟಲಿ, ಯುಎಸ್ಎ, ಬ್ರೆಜಿಲ್, ಅರ್ಜೆಂಟೀನಾ, ಮಾರಿಷಸ್ ಮತ್ತು ಯುಎಇ ನಾಯಕರೊಂದಿಗೆ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಚಾಲನೆ ನೀಡಿದರು.ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 10th, 09:43 pm
ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ
March 10th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .ಭಾರತಕ್ಕೆ ಜರ್ಮನಿಯ ಚಾನ್ಸಲರ್ ಭೇಟಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೀಡಿದ ಪತ್ರಿಕಾ ಹೇಳಿಕೆಯ ಅನುವಾದ
February 25th, 01:49 pm
ನಾನು ನಮ್ಮಮಿತ್ರ ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಆಹ್ವಾನಿಸುತ್ತೇನೆ. ಚಾನ್ಸಲರ್ ಶೋಲ್ಜ್ ಹಲವು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು 2012ರಲ್ಲಿ ಭಾರತಕ್ಕೆ ಮೊದಲು ಭೇಟಿ ನೀಡಿದ್ದಾಗ ಹ್ಯಾಂಬರ್ಗ್ ನ ಮೇಯರ್ ಒಬ್ಬರ ಮೊದಲ ಭೇಟಿಯಾಗಿತ್ತು. ಹಾಗಾಗಿ ಅವರು ಭಾರತ-ಜರ್ಮನಿಯ ಸಂಬಂಧಗಳ ಸಾಮರ್ಥ್ಯವನ್ನು ಬಹಳ ಹಿಂದೆಯೇ ಅರ್ಥೈಸಿಕೊಂಡಿದ್ದಾರೆ.'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
February 23rd, 10:22 am
2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 23rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್‌ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.We have to build a government that will lay a solid foundation for 25 years: PM Modi in Bavla, Gujarat
November 24th, 11:14 am
In his last public meeting for the day, PM Modi spoke on the soul of India, that is its villages. Hitting out at the opposition, PM Modi slammed the Congress for ignoring the soul of India and said, “When it came to resources and facilities, the villages were not even considered in the Congress governments. As a result, the gap between villages and cities kept on increasing”. PM Modi further added that the condition of villages in Gujarat 20 years ago was dire, but today has been completely revamped under the BJP government.