ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

October 21st, 10:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.

ಸ್ವಚ್ಛತಾ ಹಿ ಸೇವಾ​​​​​​​ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

October 02nd, 10:15 am

ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು

October 02nd, 10:10 am

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.

Modernization of agriculture systems is a must for Viksit Bharat: PM Modi

February 24th, 10:36 am

PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.

ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ

February 24th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 23rd, 02:45 pm

ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮಹೇಂದ್ರ ನಾಥ್ ಪಾಂಡೆ ಜೀ, ಉಪ ಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜೀ, ಬನಾಸ್ ಡೈರಿ ಅಧ್ಯಕ್ಷ ಶಂಕರ್ ಭಾಯ್ ಚೌಧರಿ, ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ರಾಜ್ಯದ ಇತರ ಸಚಿವರು, ಪ್ರತಿನಿಧಿಗಳು, ಮತ್ತು ಕಾಶಿಯ ನನ್ನ ಸಹೋದರ ಸಹೋದರಿಯರೇ.

ವಾರಣಾಸಿಯಲ್ಲಿ 13,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು

February 23rd, 02:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 13,000 ಕೋಟಿ ರೂಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಣಾಸಿಯ ಕಾರ್ಖಿಯಾನ್‌ನಲ್ಲಿರುವ ʻಯುಪಿಎಸ್‌ಐಡಿಎ ಆಗ್ರೋ ಪಾರ್ಕ್ʼನಲ್ಲಿ ನಿರ್ಮಿಸಲಾಗಿರುವ ʻಬನಸ್ಕಾಂತ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತʼ ಒಡೆತನದ ಹಾಲು ಸಂಸ್ಕರಣಾ ಘಟಕವಾದ ʻಬನಾಸ್ ಕಾಶಿ ಸಂಕುಲ್‌ʼಗೆ ಭೇಟಿ ನೀಡಿ ಪಶುಸಂಗೋಪನಾ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ʻಪಿಎಂ ಮೋದಿ ಉದ್ಯೋಗ ಪತ್ರʼಗಳು ಮತ್ತು ʻಜಿಐ ಅಧಿಕೃತ ಬಳಕೆದಾರ ಪ್ರಮಾಣಪತ್ರʼಗಳನ್ನು ವಿತರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ವಾಯುಯಾನ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನಗರಾಭಿವೃದ್ಧಿ ಮತ್ತು ನೈರ್ಮಲ್ಯದಂತಹ ಪ್ರಮುಖ ಕ್ಷೇತ್ರಗಳ ಅಗತ್ಯಗಳನ್ನು ಪೂರೈಸುತ್ತವೆ.

​​​​​​​ಗೋವಾದಲ್ಲಿ ನಡೆದ ಭಾರತ ಇಂಧನ ಸಪ್ತಾಹ 2024 ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ

February 06th, 12:00 pm

ಇದು ಭಾರತ ಇಂಧನ ಸಪ್ತಾಹದ ಎರಡನೇ ಆವೃತ್ತಿ, ನಾನು ನಿಮ್ಮೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇದು ಕ್ರಿಯಾಶೀಲ ಶಕ್ತಿಗೆ ಹೆಸರಾದ ರಾಜ್ಯ ಗೋವಾದಲ್ಲಿ ನಡೆಯುತ್ತಿರುವುದು ನನಗೆ ಅತೀವ ಆನಂದ ತಂದಿದೆ. ತನ್ನ ಆತಿಥ್ಯಕ್ಕೆ ಹೆಸರುವಾಸಿಯಾದ ಗೋವಾ ತನ್ನ ಶ್ರೀಮಂತ ಸೌಂದರ್ಯ ಮತ್ತು ಸಂಸ್ಕೃತಿಯಿಂದಾಗಿ ಜಗತ್ತಿನೆಲ್ಲೆಡೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರಸ್ತುತ ಗೋವಾ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ದರಿಂದ, ಪರಿಸರ ಪ್ರಜ್ಞೆ ಮತ್ತು ಸುಸ್ಥಿರ ಭವಿಷ್ಯವನ್ನು ಚರ್ಚಿಸಲು ನಾವು ಸಭೆ ನಡೆಸುತ್ತಿರುವಾಗ, ಗೋವಾ ಒಂದು ಸೂಕ್ತ ಸ್ಥಳವಾಗಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಮ್ಮ ಗೌರವಾನ್ವಿತ ವಿದೇಶಿ ಅತಿಥಿಗಳು ಜೀವಮಾನವಿಡೀ ಗೋವಾದ ಅಚ್ಚುಮೆಚ್ಚಿನ ನೆನಪುಗಳನ್ನು ತಮ್ಮೊಂದಿಗೆ ಒಯ್ಯುತ್ತಾರೆಂಬ ವಿಶ್ವಾಸ ನನಗಿದೆ

​​​​​​​ಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಮಂತ್ರಿ

February 06th, 11:18 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿಂದು “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮ ಉದ್ಘಾಟಿಸಿದರು. “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮವು ಭಾರತದ ಅತಿ ದೊಡ್ಡ ಮತ್ತು ಎಲ್ಲವನ್ನು ಒಳಗೊಂಡಿರುವ ಇಂಧನ ಪ್ರದರ್ಶನ ಮತ್ತು ಸಮ್ಮೇಳನವಾಗಿದ್ದು, ಭಾರತದ ಇಂಧನ ಪರಿವರ್ತನೆಯ ಗುರಿಗಳನ್ನು ವೇಗಗೊಳಿಸಲು ಸಂಪೂರ್ಣ ಇಂಧನ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಪ್ರಧಾನ ಮಂತ್ರಿ ಅವರು ಜಾಗತಿಕ ಮಟ್ಟದ ತೈಲ ಮತ್ತು ಅನಿಲ ಕ್ಷೇತ್ರದ ಸಿಇಒಗಳು ಮತ್ತು ತಜ್ಞರೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.

'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

February 23rd, 10:22 am

2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.

'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

February 23rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್‌ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.

ಅಂತಾರಾಷ್ಟ್ರೀಯ ಡೇರಿ ಒಕ್ಕೂಟದ ವಿಶ್ವ ಡೈರಿ ಶೃಂಗಸಭೆ 2022 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

September 12th, 11:01 am

ಇಂದು ವಿಶ್ವದಾದ್ಯಂತದ ಡೇರಿ ಕ್ಷೇತ್ರದ ತಜ್ಞರು ಮತ್ತು ಆವಿಷ್ಕಾರಕರು ಭಾರತದಲ್ಲಿ ಸೇರಿರುವುದು ನನಗೆ ಸಂತೋಷ ತಂದಿದೆ. ಭಾರತದ ಪ್ರಾಣಿಗಳು, ಭಾರತದ ಪ್ರಜೆಗಳು ಮತ್ತು ಭಾರತ ಸರ್ಕಾರದ ಪರವಾಗಿ, ವಿಶ್ವ ಡೇರಿ ಶೃಂಗಸಭೆಗೆ ವಿವಿಧ ದೇಶಗಳಿಂದ ಬಂದಿರುವ ಎಲ್ಲ ಗಣ್ಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಹೈನುಗಾರಿಕೆಯ ಸಾಮರ್ಥ್ಯವು ಗ್ರಾಮೀಣ ಆರ್ಥಿಕತೆಗೆ ಇಂಧನವನ್ನು ನೀಡುವುದಲ್ಲದೆ, ವಿಶ್ವದಾದ್ಯಂತದ ಕೋಟ್ಯಂತರ ಜನರಿಗೆ ಜೀವನೋಪಾಯದ ಪ್ರಮುಖ ಮೂಲವಾಗಿದೆ. ಹೈನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳು, ತಂತ್ರಜ್ಞಾನ, ಪರಿಣತಿ ಮತ್ತು ಸಂಪ್ರದಾಯಗಳ ವಿಷಯದಲ್ಲಿ ಪರಸ್ಪರರ ಜ್ಞಾನ ಮತ್ತು ಕಲಿಕೆಯನ್ನು ಹೆಚ್ಚಿಸುವಲ್ಲಿ ಈ ಶೃಂಗಸಭೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನನಗೆ ಖಾತ್ರಿಯಿದೆ.

PM inaugurates International Dairy Federation World Dairy Summit 2022 in Greater Noida

September 12th, 11:00 am

PM Modi inaugurated International Dairy Federation World Dairy Summit. “The potential of the dairy sector not only gives impetus to the rural economy, but is also a major source of livelihood for crores of people across the world”, he said.

ಗುಜರಾತ್ ನ ಗಾಂಧಿನಗರದಲ್ಲಿ ಭಾರತದ ಸುಜುಕಿಯ 40ನೇ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 28th, 08:06 pm

ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಜೀ, ಉಪ ಮುಖ್ಯಮಂತ್ರಿ ಶ್ರೀ ಕೃಷ್ಣ ಚೌಟಾಲಾ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಿ.ಆರ್. ಪಾಟೀಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಹಿರಿಯ ಅಧಿಕಾರಿಗಳೇ, ಭಾರತದಲ್ಲಿನ ಜಪಾನ್ ರಾಯಭಾರಿಯವರೇ, ಮಾರುತಿ-ಸುಜುಕಿಯ ಹಿರಿಯ ಅಧಿಕಾರಿಗಳೇ, ಇತರ ಎಲ್ಲ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!

ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿಂದು ಭಾರತದಲ್ಲಿ ಸುಜುಕಿಯ 40ನೇ ವರ್ಷಗಳ ಕಾರ್ಯಾಚರಣೆ, ಸ್ಮರಣಾರ್ಥ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

August 28th, 05:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾರತದಲ್ಲಿ ಸುಜುಕಿಯ 40 ವರ್ಷಗಳ ಕಾರ್ಯಾಚರಣೆ ಅಂಗವಾಗಿ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಭಾರತದಲ್ಲಿನ ಜಪಾನ್ ರಾಯಭಾರಿ ಮಾನ್ಯ ಶ್ರೀ ಸತೋಶಿ ಸುಜುಕಿ, ಗುಜರಾತ್ ಮುಖ್ಯಮಂತ್ರಿ ಮಾನ್ಯ ಶ್ರೀ ಭೂಪೇಂದ್ರ ಪಟೇಲ್, ಸಂಸದ ಶ್ರೀ ಸಿ.ಆರ್.ಪಾಟೀಲ್, ರಾಜ್ಯ ಸಚಿವ ಶ್ರೀ ಜಗದೀಶ್ ಪಾಂಚಾಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ಮಾಜಿ ಅಧ್ಯಕ್ಷರಾದ ಶ್ರೀ ಒ. ಸುಜುಕಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಅಧ್ಯಕ್ಷ ಶ್ರೀ ಟಿ. ಸುಜುಕಿ ಮತ್ತು ಮಾರುತಿ-ಸುಜುಕಿಯ ಅಧ್ಯಕ್ಷ ಶ್ರೀ ಆರ್.ಸಿ ಭಾರ್ಗವ ಉಪಸ್ಥಿತರಿದ್ದರು. ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು ಮತ್ತು ಜಪಾನಿನ ಪ್ರಧಾನ ಮಂತ್ರಿ ಮಾನ್ಯ ಶ್ರೀ ಫುಮಿಯೋ ಕಿಶಿದಾ ಅವರ ವೀಡಿಯೊ ಸಂದೇಶವನ್ನು ಸಹ ಪ್ರದರ್ಶಿಸಲಾಯಿತು.

Freebies will prevent the country from becoming self-reliant, increase burden on honest taxpayers: PM

August 10th, 04:42 pm

On the occasion of World Biofuel Day, PM Modi dedicated the 2G Ethanol Plant in Panipat, Haryana to the nation. The PM pointed out that due to the mixing of ethanol in petrol, in the last 7-8 years, about 50 thousand crore rupees of the country have been saved from going abroad and about the same amount has gone to the farmers of our country because of ethanol blending.

PM dedicates 2G Ethanol Plant in Panipat

August 10th, 04:40 pm

On the occasion of World Biofuel Day, PM Modi dedicated the 2G Ethanol Plant in Panipat, Haryana to the nation. The PM pointed out that due to the mixing of ethanol in petrol, in the last 7-8 years, about 50 thousand crore rupees of the country have been saved from going abroad and about the same amount has gone to the farmers of our country because of ethanol blending.

ನವದೆಹಲಿಯ ವಿಜ್ಞಾನ ಭವನದಲ್ಲಿ ಇಶಾ ಫೌಂಡೇಶನ್ ಆಯೋಜಿಸಿದ್ದ 'ಮಣ್ಣನ್ನು ಉಳಿಸಿ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡಾನುವಾದ

June 05th, 02:47 pm

ಎಲ್ಲರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು! ಈ ಸಂದರ್ಭದಲ್ಲಿ ಸದ್ಗುರು ಮತ್ತು ಇಶಾ ಫೌಂಡೇಶನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮಾರ್ಚ್‌ನಲ್ಲಿ ಅವರ ಸಂಸ್ಥೆಯು ಮಣ್ಣನ್ನು ಉಳಿಸಿ ಅಭಿಯಾನವನ್ನು ಆರಂಭಿಸಿತು. 27 ದೇಶಗಳ ಮೂಲಕ ಅವರ ಪಯಣ ಇಂದು 75ನೇ ದಿನಕ್ಕೆ ಕಾಲಿಟ್ಟಿದೆ. ದೇಶವು ತನ್ನ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ ಮತ್ತು ಈ 'ಅಮೃತಕಾಲ'ದಲ್ಲಿ ಹೊಸ ಸಂಕಲ್ಪಗಳನ್ನು ಮಾಡುತ್ತಿರುವಾಗ, ಇಂತಹ ಜನಾಂದೋಲನಗಳು ಪ್ರಮುಖವಾಗುತ್ತವೆ.

PM Addresses 'Save Soil' Programme Organised by Isha Foundation

June 05th, 11:00 am

PM Modi addressed 'Save Soil' programme organised by Isha Foundation. He said that to save the soil, we have focused on five main aspects. First- How to make the soil chemical free. Second- How to save the organisms that live in the soil. Third- How to maintain soil moisture. Fourth- How to remove the damage that is happening to the soil due to less groundwater. Fifth, how to stop the continuous erosion of soil due to the reduction of forests.