ಗಡಿ ಭದ್ರತಾ ಪಡೆಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ
December 01st, 08:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಡಿ ಭದ್ರತಾ ಪಡೆಗೆ ಸಂಸ್ಥಾಪನಾ ದಿನದ ಅಂಗವಾಗಿ ಶುಭಾಶಯ ಕೋರಿದರು. ಗಡಿ ಭದ್ರತಾ ಪಡೆಯ ಧೈರ್ಯ, ಸಮರ್ಪಣೆ ಮತ್ತು ಅಸಾಧಾರಣ ಸೇವೆಯು ರಕ್ಷಣಾ ಸೇವೆಯಲ್ಲಿ ನಿರ್ಣಾಯಕವಾಗಿ ಎಂದು ಅವರು ಶ್ಲಾಘಿಸಿದ್ದಾರೆ.ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
October 31st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು."ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "
October 31st, 07:00 pm
ಗುಜರಾತ್ ನ ಕಚ್ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.ಪದಾತಿದಳ ದಿನದ ಅಂಗವಾಗಿ ಎಲ್ಲಾ ಶ್ರೇಣಿಯ ಸೇನಾ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯಕ್ಕೆ ಪ್ರಧಾನಮಂತ್ರಿ ಅವರಿಂದ ವಂದನೆ
October 27th, 09:07 am
ಪದಾತಿ ದಳ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದಾತಿದಳದ ಎಲ್ಲಾ ಶ್ರೇಣಿಯ ಸೇನಾ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ.ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ಅಟಾರ್ನಿಸ್ ಮತ್ತು ಸಾಲಿಸಿಟರ್ಸ್ ಜನರಲ್ ಕಾನ್ಫರೆನ್ಸ್ 2024 ಅನ್ನು ಫೆಬ್ರವರಿ 3 ರಂದು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 02nd, 11:10 am
ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ವಕೀಲರು ಮತ್ತು ಸಾಲಿಸಿಟರ್ಸ್ ಜನರಲ್ ಕಾನ್ಫರೆನ್ಸ್ 2024 ಅನ್ನು 3 ನೇ ಫೆಬ್ರವರಿ, 2024 ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜ್ಞಾನ ಭವನದಲ್ಲಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪಿಎಂ-ಜನ್ ಮನ್ ಯೋಜನೆಯಡಿ ಪಿಎಂಎವೈ(ಜಿ)ಯ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 15th, 12:15 pm
ಎಲ್ಲರಿಗೂ ಶುಭಾಶಯಗಳು! ಪ್ರಸ್ತುತ ಉತ್ತರಾಯಣ, ಮಕರ ಸಂಕ್ರಾಂತಿ, ಪೊಂಗಲ್ ಮತ್ತು ಬಿಹು ಹಬ್ಬದ ಆಚರಣೆಯ ವಾತಾವರಣವು ಇಡೀ ದೇಶವನ್ನು ವ್ಯಾಪಿಸಿದೆ. ಹಲವಾರು ಹಬ್ಬಗಳ ಸಂಭ್ರಮ ನಮ್ಮನ್ನು ಆವರಿಸಿದೆ. ಇಂದಿನ ಈ ಕಾರ್ಯಕ್ರಮದ ಉತ್ಸಾಹಕ್ಕೆ ಹೆಚ್ಚಿನ ಭವ್ಯತೆ ಮತ್ತು ಲವಲವಿಕೆಯನ್ನು ಸೇರಿಸಿದೆ. ಈ ಸಂದರ್ಭದಲ್ಲಿ ನಿಮ್ಮೊಂದಿಗೆ ಸಂವಹನ ನಡೆಸುವುದು ನನಗೆ ಸಂಭ್ರಮಾಚರಣೆಯಂತೆ ಭಾಸವಾಗುತ್ತಿದೆ. ಪ್ರಸ್ತುತ, ಅಯೋಧ್ಯೆಯಲ್ಲಿ ಹಬ್ಬಗಳು ತೆರೆದುಕೊಳ್ಳುತ್ತಿವೆ, ಅದೇ ಸಮಯದಲ್ಲಿ, ನನ್ನ ಕುಟುಂಬದ ಭಾಗವೆಂದು ಪರಿಗಣಿಸಲ್ಪಟ್ಟ ಒಂದು ಲಕ್ಷ ಅತ್ಯಂತ ಹಿಂದುಳಿದ ಬುಡಕಟ್ಟು ಸಹೋದರರು ಮತ್ತು ಸಹೋದರಿಯರು ತಮ್ಮ ಮನೆಗಳಲ್ಲಿ ಸಂತೋಷದಿಂದ ಹಬ್ಬ ಆಚರಿಸುತ್ತಿದ್ದಾರೆ. ಇದು ನನಗೆ ಅಪಾರ ಸಂತೋಷ ತರುತ್ತಿದೆ. ಇಂದು ಅವರ ಪಕ್ಕಾ ಮನೆಗಳ ನಿರ್ಮಾಣಕ್ಕಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ನಾನು ಈ ಎಲ್ಲಾ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಸಂತೋಷದ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ! ಈ ಉದಾತ್ತ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಲು ನನಗೆ ಸಿಕ್ಕಿರುವ ಅವಕಾಶವು ನನ್ನ ಜೀವನದಲ್ಲಿ ಬಹಳ ಸಂತೋಷ ತಂದಿದೆ.ʻಪಿಎಂ-ಜನಮನʼ ಯೋಜನೆಯಡಿ 1 ಲಕ್ಷ ʻಪಿಎಂಎವೈ(ಜಿ)ʼ ಫಲಾನುಭವಿಗಳಿಗೆ ಮೊದಲ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ
January 15th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ’ದ (ಪಿಎಂ-ಜನಮನ) ಅಡಿಯಲ್ಲಿ ʻಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆʼಯ(ಪಿಎಂಎವೈ-ಜಿ)ʼ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪಿಎಂ-ಜನಮನʼ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಅಖಿಲ ಭಾರತ ಮಹಾನಿರ್ದೇಶಕರು/ ಪೊಲೀಸ್ ಮಹಾನಿರೀಕ್ಷಕರ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗಿ
January 07th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 6 ಮತ್ತು 7 ರಂದು ಜೈಪುರದ ರಾಜಸ್ಥಾನ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 58 ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದರು.There is continuous progress in bilateral trade, investment between India and Kenya: PM Modi
December 05th, 01:33 pm
Addressing the event during the visit of the President of Kenya to India, PM Modi said, Africa has always been given high priority in India's foreign policy. Over the past decade, we have strengthened our collaboration with Africa in mission mode. I am confident that President Ruto's visit will not only enhance our bilateral relations but also provide new impetus to our engagement with the entire African continent.PM Narendra Modi addresses public meetings in Pali & Pilibanga, Rajasthan
November 20th, 12:00 pm
Amidst the ongoing election campaigning in Rajasthan, PM Modi’s rally spree continued as he addressed public meetings in Pali and Pilibanga. Addressing a massive gathering, PM Modi emphasized the nation’s commitment to development and the critical role Rajasthan plays in India’s advancement in the 21st century. The Prime Minister underlined the development vision of the BJP government and condemned the misgovernance of the Congress party in the state.PM Modi delivers powerful speeches at public meetings in Taranagar & Jhunjhunu, Rajasthan
November 19th, 11:03 am
PM Modi, in his unwavering election campaign efforts ahead of the Rajasthan assembly election, addressed public meetings in Taranagar and Jhunjhunu. Observing a massive gathering, he exclaimed, “Jan-Jan Ki Yahi Pukar, Aa Rahi Bhajpa Sarkar”. PM Modi said, “Nowadays, the entire country is filled with the fervour of cricket. In cricket, a batsman comes and scores runs for his team. But among the Congress members, there is such a dispute that scoring runs is far-fetched; these people are engaged in getting each other run out. The Congress government spent five years getting each other run out.”Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.Our connectivity initiatives emerged as a lifeline during the COVID Pandemic: PM Modi
November 01st, 11:00 am
PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 31st, 10:00 am
ಇಲ್ಲಿ ನೆರೆದಿರುವ ಎಲ್ಲಾ ಯುವಕರು ಮತ್ತು ನಿಮ್ಮಂತಹ ಧೈರ್ಯಶಾಲಿಗಳ ಈ ಉತ್ಸಾಹವು ರಾಷ್ಟ್ರೀಯ ಏಕತಾ ದಿವಸ್‌ನ (ರಾಷ್ಟ್ರೀಯ ಏಕತಾ ದಿನ) ದೊಡ್ಡ ಶಕ್ತಿಯಾಗಿದೆ. ಒಂದು ರೀತಿಯಲ್ಲಿ, ನನ್ನ ಮುಂದೆ ಮಿನಿ ಭಾರತವನ್ನೇ ನೋಡಬಹುದು. ವಿವಿಧ ರಾಜ್ಯಗಳು, ವಿವಿಧ ಭಾಷೆಗಳು ಮತ್ತು ವಿಭಿನ್ನ ಸಂಪ್ರದಾಯಗಳು ಇಲ್ಲಿವೆ, ಆದರೆ ಇಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಯು ಏಕತೆಯ ಗಟ್ಟಿಯಾದ ಎಳೆಯಿಂದ ಸಂಪರ್ಕ ಹೊಂದಿದ್ದಾನೆ. ಲೆಕ್ಕವಿಲ್ಲದಷ್ಟು ಮಣಿಗಳಿವೆ, ಆದರೆ ಹಾರವು ಒಂದೇ ಆಗಿದೆ. ಲೆಕ್ಕವಿಲ್ಲದಷ್ಟು ದೇಹಗಳಿವೆ, ಆದರೆ ಮನಸ್ಸು ಒಂದೇ ಆಗಿದೆ. ಆಗಸ್ಟ್ 15 ನಮ್ಮ ಸ್ವಾತಂತ್ರ್ಯೋತ್ಸವ ಆಚರಣೆಯ ದಿನ ಮತ್ತು ಜನವರಿ 26 ನಮ್ಮ ಗಣರಾಜ್ಯೋತ್ಸವದ ದಿನವಾಗಿದೆ, ಅದೇ ರೀತಿ ಅಕ್ಟೋಬರ್ 31 ದೇಶದ ಮೂಲೆ ಮೂಲೆಗೂ ರಾಷ್ಟ್ರೀಯತೆಯನ್ನು ಪ್ರಚಾರ ಮಾಡುವ ಹಬ್ಬವಾಗಿದೆ.ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ʻರಾಷ್ಟ್ರೀಯ ಏಕತಾ ದಿನʼದ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ
October 31st, 09:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ಏಕತಾ ದಿನʼದ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಸರ್ದಾರ್ ಪಟೇಲ್ ಅವರ ಜನ್ಮ ಜಯಂತಿಯಂದು ಏಕತಾ ಪ್ರತಿಮೆಗೆ ಅವರು ಗೌರವ ನಮನ ಸಲ್ಲಿಸಿದರು. ಬಿಎಸ್ಎಫ್ ಮತ್ತು ವಿವಿಧ ರಾಜ್ಯ ಪೊಲೀಸರ ತುಕಡಿಗಳನ್ನು ಒಳಗೊಂಡ ʻರಾಷ್ಟ್ರೀಯ ಏಕತಾ ದಿವಸ್ ಪೆರೇಡ್ʼ, ಸಂಪೂರ್ಣ ಮಹಿಳಾ ʻಸಿಆರ್‌ಪಿಎಫ್ʼ ಬೈಕ್ ಸವಾರರ ʻಡೇರ್ಡೆವಿಲ್ ಶೋʼ, ʻಬಿಎಸ್ಎಫ್ʼನ ಮಹಿಳಾ ಪೈಪ್ ಬ್ಯಾಂಡ್, ಗುಜರಾತ್ ಮಹಿಳಾ ಪೊಲೀಸರಿಂದ ನೃತ್ಯ ಸಂಯೋಜನೆ ಕಾರ್ಯಕ್ರಮ, ವಿಶೇಷ ಎನ್‌ಸಿಸಿ ಪ್ರದರ್ಶನ, ಶಾಲಾ ಬ್ಯಾಂಡ್‌ಗಳ ಪ್ರದರ್ಶನ, ಭಾರತೀಯ ವಾಯುಪಡೆಯ ವೈಮಾನಿಕ ಹಾರಾಟ, ʻರೋಮಾಂಚಕ ಗ್ರಾಮʼಗಳ ಆರ್ಥಿಕ ಕಾರ್ಯಸಾಧ್ಯತೆಯನ್ನು ಪ್ರದರ್ಶನ ಮುಂತಾದ ಕಾರ್ಯಕ್ರಮಗಳಿಗೆ ಶ್ರೀ ಮೋದಿ ಅವರು ಸಾಕ್ಷಿಯಾದರು.ಸಮಾಜದಲ್ಲಿನ ಅನಿಷ್ಟಗಳು, ತಾರತಮ್ಯವನ್ನು ಕೊನೆಗೊಳಿಸಲು ನಾವು ಪ್ರತಿಜ್ಞೆ ತೆಗೆದುಕೊಳ್ಳಬೇಕು: ದೆಹಲಿಯ ದ್ವಾರಕಾದಲ್ಲಿ ಪ್ರಧಾನಿ ಮೋದಿ
October 24th, 06:32 pm
ದೆಹಲಿಯ ದ್ವಾರಕಾದಲ್ಲಿ ರಾಮ್ ಲೀಲಾದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ರಾವಣ ದಹನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ವಿಜಯದಶಿಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಪ್ರತಿಜ್ಞೆಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.ದೆಹಲಿಯ ದ್ವಾರಕಾದಲ್ಲಿ ವಿಜಯ ದಶಮಿ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 24th, 06:31 pm
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯದಶಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಸಂಕಲ್ಪಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಉದ್ಯೋಗ ಪಡೆದ 51000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 28th, 11:20 am
ಈ 'ಆಜಾದಿ ಕಾ ಅಮೃತಕಾಲ್'ನಲ್ಲಿ ದೇಶದ ಸ್ವಾತಂತ್ರ್ಯದ ರಕ್ಷಕರಾಗಿರುವ ಮತ್ತು ಕೋಟ್ಯಂತರ ದೇಶವಾಸಿಗಳ ರಕ್ಷಕರಾಗಿರುವ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇಂದು ನೇಮಕಾತಿ ಪತ್ರ ಪಡೆಯುತ್ತಿರುವ ಯುವಕರು ದೇಶ ಸೇವೆ ಮಾಡುವುದಲ್ಲದೆ, ದೇಶದ ನಾಗರಿಕರ ರಕ್ಷಣೆ ಮಾಡುತ್ತಾರೆ ಎಂಬ ಕಾರಣಕ್ಕೆ ನಾನು ನಿಮ್ಮನ್ನು ಅಮೃತ ರಕ್ಷಕರು ಎಂದು ಕರೆಯುತ್ತಿದ್ದೇನೆ. ಅದಕ್ಕಾಗಿಯೇ ನೀವು ಒಂದು ರೀತಿಯಲ್ಲಿ ಜನರ ರಕ್ಷಕರು ಮತ್ತು 'ಅಮೃತಕಾಲ'ದ 'ಅಮೃತ ರಕ್ಷಕರು'.ʻಉದ್ಯೋಗ ಮೇಳʼದಡಿ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ
August 28th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಾಗಿ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡವರಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ʻಊದ್ಯೋಗ ಮೇಳʼವವನ್ನು ದೇಶಾದ್ಯಂತ 45 ಸ್ಥಳಗಳಲ್ಲಿ ನಡೆಸಲಾಯಿತು. ಈ ಉದ್ಯೋಗ ಮೇಳ ಕಾರ್ಯಕ್ರಮದ ಮೂಲಕ, ಗೃಹ ಸಚಿವಾಲಯವು ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ(ಸಿಎಪಿಎಫ್) ʻಕೇಂದ್ರ ಮೀಸಲು ಪೊಲೀಸ್ ಪಡೆʼ(ಸಿಆರ್‌ಪಿಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್), ʻಸಶಸ್ತ್ರ ಸೀಮಾ ಬಲ್ʼ(ಎಸ್ಎಸ್‌ಬಿ), ʻಅಸ್ಸಾಂ ರೈಫಲ್ಸ್ʼ, ʻಕೇಂದ್ರ ಕೈಗಾರಿಕಾ ಭದ್ರತಾ ಪಡೆʼ(ಸಿಐಎಸ್ಎಫ್), ʻಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ʼ(ಐಟಿಬಿಪಿ) ಮತ್ತು ʻಮಾದಕವಸ್ತು ನಿಯಂತ್ರಣ ಬ್ಯೂರೋʼ(ಎನ್ಸಿಬಿ) ಹಾಗೂ ದೆಹಲಿ ಪೊಲೀಸ್ ಇಲಾಖೆಗೆ ಸಿಬ್ಬಂದಿಯನ್ನು ನೇಮಕ ಮಾಡುತ್ತಿದೆ. ದೇಶಾದ್ಯಂತದಿಂದ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಯು ಗೃಹ ಸಚಿವಾಲಯದ ಅಡಿಯಲ್ಲಿ ವಿವಿಧ ಸಂಸ್ಥೆಗಳಲ್ಲಿ ಕಾನ್ಸ್‌ಟೆಬಲ್(ಜನರಲ್ ಡ್ಯೂಟಿ), ಸಬ್ ಇನ್ಸ್‌ಪೆಕ್ಟರ್(ಜನರಲ್ ಡ್ಯೂಟಿ) ಮತ್ತು ನಾನ್-ಜನರಲ್ ಡ್ಯೂಟಿ ಕೇಡರ್ ಹುದ್ದೆಗಳಂತಹ ವಿವಿಧ ಹುದ್ದೆಗಳಿಗೆ ಸೇರಲಿದ್ದಾರೆ.