ಬಹು-ರಾಜ್ಯ ಸಹಕಾರಿ ಸಂಘಗಳ ಕಾಯ್ದೆ, 2002ರ (ಎಮ್.ಎಸ್.ಸಿ.ಎಸ್.) ಅಡಿಯಲ್ಲಿ ರಾಷ್ಟ್ರಮಟ್ಟದ ಬಹು-ರಾಜ್ಯ ಸಹಕಾರಿ ಬೀಜ ಸೊಸೈಟಿಯನ್ನು ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ

January 11th, 03:40 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಬಹು ರಾಜ್ಯ ಸಹಕಾರಿ ಸಂಘಗಳ ಕಾಯ್ದೆ, 2002ರ (ಎಮ್.ಎಸ್.ಸಿ.ಎಸ್.) ಅಡಿಯಲ್ಲಿ ರಾಷ್ಟ್ರಮಟ್ಟದ ಬಹು-ರಾಜ್ಯ ಬೀಜ ಸಹಕಾರಿ ಸಂಘವನ್ನು ಸ್ಥಾಪಿಸುವ ಮತ್ತು ಉತ್ತೇಜಿಸುವ ಐತಿಹಾಸಿಕ ನಿರ್ಧಾರಕ್ಕೆ ತನ್ನ ಅನುಮೋದನೆ ನೀಡಿದೆ. ಇದು ಉತ್ಪಾದನೆ, ಸಂಗ್ರಹಣೆ, ಸಂಸ್ಕರಣೆ, ಬ್ರ್ಯಾಂಡಿಂಗ್, ಲೇಬಲ್, ಪ್ಯಾಕೇಜಿಂಗ್, ಸಂಗ್ರಹಣೆ, ಮಾರುಕಟ್ಟೆ ಮತ್ತು ಗುಣಮಟ್ಟದ ಬೀಜಗಳ ವಿತರಣೆ; ವ್ಯೂಹಾತ್ಮಕ ಸಂಶೋಧನೆ ಮತ್ತು ಅಭಿವೃದ್ಧಿ; ಮತ್ತು ಸ್ಥಳೀಯ ನೈಸರ್ಗಿಕ ಬೀಜಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ಒಂದು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿ, ಸಂಬಂಧಿತ ಸಚಿವಾಲಯಗಳು, ವಿಶೇಷವಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐ.ಸಿ.ಎ.ಆರ್) ಮತ್ತು ರಾಷ್ಟ್ರೀಯ ಬೀಜ ನಿಗಮ (ಎನ್.ಎ.ಸ್. ಸಿ) ಗಳ ಬೆಂಬಲದೊಂದಿಗೆ ದೇಶಾದ್ಯಂತ ವಿವಿಧ ಸಹಕಾರ ಸಂಘಗಳ ಮೂಲಕ 'ಸಂಪೂರ್ಣ ಸರ್ಕಾರಿ ವಿಧಾನ'ವನ್ನು ಅನುಸರಿಸಿ ತಮ್ಮ ಯೋಜನೆಗಳು ಮತ್ತು ಏಜೆನ್ಸಿಗಳ ಮೂಲಕ ಅತ್ಯುನ್ನತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.

ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 18th, 10:31 am

ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !

ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 18th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.