ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ

December 16th, 03:26 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.

ಪ್ರಧಾನಮಂತ್ರಿ ಅವರಿಂದ ಬ್ರೆಜಿಲ್ ಅಧ್ಯಕ್ಷರ ಭೇಟಿ

November 20th, 08:05 pm

ರಿಯೊ ಡಿ ಜನೈರೊದಲ್ಲಿ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ನವೆಂಬರ್ 19 ರಂದು ಭೇಟಿಯಾದರು. ಅಧ್ಯಕ್ಷ ಲುಲಾ ಅವರ ಆತಿಥ್ಯಕ್ಕಾಗಿ ಪ್ರಧಾನಮಂತ್ರಿಗಳು ಧನ್ಯವಾದ ಅರ್ಪಿಸಿ ಬ್ರೆಜಿಲ್ನ ಜಿ-20 ಮತ್ತು ಐ ಬಿ ಎಸ್‌ ಎ ಅಧ್ಯಕ್ಷತೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು. ಬಡತನ ಮತ್ತು ಹಸಿವಿನ ವಿರುದ್ಧ ಜಾಗತಿಕ ಒಕ್ಕೂಟವನ್ನು ಸ್ಥಾಪಿಸುವ ಬ್ರೆಜಿಲಿಯನ್ ಉಪಕ್ರಮವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಅದಕ್ಕೆ ಭಾರತದ ದೃಢ ಬೆಂಬಲವನ್ನು ತಿಳಿಸಿದರು. ಜಿ 20 ತ್ರಿ ಸದಸ್ಯ ರಾಷ್ಟ್ರವಾಗಿ, ಜಾಗತಿಕ ದಕ್ಷಿಣದ ಒಳಿತಿಗೆ ಆದ್ಯತೆ ನೀಡಿರುವ ಸುಸ್ಥಿರ ಅಭಿವೃದ್ಧಿ ಮತ್ತು ಜಾಗತಿಕ ಆಡಳಿತ ಸುಧಾರಣೆಯ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ನ ಜಿ 20 ಕಾರ್ಯಸೂಚಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು, ಮುಂದಿನ ವರ್ಷ ಬ್ರಿಕ್ಸ್ ಮತ್ತು ಸಿಒಪಿ 30ರ ಬ್ರೆಜಿಲ್ ನ ನಾಯಕತ್ವಕ್ಕಾಗಿ ಅವರು ಶುಭ ಕೋರಿದರು ಮತ್ತು ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.

ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

October 22nd, 10:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಇಂದು ಕಜಾನ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು. ಈ ವರ್ಷ ಇದು ಅವರ ಎರಡನೇ ಭೇಟಿಯಾಗಿದ್ದು, ಜುಲೈ 2024ರಲ್ಲಿ ನಡೆದ 22ನೇ ವಾರ್ಷಿಕ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಈ ಹಿಂದೆ ಮಾಸ್ಕೋದಲ್ಲಿ ಭೇಟಿಯಾಗಿದ್ದರು.

Prime Minister meets with the President of the Islamic Republic of Iran

October 22nd, 09:24 pm

PM Modi met Iran's President Dr. Masoud Pezeshkian on the sidelines of the 16th BRICS Summit in Kazan. PM Modi congratulated Pezeshkian on his election and welcomed Iran to BRICS. They discussed strengthening bilateral ties, emphasizing the Chabahar Port's importance for trade and regional stability. The leaders also addressed the situation in West Asia, with PM Modi urging de-escalation and protection of civilians through diplomacy.

ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಆರಂಭಿಕ ಹೇಳಿಕೆ (ಅಕ್ಟೋಬರ್ 22, 2024)

October 22nd, 07:39 pm

ನಿಮ್ಮ ಸ್ನೇಹ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರಿಕ್ಸ್ ಶೃಂಗಸಭೆಗಾಗಿ ಕಜಾನ್ ನಂತಹ ಸುಂದರ ನಗರಕ್ಕೆ ಭೇಟಿ ನೀಡುವ ಅವಕಾಶ ದೊರೆತಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ನಗರವು ಭಾರತದೊಂದಿಗೆ ಆಳವಾದ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಕಜನ್ ನಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದರಿಂದ ಈ ಸಂಬಂಧಗಳು ಮತ್ತಷ್ಟು ಬಲಗೊಳ್ಳುತ್ತವೆ.

ರಷ್ಯಾದ ಕಜಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

October 22nd, 01:00 pm

ಪ್ರಧಾನಿ ಮೋದಿ ರಷ್ಯಾದ ಕಜಾನ್‌ಗೆ ಆಗಮಿಸಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಹಲವು ವಿಶ್ವ ನಾಯಕರನ್ನು ಭೇಟಿ ಮಾಡಲಿದ್ದಾರೆ.

ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ಹೊರಡುವ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆ

October 22nd, 07:36 am

ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ಕಜಾನ್ ಗೆ ಎರಡು ದಿನಗಳ ಭೇಟಿಗಾಗಿ ಹೊರಡುತ್ತಿದ್ದೇನೆ.

22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ

July 09th, 09:54 pm

1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷ ಶ್ರೀ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದರು.

January 15th, 06:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾದ ಒಕ್ಕೂಟದ ಅಧ್ಯಕ್ಷ ಎಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

​​​​​​​ರಷ್ಯಾ ಅಧ್ಯಕ್ಷ ಪುಟಿನ್‌ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

August 28th, 06:59 pm

ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಸಂಭಾಷಣೆ ನಡೆಸಿದರು.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

15ನೇ "ಬ್ರಿಕ್ಸ್" ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನ ಮಂತ್ರಿಗಳು

August 23rd, 08:57 pm

ಜಾಗತಿಕ ಆರ್ಥಿಕತೆಯ ಚೇತರಿಕೆ, ಆಫ್ರಿಕಾ ಹಾಗೂ ಜಗತ್ತಿನ ದಕ್ಷಿಣ ರಾಷ್ಟ್ರಗಳ ನಡುವಿನ ಪಾಲುದಾರಿಕೆ ಕುರಿತಂತೆ ನಾಯಕರು ರಚನಾತ್ಮಕ ಸಂವಾದ ನಡೆಸುವ ಜತೆಗೆ ಬ್ರಿಕ್ಸ್‌ನ ಕಾರ್ಯಸೂಚಿಯ ಈವರೆಗಿನ ಪ್ರಗತಿ ಬಗ್ಗೆಯೂ ಪರಿಶೀಲನೆ ನಡೆಸಿದರು.

ಚಂದ್ರಗ್ರಹದ ಮೇಲೆ ಚಂದ್ರಯಾನ-3 ಯಶಸ್ವಿಯಾಗಿ ಇಳಿದ ನಂತರ ಪ್ರಧಾನಮಂತ್ರಿಯವರು ವಿಡಿಯೊ ಸಂವಾದ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ

August 23rd, 07:36 pm

ನಮ್ಮ ಕಣ್ಣೆದುರೇ ಇಂತಹ ಇತಿಹಾಸ ನಿರ್ಮಾಣವಾಗುತ್ತಿರುವುದನ್ನು ಕಂಡಾಗ ಬದುಕು ಧನ್ಯವಾಗುತ್ತದೆ. ಅಂತಹ ಐತಿಹಾಸಿಕ ಘಟನೆಗಳು ರಾಷ್ಟ್ರದ ಪಾಲಿಗೆ ಶಾಶ್ವತ ದಾಖಲೆಯಾಗುತ್ತವೆ. ಈ ಕ್ಷಣ ಅವಿಸ್ಮರಣೀಯ. ಈ ಕ್ಷಣ ಅಭೂತಪೂರ್ವವಾಗಿದೆ. ಈ ಕ್ಷಣ ಅಭಿವೃದ್ಧಿ ಹೊಂದಿದ ಭಾರತದ ವಿಜಯದ ಘೋಷಣೆಯಾಗಿದೆ. ಈ ಕ್ಷಣ ನವ ಭಾರತದ ವಿಜಯೋತ್ಸವ ವಾಗಿದೆ. ಈ ಕ್ಷಣ ಕಷ್ಟಗಳ ಸಾಗರವನ್ನು ದಾಟುವುದಾಗಿದೆ. ಈ ಕ್ಷಣವು ಗೆಲುವಿನ ಹಾದಿಯಲ್ಲಿ ಸಾಗುತ್ತಿದೆ. ಈ ಕ್ಷಣವು 1.4 ಶತಕೋಟಿ ಹೃದಯ ಬಡಿತಗಳ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಷಣವು ಭಾರತದಲ್ಲಿ ಹೊಸ ಶಕ್ತಿ, ಹೊಸ ನಂಬಿಕೆ ಮತ್ತು ಹೊಸ ಪ್ರಜ್ಞೆಯನ್ನು ಸೂಚಿಸುತ್ತದೆ. ಈ ಕ್ಷಣವು ಭಾರತದ ಆರೋಹಣ ಗತಿವಿಧಿಯ ಕರೆಯಾಗಿದೆ. ‘ಅಮೃತ ಕಾಲ’ದ ಅರುಣೋದಯದಲ್ಲಿ ಯಶಸ್ಸಿನ ಮೊದಲ ಬೆಳಕು ಈ ವರ್ಷ ಸುರಿಸಿದೆ. ನಾವು ಭೂಮಿಯ ಮೇಲೆ ಪ್ರತಿಜ್ಞೆ ಮಾಡಿದ್ದೇವೆ ಮತ್ತು ನಾವು ಅದನ್ನು ಚಂದ್ರಗ್ರಹದ ಮೇಲೆ ಪೂರೈಸಿದ್ದೇವೆ. ನಮ್ಮ ವೈಜ್ಞಾನಿಕ ಸಹೋದ್ಯೋಗಿಗಳಿಗೆ ಕೂಡ ಭಾರತವು ಈಗ ಚಂದ್ರದ ಮೇಲಿದೆ ಎಂದು ನಾನು ಹೇಳ ಬಯಸುತ್ತೇನೆ. ಇಂದು ನಾವು ಬಾಹ್ಯಾಕಾಶದಲ್ಲಿ ನವ ಭಾರತದ ಹೊಸ ಹಾರಾಟಕ್ಕೆ ಸಾಕ್ಷಿಯಾಗಿದ್ದೇವೆ.

ಚಂದ್ರಯಾನ 3 ಚಂದ್ರನ ಮೇಲಿಳಿಯುವುದನ್ನು ವೀಕ್ಷಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಸ್ರೋ ತಂಡವನ್ನು ಸೇರಿದ ಪ್ರಧಾನಮಂತ್ರಿ

August 23rd, 06:12 pm

ಇಂದು ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ 3 ಇಳಿಯುವುದನ್ನು ವೀಕ್ಷಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಸ್ರೋ ತಂಡವನ್ನು ಸೇರಿಕೊಂಡರು. ಯಶಸ್ವಿ ಲ್ಯಾಂಡಿಂಗ್ ಆದ ತಕ್ಷಣವೇ ಪ್ರಧಾನಮಂತ್ರಿಯವರು ತಂಡವನ್ನು ಉದ್ದೇಶಿಸಿ ಮಾತನಾಡಿ ಐತಿಹಾಸಿಕ ಸಾಧನೆಗಾಗಿ ಅಭಿನಂದಿಸಿದರು.

ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಭೇಟಿ

August 23rd, 03:05 pm

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಈ ಇಬ್ಬರೂ ನಾಯಕರು ರಕ್ಷಣೆ, ಕೃಷಿ, ವ್ಯಾಪಾರ ಮತ್ತು ಹೂಡಿಕೆ, ಆರೋಗ್ಯ, ಸಂರಕ್ಷಣೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಉಭಯ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಬ್ರಿಕ್ಸ್ ನಾಯಕರ ಬೀಳ್ಕೊಡುಗೆ ಸಭೆಯಲ್ಲಿ ಪ್ರಧಾನಿ ಭಾಗಿ

August 22nd, 11:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 22ರಂದು ಜೋಹಾನ್ಸ್ ಬರ್ಗ್ ನ ಸಮ್ಮರ್ ಪ್ಲೇಸ್ ನಲ್ಲಿ ನಡೆದ ಬ್ರಿಕ್ಸ್ ನಾಯಕರ ಬೀಳ್ಕೊಡುಗೆಯಲ್ಲಿ ಭಾಗವಹಿಸಿದ್ದರು.

ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆ ನಾಯಕರ ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 22nd, 10:42 pm

ನಾವು ದಕ್ಷಿಣ ಆಫ್ರಿಕಾ ನೆಲಕ್ಕೆ ಕಾಲಿಟ್ಟ ತಕ್ಷಣ, ನಮ್ಮ ಕಾರ್ಯಕ್ರಮದ ಪ್ರಾರಂಭವನ್ನು ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆಯ ಮೂಲಕ ಮಾಡಲಾಗುತ್ತಿದೆ ಎಂಬುದು ನನಗೆ ಸಂತೋಷವಾಗಿದೆ.