ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

December 16th, 12:24 pm

ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.

ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ

December 16th, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.

2025ರ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಇಟಲಿಯ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

November 23rd, 09:44 pm

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಈ ವರ್ಷದ ಜೂನ್‌ ನಲ್ಲಿ ಕೆನಡಾದ ಕನನಾಸ್ಕಿಸ್‌ ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಸಂಕ್ಷಿಪ್ತವಾಗಿ ಪರಸ್ಪರ ಸಂವಹನ ನಡೆಸಿದ್ದರು.

22ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣದ ಕನ್ನಡ ಅವತರಣಿಕೆ

October 26th, 02:20 pm

ಗೌರವಾನ್ವಿತ ಪ್ರಧಾನಮಂತ್ರಿ ಹಾಗು ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ,

ಕ್ವಾಲಾಲಂಪುರದಲ್ಲಿ ನಡೆದ 22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

October 26th, 02:06 pm

22ನೇ ಆಸಿಯಾನ್ ಭಾರತ ಶೃಂಗಸಭೆಯು ಅಕ್ಟೋಬರ್ 26, 2025 ರಂದು ನಡೆಯಿತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದರು. ಪ್ರಧಾನಮಂತ್ರಿ ಮತ್ತು ಆಸಿಯಾನ್ ನಾಯಕರು ಜಂಟಿಯಾಗಿ ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಹಾಗು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಪಕ್ರಮಗಳ ಕುರಿತು ಚರ್ಚೆ ನಡೆಸಿದರು. ಇದು ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ 12ನೇ ಬಾರಿಗೆ ಭಾಗವಹಿಸಿರುವುದಾಗಿದೆ.

ಭಾರತ-ಯುಕೆ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 09th, 04:41 pm

ಭಾರತ-ಯುಕೆ ಸಿಇಒಗಳ ವೇದಿಕೆಯ ಇಂದಿನ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲನೆಯದಾಗಿ, ಪ್ರಧಾನ ಮಂತ್ರಿ ಸ್ಟಾರ್ಮರ್ ಅವರ ಅಮೂಲ್ಯ ಆಲೋಚನೆಗಳಿಗಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.

ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

October 09th, 11:25 am

ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಸಂವಾದ

September 26th, 03:00 pm

ಈಗ, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ(ಮುಖ್ಯಮಂತ್ರಿ ಮಹಿಳಾ ಉದ್ಯೋಗ ಯೋಜನೆ) ಆಯ್ದ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ. ಮೊದಲು, ಪಶ್ಚಿಮ ಚಂಪಾರಣ್ ಜಿಲ್ಲೆಯ ರಂಜಿತಾ ಕಾಜಿ ದೀದಿ ಅವರಿಗೆ ತಮ್ಮ ಅನುಭವ ಹಂಚಿಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

September 26th, 02:49 pm

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬುಡಕಟ್ಟು ಮಹಿಳಾ ಫಲಾನುಭವಿ ಶ್ರೀಮತಿ ರಂಜೀತಾ ಕಾಜಿ ಅವರು ತಮ್ಮ ಪ್ರದೇಶದಲ್ಲಿ ತಂದ ಪರಿವರ್ತನಾತ್ಮಕ ಬದಲಾವಣೆಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಜೀವಿಕಾ ಸ್ವಸಹಾಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದ ಅವರು, ಒಂದು ಕಾಲದಲ್ಲಿ ಮೂಲಭೂತ ಮೂಲಸೌಕರ್ಯಗಳಿಂದ ವಂಚಿತವಾಗಿದ್ದ ತಮ್ಮ ಅರಣ್ಯ ಪ್ರದೇಶವು ಈಗ ರಸ್ತೆಗಳು, ವಿದ್ಯುತ್, ನೀರು, ನೈರ್ಮಲ್ಯ ಮತ್ತು ಶಿಕ್ಷಣದ ಪ್ರವೇಶವನ್ನು ಹೊಂದಿದೆ ಎಂದು ಎತ್ತಿ ತೋರಿಸಿದರು. ಸರ್ಕಾರಿ ಉದ್ಯೋಗಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಿರುವ ಮೀಸಲಾತಿ ನಿಬಂಧನೆಗಳು ಸೇರಿದಂತೆ ಮಹಿಳೆಯರ ಮೇಲೆ ಗಮನ ಕೇಂದ್ರೀಕರಿಸಿದ ಉಪಕ್ರಮಗಳಿಗಾಗಿ ಅವರು ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಹುಡುಗಿಯರು ಶಾಲಾ ಸಮವಸ್ತ್ರದಲ್ಲಿ ಸೈಕಲ್ ಸವಾರಿ ಮಾಡುವಾಗ ಅನುಭವಿಸುವ ಹೆಮ್ಮೆಯತ್ತ ಅವರು ಗಮನ ಸೆಳೆದರು, ಸೈಕಲ್ ಮತ್ತು ಸಮವಸ್ತ್ರ ಯೋಜನೆಗಳನ್ನು ಶ್ಲಾಘಿಸಿದರು.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ

September 26th, 11:30 am

ಇಂದು ನವರಾತ್ರಿಯ ಈ ಪವಿತ್ರ ದಿನಗಳಲ್ಲಿ, ಬಿಹಾರದ ಮಹಿಳಾ ಶಕ್ತಿಯೊಂದಿಗೆ ಸಂತೋಷದಿಂದ ಸೇರಲು ನನಗೆ ಅವಕಾಶ ಸಿಕ್ಕಿದೆ. ನಾನು ಇಲ್ಲಿ ಪರದೆಯನ್ನು ನೋಡುತ್ತಿದ್ದೆ, ಲಕ್ಷಾಂತರ ಮಹಿಳೆಯರು ಮತ್ತು ಸಹೋದರಿಯರು ಕಾಣುತ್ತಿದ್ದಾರೆ. ಈ ಪವಿತ್ರ ನವರಾತ್ರಿ ಹಬ್ಬದ ಸಮಯದಲ್ಲಿ ನಿಮ್ಮೆಲ್ಲರ ಆಶೀರ್ವಾದಗಳು ನಮಗೆಲ್ಲರಿಗೂ ದೊಡ್ಡ ಶಕ್ತಿಯಾಗಿದೆ. ನಾನು ಇಂದು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಇಂದಿನಿಂದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ನನಗೆ ತಿಳಿದುಬಂದಂತೆ, ಇಲ್ಲಿಯವರೆಗೆ 75 ಲಕ್ಷ ಸಹೋದರಿಯರು ಈ ಯೋಜನೆಗೆ ಸೇರಿದ್ದಾರೆ. ಈಗ ಈ 75 ಲಕ್ಷ ಸಹೋದರಿಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ಹಣವನ್ನು ಏಕಕಾಲದಲ್ಲಿ ಕಳುಹಿಸಲಾಗಿದೆ.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು

September 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿಯ ಶುಭಾಶಯ ಕೋರಿದರು. ಬಿಹಾರದ ಮಹಿಳೆಯರೊಂದಿಗೆ ಈ ಆಚರಣೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಇಂದು ಪ್ರಾರಂಭಿಸಲಾಗುತ್ತಿದೆ. 75 ಲಕ್ಷ ಮಹಿಳೆಯರು ಈಗಾಗಲೇ ಈ ಉಪಕ್ರಮಕ್ಕೆ ಸೇರಿದ್ದಾರೆ . ಈ 75 ಲಕ್ಷ ಮಹಿಳೆಯರಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ 10,000 ರೂ. ವರ್ಗಾಯಿಸಲಾಗಿದೆ ಎಂದು ಘೋಷಿಸಿದರು.

ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 21st, 06:09 pm

ಶಕ್ತಿಯನ್ನು ಆರಾಧಿಸುವ ಹಬ್ಬವಾದ ನವರಾತ್ರಿ ಇಂದಿನಿಂದ ಪ್ರಾರಂಭವಾಗುತ್ತಿದೆ. ನಿಮ್ಮೆಲ್ಲರಿಗೂ ಶುಭಾಶಯಗಳು! ನವರಾತ್ರಿಯ ಮೊದಲ ದಿನದಿಂದ, ದೇಶವು ಸ್ವಾವಲಂಬಿ ಭಾರತ ಅಭಿಯಾನದತ್ತ ಮತ್ತೊಂದು ಪ್ರಮುಖ ಮತ್ತು ದಿಟ್ಟ ಹೆಜ್ಜೆ ಇಡುತ್ತಿದೆ. ಇಂದು, ಸೆಪ್ಟೆಂಬರ್ 22ರಂದು, ನವರಾತ್ರಿಯ ಮೊದಲ ದಿನ ಸೂರ್ಯೋದಯದೊಂದಿಗೆ, ಹೊಸ ಅಥವಾ ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಜಾರಿಗೆ ಬರುತ್ತಿವೆ. ಒಂದು ರೀತಿಯಲ್ಲಿ, ಇಂದಿನಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಹಬ್ಬ ಆರಂಭವಾಗುತ್ತಿದೆ. ಈ ಜಿಎಸ್ಟಿ ಉಳಿತಾಯ ಹಬ್ಬವು ನಿಮ್ಮ ಉಳಿತಾಯವನ್ನು ಹೆಚ್ಚಿಸುತ್ತದೆ, ನೀವು ಬಯಸುವ ವಸ್ತುಗಳನ್ನು ಹೆಚ್ಚು ಸುಲಭವಾಗಿ ಖರೀದಿಸಲು ಸಾಧ್ಯವಾಗುತ್ತದೆ. ಬಡವರು, ಮಧ್ಯಮ ವರ್ಗದ ಜನರು, ನವ ಮಧ್ಯಮ ವರ್ಗ, ಯುವಕರು, ರೈತರು, ಮಹಿಳೆಯರು, ವರ್ತಕರು, ಉದ್ಯಮಶೀಲರು, ನಮ್ಮ ದೇಶದ ಉದ್ಯಮಿಗಳು, ಪ್ರತಿಯೊಬ್ಬರೂ ಈ ಉಳಿತಾಯ ಹಬ್ಬದಿಂದ ಸಾಕಷ್ಟು ಪ್ರಯೋಜನ ಪಡೆಯುತ್ತಾರೆ. ಇದರರ್ಥ ಈ ಹಬ್ಬದ ಸಮಯದಲ್ಲಿ ಎಲ್ಲರಿಗೂ ತಿನ್ನಲು ಸಿಹಿ ಇರುತ್ತದೆ, ದೇಶದ ಪ್ರತಿಯೊಂದು ಕುಟುಂಬವೂ ಆಶೀರ್ವದಿಸಲ್ಪಡುತ್ತದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಮತ್ತು ಈ ಉಳಿತಾಯ ಹಬ್ಬಕ್ಕಾಗಿ ದೇಶದ ಕೋಟ್ಯಂತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಯಶೋಗಾಥೆಯನ್ನು ವೇಗಗೊಳಿಸುತ್ತವೆ, ವ್ಯವಹಾರ ಮಾಡುವುದನ್ನು ಸುಲಭಗೊಳಿಸುತ್ತವೆ, ಹೂಡಿಕೆಯನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವನ್ನು ಸಮಾನ ಪಾಲುದಾರರನ್ನಾಗಿ ಮಾಡುತ್ತವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು

September 21st, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶಕ್ತಿ ಆರಾಧನೆಯ ಹಬ್ಬವಾದ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ವ್ಯಕ್ತಪಡಿಸಿದ ಅವರು, ನವರಾತ್ರಿಯ ಮೊದಲ ದಿನದಿಂದಲೇ ರಾಷ್ಟ್ರವು ಆತ್ಮನಿರ್ಭರ ಭಾರತ ಅಭಿಯಾನದತ್ತ ಒಂದು ಪ್ರಮುಖ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಸೆಪ್ಟೆಂಬರ್ 22 ರ ಸೂರ್ಯೋದಯದಿಂದ ದೇಶವು ಮುಂದಿನ ಪೀಳಿಗೆಯ ಜಿ ಎಸ್‌ ಟಿ ಸುಧಾರಣೆಗಳನ್ನು ಜಾರಿಗೆ ತರಲಿದೆ. ಇದು ಭಾರತದಾದ್ಯಂತ ಜಿ ಎಸ್‌ ಟಿ ಉಳಿತಾಯ ಉತ್ಸವದ ಆರಂಭವನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಈ ಉತ್ಸವವು ಉಳಿತಾಯವನ್ನು ಹೆಚ್ಚಿಸುತ್ತದೆ ಮತ್ತು ಜನರು ತಮ್ಮ ನೆಚ್ಚಿನ ವಸ್ತುಗಳನ್ನು ಖರೀದಿಸುವುದನ್ನು ಸುಲಭಗೊಳಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಉಳಿತಾಯ ಉತ್ಸವವು ಬಡವರು, ಮಧ್ಯಮ ವರ್ಗ, ನವ-ಮಧ್ಯಮ ವರ್ಗ, ಯುವಜನರು, ರೈತರು, ಮಹಿಳೆಯರು, ಅಂಗಡಿಯವರು, ವ್ಯಾಪಾರಿಗಳು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದರು. ಈ ಹಬ್ಬವು ಪ್ರತಿ ಮನೆಗೆ ಸಂತೋಷ ಮತ್ತು ಸಿಹಿಯನ್ನು ತರುತ್ತದೆ ಎಂದು ಅವರು ಹೇಳಿದರು. ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಮುಂದಿನ ಪೀಳಿಗೆಯ ಜಿ ಎಸ್‌ ಟಿ ಸುಧಾರಣೆಗಳು ಮತ್ತು ಜಿ ಎಸ್‌ ಟಿ ಉಳಿತಾಯ ಉತ್ಸವದ ಶುಭಾಶಯಗಳನ್ನು ಕೋರಿದರು. ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ, ವ್ಯಾಪಾರ ಕಾರ್ಯಾಚರಣೆಗಳನ್ನು ಸರಳಗೊಳಿಸುತ್ತವೆ, ಹೂಡಿಕೆಗಳನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವೂ ಸಮಾನ ಪಾಲುದಾರರಾಗುವುದನ್ನು ಖಚಿತಪಡಿಸುತ್ತವೆ ಎಂದು ಅವರು ಒತ್ತಿ ಹೇಳಿದರು.

ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

September 20th, 11:00 am

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು

September 20th, 10:30 am

ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

September 04th, 05:35 pm

ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

September 04th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ

August 30th, 08:00 am

ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.