Ken-Betwa Link Project will open new doors of prosperity in Bundelkhand region: PM in Khajuraho, MP
December 25th, 01:00 pm
PM Modi inaugurated and laid the foundation stone of multiple development projects in Khajuraho. Highlighting that Shri Vajpayee's government in the past had seriously begun addressing water-related challenges, but were sidelined after 2004, the PM stressed that his government was now accelerating the campaign to link rivers across the country. He added that the Ken-Betwa Link Project is about to become a reality, opening new doors of prosperity in the Bundelkhand region.PM Modi lays foundation stone of Ken-Betwa River Linking National Project in Khajuraho, Madhya Pradesh
December 25th, 12:30 pm
PM Modi inaugurated and laid the foundation stone of multiple development projects in Khajuraho. Highlighting that Shri Vajpayee's government in the past had seriously begun addressing water-related challenges, but were sidelined after 2004, the PM stressed that his government was now accelerating the campaign to link rivers across the country. He added that the Ken-Betwa Link Project is about to become a reality, opening new doors of prosperity in the Bundelkhand region.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.No power can stop the country whose youth is moving ahead with the resolve of Nation First: PM Modi
January 28th, 01:37 pm
Prime Minister Narendra Modi addressed the National Cadet Corps Rally at Cariappa Ground in New Delhi. The PM talked about the steps being taken to strengthen the NCC in the country in a period when the country is moving forward with new resolutions. He elaborated on the steps being taken to open the doors of the defence establishments for girls and women.ಕಾರಿಯಪ್ಪ ಮೈದಾನದಲ್ಲಿ ಎನ್‌ಸಿಸಿ ಪ್ರಧಾನಮಂತ್ರಿ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾರ್ಡ್ ಆಫ್ ಆನರ್ ಅನ್ನು ಪರಿಶೀಲಿಸಿದರು, ಹಾಗೆಯೇ ಎನ್‌ಸಿಸಿ ತುಕಡಿಗಳಿಂದ ಪಥ ಸಂಚಲನವನ್ನು ಪರಾಮರ್ಶಿಸಿದರು ಮತ್ತು ಎನ್‌ಸಿಸಿ ಕೆಡೆಟ್‌ಗಳು ಸೇನಾ ಚಟುವಟಿಕೆ, ಸ್ಲಿಥರಿಂಗ್, ಮೈಕ್ರೋಲೈಟ್ ಫ್ಲೈಯಿಂಗ್, ಪ್ಯಾರಾಸೈಲಿಂಗ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವುದನ್ನು ವೀಕ್ಷಿಸಿದರು. ಅತ್ಯುತ್ತಮ ಕೆಡೆಟ್‌ಗಳು ಪ್ರಧಾನಿಯವರಿಂದ ಪದಕ ಮತ್ತು ಲಾಠಿ(ಅಧಿಕಾರಿಯ ದಂಡ)ಯನ್ನೂ ಪಡೆದರು.ಸಣ್ಣ ಪ್ರಯತ್ನಗಳು ದೊಡ್ಡ ಬದಲಾವಣೆಗಳಿಗೆ ಕಾರಣವಾಗುತ್ತವೆ: ಪ್ರಧಾನಿ ಮೋದಿ
September 26th, 11:30 am
ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ ವಿಶಾಲ ವ್ಯಾಪ್ತಿಯ ವಿಷಯಗಳ ಕುರಿತು ಮಾತನಾಡಿದರು. ಅವರು ನಮ್ಮ ಸಂಸ್ಕೃತಿಯಲ್ಲಿ ನದಿಗಳ ಮಹತ್ವದ ಬಗ್ಗೆ ಮಾತನಾಡಿದರು. ಮಹಾತ್ಮ ಗಾಂಧಿಯವರನ್ನು ಸ್ಮರಿಸುತ್ತಾ, ಪ್ರಧಾನಿ ಮೋದಿ ಸ್ವಚ್ಛತಾ ಕುರಿತು ಆಲೋಚನೆಗಳನ್ನು ಹಂಚಿಕೊಂಡರು, ಸಿಯಾಚಿನ್ ಹಿಮನದಿಯಲ್ಲಿ ದಿವ್ಯಾಂಗಜನ್ ಸೃಷ್ಟಿಸಿದ ವಿಶ್ವ ದಾಖಲೆಯ ಬಗ್ಗೆ ಮಾತನಾಡಿದರು ಮತ್ತು ದೇಶದ ಉದ್ದಗಲಕ್ಕೂ ಹಲವಾರು ಸ್ಫೂರ್ತಿದಾಯಕ ಕಥೆಗಳನ್ನು ಎತ್ತಿ ತೋರಿಸಿದರು. ಪಂ. ಗೆ ಶ್ರೀಮಂತ ಗೌರವ ಸಲ್ಲಿಸುವುದು. ದೀನದಯಾಳ್ ಉಪಾಧ್ಯಾಯ, ಪ್ರಧಾನಿ ಮೋದಿ ಅವರು ಇಂದಿಗೂ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.ವಿಶ್ವ ಪರಿಸರ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು
June 05th, 11:05 am
ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಮೂಲಕ ಭಾರತ ಮತ್ತೊಂದು ಹಾದಿಯನ್ನು ಹಿಡಿದಿದೆ ಎಂದು ಪ್ರಧಾನಿ ಹೇಳಿದರು. 21 ನೇ ಶತಮಾನದ ಭಾರತದ ಪ್ರಮುಖ ಆದ್ಯತೆಗಳಲ್ಲಿ ಎಥೆನಾಲ್ ಕೂಡ ಒಂದಾಗಿದೆ ಎಂದು ಅವರು ಹೇಳಿದರು.ವಿಶ್ವ ಪರಿಸರ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ
June 05th, 11:04 am
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಪುಣೆಯ ರೈತನೊಂದಿಗೆ ಸಂವಾದ ನಡೆಸಿದರು, ಆ ರೈತ ಸಾವಯವ ಕೃಷಿ ಮತ್ತು ಕೃಷಿಯಲ್ಲಿ ಜೈವಿಕ ಇಂಧನ ಬಳಕೆಯ ಅನುಭವವನ್ನು ಪ್ರಧಾನಿವರೊಂದಿಗೆ ಹಂಚಿಕೊಂಡರು.“ಮಳೆಯನ್ನು ಹಿಡಿದಿಡುವ” ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 22nd, 12:06 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.ವಿಶ್ವಜಲ ದಿನದ ಹಿನ್ನೆಲೆ “ ಜಲಶಕ್ತಿ ಅಭಿಯಾನ: ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ಪ್ರಧಾನಮಂತ್ರಿ ಚಾಲನೆ
March 22nd, 12:05 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.ಮಾರ್ಚ್ 22ರಂದು “ಜಲಶಕ್ತಿ ಅಭಿಯಾನ: ಮಳೆಯನ್ನು ಹಿಡಿಯಿರಿ” ಆಂದೋಲನಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
March 21st, 12:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಜಲ ದಿನವಾದ 2021ರ ಮಾರ್ಚ್ 22ರಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಜಲ ಶಕ್ತಿ ಅಭಿಯಾನ: ಮಳೆಯನ್ನು ಹಿಡಿಯಿರಿ’’ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿಗಳ ಸಮಕ್ಷಮದಲ್ಲಿ, ಅಂತರ ನಡಿ ಜೋಡಣೆಯ ರಾಷ್ಟ್ರೀಯ ಸಂಭಾವ್ಯ ಮಹಾಯೋಜನೆಯ ಮೊದಲ ಯೋಜನೆಯಾದ ಕೆನ್ ಬೆಟ್ವಾ ನದಿ ಜೋಡಣಾ ಯೋಜನೆಯ ಅನುಷ್ಠಾನದ ಐತಿಹಾಸಿಕ ಒಪ್ಪಂದಕ್ಕೆ ಕೇಂದ್ರ ಜಲಶಕ್ತಿ ಸಚಿವರು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಸಹಿ ಹಾಕಲಿದ್ದಾರೆ.