ಚಂದ್ರ ಮತ್ತು ಮಂಗಳನ ನಂತರ, ಶುಕ್ರನ ಮೇಲೆ ವೈಜ್ಞಾನಿಕ ಅನ್ವೇಷಣೆಗೆ ಲಕ್ಷ್ಯ ಇರಿಸಿದ ಭಾರತ
September 18th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಶುಕ್ರ ಗ್ರಹದ ಕ್ಷಕ್ಷೆಯ ಅಭಿಯಾನ[ವಿಒಎಂ]ಕ್ಕೆ ಅನುಮೋದನೆ ನೀಡಲಾಗಿದೆ. ಇದು ಚಂದ್ರ ಮತ್ತು ಮಂಗಳವನ್ನು ಮೀರಿ ಶುಕ್ರನನ್ನು ಅನ್ವೇಷಿಸುವ ಮತ್ತು ಅಧ್ಯಯನ ಮಾಡುವ ಸರ್ಕಾರದ ದೃಷ್ಟಿಯತ್ತ ಮಹತ್ವದ ಹೆಜ್ಜೆಯಾಗಿದೆ. ಶುಕ್ರ, ಭೂಮಿಗೆ ಹತ್ತಿರವಿರುವ ಗ್ರಹ ಮತ್ತು ಭೂಮಿಯಂತೆಯೇ ಪರಿಸ್ಥಿತಿಗಳಲ್ಲಿ ರೂಪುಗೊಂಡಿದೆ ಎಂದು ನಂಬಲಾಗಿದೆ, ಗ್ರಹಗಳ ಪರಿಸರವು ಹೇಗೆ ವಿಭಿನ್ನವಾಗಿ ವಿಕಸನಗೊಳ್ಳಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಇದು ಒಂದು ಅನನ್ಯ ಅವಕಾಶವನ್ನು ನೀಡಲಿದೆ.ಪದ್ಮ ಪ್ರಶಸ್ತಿಗಳಿಗೆ ಪ್ರೇರಣಾದಾಯಕ ವ್ಯಕ್ತಿಗಳ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮನವಿ
September 09th, 06:00 pm
ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಭಾರತದ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.ಸವಾಲಿನ ಈ ಸಮಯದಲ್ಲಿ ನಾವೆಲ್ಲರೂ ಕೇರಳದ ಜನರೊಂದಿಗೆ ನಿಲ್ಲುವೆವು – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 10:58 pm
ವಯನಾಡಿನಲ್ಲಿ ಭೂಕುಸಿತದಲ್ಲಿ ಬಾಧಿತರಾದವರಿಗೆ ಎಲ್ಲಾ ಸಾಧ್ಯ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿರುವ ಪ್ರಧಾನಮಂತ್ರಿಗಳು, “ವಯನಾಡಿನ ಭೂಕುಸಿತ ದುರಂತದಿಂದ ನಮ್ಮೆಲ್ಲರಿಗೂ ದುಃಖವಾಗಿದೆ. ದುರಂತ ಸಂಭವಿಸಿದಾಗಿನಿಂದ, ನಾನು ಪರಿಸ್ಥಿತಿಯ ಬಗ್ಗೆ ನಿಕಟ ನಿಗಾ ವಹಿಸಿದ್ದೇನೆ. ಬಾಧಿತರಿಗೆ ನೆರವು ನೀಡಲು ಎಲ್ಲಾ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ. ಇಂದು ನಾನು ಅಲ್ಲಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಿದ್ದೇನೆ. ನಾನು ವೈಮಾನಿಕ ಸಮೀಕ್ಷೆಯನ್ನೂ ಕೈಗೊಂಡೆನು” ಎಂದು ಹೇಳಿದ್ದಾರೆ.ಕೇರಳದ ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
August 10th, 07:40 pm
ಈ ದುರಂತದ ಬಗ್ಗೆ ನಾನು ಮೊದಲು ತಿಳಿದಾಗಿನಿಂದ, ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕೇಂದ್ರ ಸರ್ಕಾರದ ಎಲ್ಲಾ ಸಂಬಂಧಿತ ಇಲಾಖೆಗಳನ್ನು ವಿಳಂಬವಿಲ್ಲದೆ ಸಜ್ಜುಗೊಳಿಸುವುದು ಕಡ್ಡಾಯವಾಗಿದೆ ಮತ್ತು ಈ ದುರಂತ ಘಟನೆಯಿಂದ ಬಾಧಿತರಾದವರನ್ನು ಬೆಂಬಲಿಸುವ ನಮ್ಮ ಪ್ರಯತ್ನಗಳಲ್ಲಿ ನಾವು ಒಂದಾಗಿದ್ದೇವೆ.ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ, ಪರಿಹಾರ ಕಾರ್ಯಗಳಲ್ಲಿ ನೆರವು ನೀಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ
August 10th, 07:36 pm
ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಬಾಧಿತರಾದವರಿಗೆ ನಮ್ಮ ಪ್ರಾರ್ಥನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ ಮತ್ತು ಪರಿಹಾರ ಕಾರ್ಯದಲ್ಲಿ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದಾರೆ. ಪರಿಹಾರ ಕಾರ್ಯ ಮತ್ತು ಎಲ್ಲಾ ನೆರವನ್ನು ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಇಂದು ಕೇರಳದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಭೂಕುಸಿತದಿಂದ ಬಾಧಿತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.