ಆಂಧ್ರಪ್ರದೇಶದಲ್ಲಿಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪಿಸಲು ಸಂಪುಟದ ಅನುಮೋದನೆ
May 16th, 04:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ,‘ಆಂಧ್ರಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯ’ದ ಹೆಸರಿನಲ್ಲಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಜಂತಲೂರು ಗ್ರಾಮದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ತನ್ನ ತಾತ್ವಿಕ ಒಪ್ಪಿಗೆ ನೀಡಿದೆ. ಸದರಿ ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ಪ್ರಥಮ ಚರಣದ ವೆಚ್ಚವನ್ನು ಭರಿಸಲು 450 ಕೋಟಿ ರೂಪಾಯಿಗಳ ನಿಧಿಗೂ ಅನುಮೋದನೆ ನೀಡಲಾಗಿದೆ.