ಮಾಜಿ ಪ್ರಧಾನಿ ಚಂದ್ರಶೇಖರ್ ಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 17th, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅವರ ಬದ್ಧತೆ ಮತ್ತು ಬಡತನ ನಿರ್ಮೂಲನೆ ಮಾಡುವ ಪ್ರಯತ್ನಗಳಿಗಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟ ಚಂದ್ರ ಶೇಖರ್ ಜೀ ಅವರದ್ದು ಶ್ರೇಷ್ಠ ವ್ಯಕ್ತಿತ್ವ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ

March 12th, 03:21 pm

ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.

“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 12th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

March 12th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

PM’s speech at book release on former PM Chandra Shekhar

July 24th, 05:18 pm

PM Narendra Modi today released the book, “Chandra Shekhar: The Last Icon of Ideological Politics”, based on the former Prime Minister. Remembering Chandra Shekhar Ji, PM Modi said, “It has been 12 years since he passed away but the thoughts of Chandra Shekhar Ji continue to guide us. They are as vibrant today as they were earlier.” The PM also shared several instances of his interaction with Chandra Shekhar Ji.

ಪ್ರಧಾನ ಮಂತ್ರಿ ಅವರಿಂದ “ ಚಂದ್ರಶೇಖರ್- ಸೈದ್ದಾಂತಿಕ ರಾಜಕಾರಣದ ಕೊನೆಯ ಪ್ರತಿಕೃತಿ” ಪುಸ್ತಕ ಅನಾವರಣ

July 24th, 05:17 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು “ ಚಂದ್ರಶೇಖರ್- ಸೈದ್ದಾಂತಿಕ ರಾಜಕಾರಣದ ಕೊನೆಯ ಪ್ರತಿಕೃತಿ” ಪುಸ್ತಕವನ್ನು ಬಿಡುಗಡೆ ಮಾಡಿದರು. ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ ಮತ್ತು ಶ್ರೀ ರವಿ ದತ್ತಾ ಬಾಜಪೇಯಿ ಅವರು ಈ ಪುಸ್ತಕವನ್ನು ಬರೆದಿದ್ದಾರೆ. ಸಂಸತ್ತಿನ ಗ್ರಂಥಾಲಯ ಕಟ್ಟಡದ ಬಾಲಯೋಗಿ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು.