ಶ್ರೀನಗರದಲ್ಲಿ ನಡೆದ “ಯುವಜನರ ಸಬಲೀಕರಣ ಮತ್ತು ಜೆ ಅಂಡ್ ಕೆ ಪರಿವರ್ತನೆ’’ ಕಾರ್ಯಕ್ರಮನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 20th, 07:00 pm
ಜಮ್ಮು ಮತ್ತು ಕಾಶ್ಮೀರದ ಲೆಫ್ಸಿನೆಂಟ್ ಗೌರ್ನರ್ ಶ್ರೀ ಮನೋಜ್ ಸಿನ್ಹಾಜಿ, ನನ್ನ ಸಂಪುಟದ ಸಹೋದ್ಯೋಗಿ ಶ್ರೀ ಪ್ರತಾಪ್ ರಾವ್ ಜಾದವ್ ಜಿ, ಇತರ ಗಣ್ಯರೇ ಮತ್ತು ಜಮ್ಮು ಮತ್ತು ಕಾಶ್ಮೀರದಾದ್ಯಂತ ಇರುವ ನನ್ನ ಯುವ ಸ್ನೇಹಿತರೇ ಹಾಗೂ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರೇ..!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್.ಕೆ.ಐ.ಸಿ.ಸಿ.) ನಲ್ಲಿ ನಡೆದ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆ, ನೀರು ಸರಬರಾಜು ಮತ್ತು ಉನ್ನತ ಶಿಕ್ಷಣದಲ್ಲಿ ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡ 1,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 1,800 ಕೋಟಿ ರೂ.ಗಳ ಕೃಷಿ ಮತ್ತು ಸಂಬಂಧಿತ ವಲಯಗಳ ಯೋಜನೆಯಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ ಯೋಜನೆಗೆ (ಜೆಕೆಸಿಐಪಿ) ಅವರು ಚಾಲನೆ ನೀಡಿದರು. ಶ್ರೀ ನರೇಂದ್ರ ಮೋದಿ ಅವರು 200 ಹೊಸ ಸರ್ಕಾರಿ ನೇಮಕಾತಿದಾರರಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಕೇಂದ್ರಾಡಳಿತ ಪ್ರದೇಶದ ಯುವ ಸಾಧಕರೊಂದಿಗೆ ಸಂವಾದ ನಡೆಸಿದರು.ಹರ್ ಘರ್ ತಿರಂಗಾ ಆಂದೋಲನ ಕುರಿತಂತೆ ಉತ್ಸಾಹದ ದೃಷ್ಟಾಂತಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
August 14th, 02:34 pm
ದೇಶಾದ್ಯಂತ ಹರ್ ಘರ್ ತಿರಂಗಾ ಆಂದೋಲನವನ್ನು ಆಚರಿಸಿದ ವಿವಿಧ ಉದಾಹರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಚಿನಾಬ್ ನದಿಗೆ ಅಡ್ಡಲಾಗಿ ಕಮಾನು ಆಕಾರದಲ್ಲಿ ವಿಶ್ವದ ಅತಿ ಎತ್ತರದ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಕ್ಕೆ ಪ್ರಧಾನಮಂತ್ರಿ ಶ್ಲಾಘನೆ
April 05th, 08:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೆ, ಚಿನಾಬ್ ನದಿಗೆ ಅಡ್ಡಲಾಗಿ ವಿಶ್ವದ ಅತಿ ಎತ್ತರದ ಕಮಾನು ಆಕಾರದ ಸೇತುವೆ ನಿರ್ಮಾಣ ಪೂರ್ಣಗೊಳಿಸಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪ್ರಮುಖ ಮೂಲಸೌಕರ್ಯ ವಲಯಗಳ ನಿರ್ವಹಣೆಯನ್ನು ಪ್ರಧಾನಿ ಪರಿಶೀಲಿಸಿದರು
April 26th, 12:25 pm
ರಸ್ತೆಗಳು, ರೈಲುಗಳು, ವಿಮಾನ ನಿಲ್ದಾಣಗಳು, ಬಂದರುಗಳು, ಡಿಜಿಟಲ್ ಮತ್ತು ಕಲ್ಲಿದ್ದಲು ಸೇರಿದಂತೆ ಪ್ರಮುಖ ಮೂಲಸೌಕರ್ಯ ಕ್ಷೇತ್ರಗಳ ಪ್ರಗತಿಯನ್ನು ನರೇಂದ್ರ ಮೋದಿ ಪರಿಶೀಲಿಸಿದರು . ಹೋಸ್ಟ್ ಯೋಜನೆಗಳಲ್ಲಿ ಗಮನಾರ್ಹ ಸುಧಾರಣೆ ಮಾಡಲಾಗಿದೆ . ಪ್ರಧಾನಿ ಗ್ರಾಮೀಣ ರಸ್ತೆ ನಿರ್ಮಾಣ ಮತ್ತು ಅದರ ಗುಣಮಟ್ಟವನ್ನು ಸಮರ್ಥ ಮತ್ತು ಕಠಿಣ ಮೇಲ್ವಿಚಾರಣೆಯನ್ನು ನಿರ್ದೇಶಿಸಿದ್ದಾರೆ .ಪ್ರಧಾನಿ ಮೋದಿ ರಸ್ತೆ ನಿರ್ಮಾಣದಲ್ಲಿ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವಂತೆ ನಿರ್ದೇಶಿಸಿದ್ದಾರೆ.