ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 10:20 am

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಂತ ಪೂಜ್ಯ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಮಹಂತ್ ನೃತ್ಯ ಗೋಪಾಲ್ ದಾಸ್ ಜಿ, ಇಲ್ಲಿಗೆ ಆಗಮಿಸಿರುವ ದೇಶದ ಕೋಟ್ಯಂತರ ಭಕ್ತಾದಿಗಳೆ, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಇಡೀ ಜಗತ್ತು, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು

November 25th, 10:13 am

ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಮತ್ತೊಂದು ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇಂದು ಇಡೀ ಭಾರತ ಮತ್ತು ಇಡೀ ಜಗತ್ತು ಭಗವಾನ್ ಶ್ರೀ ರಾಮನ ಚೈತನ್ಯದಿಂದ ತುಂಬಿದೆ ಎಂದು ಶ್ರೀ ಮೋದಿ ತಿಳಿಸಿದರು, ಪ್ರತಿಯೊಬ್ಬ ರಾಮ ಭಕ್ತನ ಹೃದಯದಲ್ಲಿ ಅನನ್ಯ ತೃಪ್ತಿ, ಅಪರಿಮಿತ ಕೃತಜ್ಞತೆ ಮತ್ತು ಅಪಾರವಾದ ಅಲೌಕಿಕ ಸಂತೋಷವಿದೆ ಎಂದು ಎತ್ತಿ ತೋರಿಸಿದರು. ಶತಮಾನಗಳಷ್ಟು ಹಳೆಯದಾದ ಗಾಯಗಳು ವಾಸಿಯಾಗುತ್ತಿವೆ, ಶತಮಾನಗಳ ನೋವು ಕೊನೆಗೊಳ್ಳುತ್ತಿದೆ ಮತ್ತು ಶತಮಾನಗಳ ಸಂಕಲ್ಪ ಇಂದು ಈಡೇರುತ್ತಿದೆ ಎಂದು ಅವರು ಹೇಳಿದರು. ಇದು 500 ವರ್ಷಗಳ ಕಾಲ ಬೆಂಕಿ ಹೊತ್ತಿಕೊಂಡ ಯಜ್ಞದ ಪರಾಕಾಷ್ಠೆಯನ್ನು ಸೂಚಿಸುತ್ತದೆ ಎಂದು ಅವರು ಘೋಷಿಸಿದರು, ನಂಬಿಕೆಯಲ್ಲಿ ಎಂದಿಗೂ ಅಲುಗಾಡದ, ಒಂದು ಕ್ಷಣವೂ ನಂಬಿಕೆಯಲ್ಲಿ ಮುರಿಯದ ಯಜ್ಞ. ಇಂದು ಭಗವಾನ್ ಶ್ರೀ ರಾಮನ ಗರ್ಭಗುಡಿಯ ಅನಂತ ಶಕ್ತಿ ಮತ್ತು ಶ್ರೀ ರಾಮನ ಕುಟುಂಬದ ದೈವಿಕ ವೈಭವವನ್ನು ಈ ಧರ್ಮ ಧ್ವಜದ ರೂಪದಲ್ಲಿ ಅತ್ಯಂತ ದೈವಿಕ ಮತ್ತು ಭವ್ಯವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು.

Bihar has defeated lies and upheld the truth: PM Modi from BJP HQ post NDA’s major victory

November 14th, 07:30 pm

PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.

After NDA’s landslide Bihar victory, PM Modi takes the centre stage at BJP HQ

November 14th, 07:00 pm

PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.

ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

October 20th, 10:30 am

ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.

PM Modi celebrates Diwali on board the INS Vikrant

October 20th, 10:00 am

In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.

ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 14th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ರ ಸುಮಾರಿಗೆ ನಂದ್ಯಾಳ ಜಿಲ್ಲೆಯ ಶ್ರೀಶೈಲಂನ ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:15 ರ ಸುಮಾರಿಗೆ ಅವರು ಶ್ರೀಶೈಲಂನ ಶ್ರೀ ಶಿವಾಜಿ ಸ್ಪೂರ್ಣಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 08th, 03:44 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್‌ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ

October 08th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 29th, 05:32 pm

ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.

ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

July 29th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ 'ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳು' ಶಾಸನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

July 12th, 09:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದ್ದಾರೆ.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ನಮ್ಮ ಭಾಷೆ ನಮ್ಮ ಸಂಸ್ಕೃತಿಯ ವಾಹಕ: ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನಿ ಮೋದಿ

February 21st, 05:00 pm

ಪ್ರಧಾನಿ ಮೋದಿ ನವದೆಹಲಿಯಲ್ಲಿ 98 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ನೇ ವಾರ್ಷಿಕೋತ್ಸವ, ಪುಣ್ಯಶ್ಲೋಕ್ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಯತ್ನಗಳಿಂದ ರಚಿಸಲಾದ ನಮ್ಮ ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ವೀಕ್ಷಿಸುತ್ತಿರುವ ಮಹತ್ವದ ಸಮಯದಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದು ಶ್ರೀ ಮೋದಿ ಎತ್ತಿ ತೋರಿಸಿದರು.

98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 21st, 04:30 pm

1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ

February 19th, 09:36 am

ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.