ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.ಪ್ರಧಾನಿ ಮೋದಿಯವರಿಂದ ಗುಜರಾತ್‌ನ ಕೆವಾಡಿಯಾದಲ್ಲಿ ಆರೋಗ್ಯ ವನ, ಆರೋಗ್ಯ ಕುಟೀರ, ಏಕ್ತಾ ಮಾಲ್ ಮತ್ತು ಮಕ್ಕಳ ಪೌಷ್ಠಿಕಾಂಶ ಉದ್ಯಾನಗಳ ಉದ್ಘಾಟನೆ
October 30th, 03:11 pm
ಗುಜರಾತ್‌ನಲ್ಲಿ ಕೆವಾಡಿಯಾದ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು.