ನಾಯಕರು ಮತ್ತು ಯೋಧರಿಗೆ ಗೌರವ ನೀಡದ ಇತಿಹಾಸದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ: ಪ್ರಧಾನಮಂತ್ರಿ

February 16th, 02:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶ ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಾ ಸಾಗಿದ್ದೇವೆ. ಈ ವೇಳೆ ದೇಶಕ್ಕಾಗಿ ಅಪ್ರತಿಮ ಕೊಡುಗೆಯನ್ನು ನೀಡಿರುವ ಐತಿಹಾಸಿಕ ನಾಯಕರು ಮತ್ತು ನಾಯಕಿಯರ ಕೊಡುಗೆಗಳನ್ನು ಸ್ಮರಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಹಾರಾಜ ಸುಹೆಲ್‌ದೇವ್ ಸ್ಮಾರಕ ಮತ್ತು ಚಿತ್ತೌರಾ ಸರೋವರದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ

February 16th, 11:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ

February 16th, 11:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾರಾಜ ಸುಹೆಲ್‌ದೇವ್ ಸ್ಮಾರಕ ಮತ್ತು ಚಿತ್ತೌರಾ ಸರೋವರದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

February 14th, 11:58 am

ಪ್ರಧಾನಿಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಫೆಬ್ರವರಿ 16 ರಂದು ಬೆಳಗ್ಗೆ 11:00 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ಮತ್ತು ಚಿತ್ತೌರ ಸರೋವರದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉತ್ತರ ಪ್ರದೇಶದ ಬಹ್ರೇಚ್‌ ನಲ್ಲಿ ಮಹಾರಾಜ ಸುಹೆಲ್‌ದೇವ್ ಅವರ ಜನ್ಮ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಉಪಸ್ಥಿತರಿರುತ್ತಾರೆ.