​​​​​​​ಗೋವಾದಲ್ಲಿ ನಡೆದ ಭಾರತ ಇಂಧನ ಸಪ್ತಾಹ 2024 ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ

February 06th, 12:00 pm

ಇದು ಭಾರತ ಇಂಧನ ಸಪ್ತಾಹದ ಎರಡನೇ ಆವೃತ್ತಿ, ನಾನು ನಿಮ್ಮೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇದು ಕ್ರಿಯಾಶೀಲ ಶಕ್ತಿಗೆ ಹೆಸರಾದ ರಾಜ್ಯ ಗೋವಾದಲ್ಲಿ ನಡೆಯುತ್ತಿರುವುದು ನನಗೆ ಅತೀವ ಆನಂದ ತಂದಿದೆ. ತನ್ನ ಆತಿಥ್ಯಕ್ಕೆ ಹೆಸರುವಾಸಿಯಾದ ಗೋವಾ ತನ್ನ ಶ್ರೀಮಂತ ಸೌಂದರ್ಯ ಮತ್ತು ಸಂಸ್ಕೃತಿಯಿಂದಾಗಿ ಜಗತ್ತಿನೆಲ್ಲೆಡೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರಸ್ತುತ ಗೋವಾ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ದರಿಂದ, ಪರಿಸರ ಪ್ರಜ್ಞೆ ಮತ್ತು ಸುಸ್ಥಿರ ಭವಿಷ್ಯವನ್ನು ಚರ್ಚಿಸಲು ನಾವು ಸಭೆ ನಡೆಸುತ್ತಿರುವಾಗ, ಗೋವಾ ಒಂದು ಸೂಕ್ತ ಸ್ಥಳವಾಗಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಮ್ಮ ಗೌರವಾನ್ವಿತ ವಿದೇಶಿ ಅತಿಥಿಗಳು ಜೀವಮಾನವಿಡೀ ಗೋವಾದ ಅಚ್ಚುಮೆಚ್ಚಿನ ನೆನಪುಗಳನ್ನು ತಮ್ಮೊಂದಿಗೆ ಒಯ್ಯುತ್ತಾರೆಂಬ ವಿಶ್ವಾಸ ನನಗಿದೆ

​​​​​​​ಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಮಂತ್ರಿ

February 06th, 11:18 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿಂದು “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮ ಉದ್ಘಾಟಿಸಿದರು. “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮವು ಭಾರತದ ಅತಿ ದೊಡ್ಡ ಮತ್ತು ಎಲ್ಲವನ್ನು ಒಳಗೊಂಡಿರುವ ಇಂಧನ ಪ್ರದರ್ಶನ ಮತ್ತು ಸಮ್ಮೇಳನವಾಗಿದ್ದು, ಭಾರತದ ಇಂಧನ ಪರಿವರ್ತನೆಯ ಗುರಿಗಳನ್ನು ವೇಗಗೊಳಿಸಲು ಸಂಪೂರ್ಣ ಇಂಧನ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಪ್ರಧಾನ ಮಂತ್ರಿ ಅವರು ಜಾಗತಿಕ ಮಟ್ಟದ ತೈಲ ಮತ್ತು ಅನಿಲ ಕ್ಷೇತ್ರದ ಸಿಇಒಗಳು ಮತ್ತು ತಜ್ಞರೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.

PM Modi interacts with the Indian community in Paris

July 13th, 11:05 pm

PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.

ಹೊಸ ಸ್ಕ್ರ್ಯಾಪ್ಪಿಂಗ್ ನೀತಿಯು ಸಂಪತ್ತಿನ ತ್ಯಾಜ್ಯ ಮತ್ತು ಪಠ್ಯಕ್ರಮದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಕೊಂಡಿಯಾಗಿದೆ: ಪ್ರಧಾನಿ ಮೋದಿ

August 13th, 11:01 am

ರಾಷ್ಟ್ರೀಯ ಆಟೋಮೊಬೈಲ್ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಾರಂಭಿಸುವಾಗ, ಪ್ರಧಾನಿ ಮೋದಿ ಈ ನೀತಿಯು ಆಟೋ ಕ್ಷೇತ್ರಕ್ಕೆ ಮತ್ತು ಹೊಸ ಭಾರತದ ಚಲನಶೀಲತೆಗೆ ಹೊಸ ಗುರುತನ್ನು ನೀಡಲಿದೆ ಎಂದು ಹೇಳಿದರು. ಅವರು ಹೇಳಿದರು, ಚಲನಶೀಲತೆಯಲ್ಲಿ ಆಧುನಿಕತೆ, ಪ್ರಯಾಣ ಮತ್ತು ಸಾರಿಗೆಯ ಹೊರೆಯನ್ನು ಕಡಿಮೆ ಮಾಡುವುದು ಮಾತ್ರವಲ್ಲ, ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. 21 ನೇ ಶತಮಾನದ ಭಾರತವು ಸ್ವಚ್ಛ, ದಟ್ಟಣೆ ಮುಕ್ತ ಮತ್ತು ಅನುಕೂಲಕರ ಚಲನಶೀಲತೆಯ ಗುರಿಯಾಗಿದೆ, ಇದು ಇಂದಿನ ಅಗತ್ಯ .

ಗುಜರಾತ್ ನ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಹೂಡಿಕೆದಾರರ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮ ಅಥವಾ ವಾಹನ ಗುಜರಿ ನೀತಿಯಡಿಯಲ್ಲಿ ವಾಹನ ಗುಜರಿ ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆಯನ್ನು ಆಯೋಜಿಸಲಾಗಿತ್ತು. ಅಲ್ಲದೆ ಅಲ್ಲಂಗ್ ನಲ್ಲಿ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಹಡಗು ಒಡೆಯುವ ಉದ್ಯಮದ ಜತೆ ಸಮನ್ವಯ ಸಾಧಿಸುವುದಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹಾಗೂ ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಪ್ರಧಾನ ಮಂತ್ರಿ

August 13th, 10:22 am

ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಆಗಸ್ಟ್ 13ರಂದು ಗುಜರಾತ್ ನ ಹೂಡಿಕೆದಾರರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ

August 11th, 09:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಗುಜರಾತ್ನಲ್ಲಿ ನಡೆಯಲಿರುವ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ವಾಹನ ಗುಜರಿ(ನಿರುಪಯುಕ್ತಗೊಳಿಸುವುದು) ನೀತಿ ಅಥವಾ ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮದಡಿ ವಾಹನ ಗುಜರಿ (ಸ್ಕ್ರಾಪಿಂಗ್ ) ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆ ಆಯೋಜಿಸಲಾಗಿದೆ. ಅಲ್ಲದೆ ಅಲಾಂಗ್ ನಲ್ಲಿ ಹಡಗುಗಳನ್ನು ಒಡೆಯುವ ಉದ್ಯಮದ ಜೊತೆಗೆ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಸಮನ್ವಯ ಸಾಧಿಸಲು ಒತ್ತು ನೀಡಲಾಗುವುದು.