Prime Minister urges the Indian Diaspora to participate in Bharat Ko Janiye Quiz
November 23rd, 09:15 am
The Prime Minister Shri Narendra Modi today urged the Indian Diaspora and friends from other countries to participate in Bharat Ko Janiye (Know India) Quiz. He remarked that the quiz deepens the connect between India and its diaspora worldwide and was also a wonderful way to rediscover our rich heritage and vibrant culture.Tune in to hear Mann Ki Baat on 24th November 2024
November 23rd, 09:00 am
Prime Minister, Shri Narendra Modi will share his thoughts on a number of themes and issues in Mann Ki Baat on Sunday at 11 AM. Tune in to hear 'Mann Ki Baat' live on Narendra Modi App.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
November 05th, 01:28 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ನವೆಂಬರ್ 24ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.ಅಕ್ಟೋಬರ್ 27 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
October 26th, 09:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
October 05th, 04:49 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಕ್ಟೋಬರ್ 27ರಂದು 'ಮನ್ ಕಿ ಬಾತ್' ಹಂಚಿಕೊಳ್ಳಲಿದ್ದಾರೆ. ನೀವು ನವೀನ ಆಲೋಚನೆಗಳು ಮತ್ತು ಸಲಹೆಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನ ಮಂತ್ರಿಯೊಂದಿಗೆ ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ. ಕೆಲವು ಸಲಹೆಗಳನ್ನು ಪ್ರಧಾನಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.ದೆಹಲಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಯುವಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ಅನುವಾದ
October 02nd, 04:45 pm
ಇದರಿಂದ ರೋಗಗಳನ್ನು ತಡೆಗಟ್ಟಲು ಸಹಾಯಕವಾಗುತ್ತದೆ, ಮತ್ತು ನಾವು ಯಾವಾಗಲೂ ಸ್ವಚ್ಛವಾಗಿರುತ್ತೇವೆ. ಇದಲ್ಲದೆ, ನಮ್ಮ ದೇಶವು ಸ್ವಚ್ಛವಾಗಿದ್ದರೆ, ಪರಿಸರವನ್ನು ಅಚ್ಚುಕಟ್ಟಾಗಿಡುವ ಮಹತ್ವವನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ.ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
October 02nd, 10:15 am
ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು
October 02nd, 10:10 am
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು
October 02nd, 09:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ರಾಷ್ಟ್ರದ ಯುವಕರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಇಂದು ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದರು, ಆ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಬಲಪಡಿಸಿದರು.ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ
September 30th, 08:59 pm
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.29ನೇ ಸೆಪ್ಟೆಂಬರ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
September 28th, 09:30 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.ಶಿಶು ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ವಚ್ಛ ಭಾರತ ಅಭಿಯಾನದ ಪರಿಣಾಮವನ್ನು ಎತ್ತಿ ಹಿಡಿಯುವ ವೈಜ್ಞಾನಿಕ ವರದಿಯನ್ನು ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 05th, 04:11 pm
ಇಂದು ದೇಶದಲ್ಲಿ ಶಿಶು ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ವಚ್ಛ ಭಾರತ ಅಭಿಯಾನದಂತಹ ಪ್ರಯತ್ನಗಳ ಪರಿಣಾಮವನ್ನು ಎತ್ತಿ ತೋರಿಸುವ ವೈಜ್ಞಾನಿಕ ವರದಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
September 05th, 04:06 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಸೆಪ್ಟೆಂಬರ್ 29ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.BJP's Rashtriya Sadasyata Abhiyan is to strengthen the country: PM Modi
September 02nd, 05:15 pm
Prime Minister Narendra Modi attended and addressed the BJP Rashtriya Sadasyta Abhiyan at BJP headquarters in New Delhi. He emphasized the party’s ongoing commitment to fostering a new political culture in India.PM Modi addresses BJP Rashtriya Sadasyta Abhiyan at BJP Headquarter
September 02nd, 05:00 pm
Prime Minister Narendra Modi attended and addressed the BJP Rashtriya Sadasyta Abhiyan at BJP headquarters in New Delhi. He emphasized the party’s ongoing commitment to fostering a new political culture in India.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024ರ ತಂಡಕ್ಕೆ ಶುಭ ಹಾರೈಸಿರುವ 140 ಕೋಟಿ ಭಾರತೀಯರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
August 28th, 09:47 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ. ಕ್ರೀಡಾಪಟುಗಳ ಧೈರ್ಯ ಮತ್ತು ದೃಢನಿಶ್ಚಯವನ್ನು ಶ್ಲಾಘಿಸಿದ ಅವರು, 140 ಕೋಟಿ ಭಾರತೀಯರು ಅವರ ಯಶಸ್ಸಿಗೆ ಶುಭ ಹಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.